ಮೈಸೂರು ನಗರ

ಮೈಸೂರಲ್ಲಿ ರೇವ್‌ ಪಾರ್ಟಿ: ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

ಮೈಸೂರು: ನಗರದ ಹೊರವಲಯದಲ್ಲಿ ರೇವ್‌ ಪಾರ್ಟಿ ನಡೆಸಿದ್ದ ಸ್ಥಳಕ್ಕೆ ಪೊಲೀಸರು ದಾಳಿ ಮಾಡಿ, ಯುವತಿಯರು ಸೇರಿದಂತೆ 50ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಸದ್ಯ ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ನಗರದಲ್ಲಿ ನಡೆದಿರುವ ರೇವ್‌ ಪಾರ್ಟಿಯ ಬಗ್ಗೆ ಎಸ್‌.ಪಿ ವಿಷ್ಣುವರ್ಧನ್‌ ಮಾಹಿತಿ ನೀಡಿದ್ದಾರೆ. ಕಾನೂನು ರೀತ್ಯ ಪೊಲೀಸರು ತನಿಖೆ ನಡೆಸಿ ಕ್ರಮ ತೆಗೆದುಕೊಳ್ಳುತ್ತಾರೆ. ಪಾರ್ಟಿ ಆಯೋಜಕರು ಈ ಬಗ್ಗೆ ಯಾವುದೇ ಅನುಮತಿ ಪಡೆದಿರಲಿಲ್ಲ. ಎಲ್ಲಾ ಆಯಾಮದಲ್ಲಿ ತನಿಖೆ ನಡೆಸಿ ಪೊಲೀಸರು ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ವರದಿ ಬಂದ ಬಳಿಕ ಕ್ರಮ

ಇನ್ನೂ ಎಸ್‌.ಪಿ ವಿಷ್ಣುವರ್ಧನ್‌ ಮಾತನಾಡಿ, ಪಾರ್ಟಿಯಲ್ಲಿ ಯಾವುದೇ ಮಾದಕ ದ್ರವ್ಯ ಸಿಕ್ಕಿಲ್ಲ. ಸ್ಥಳದಲ್ಲಿ ಮದ್ಯ, ಸಿಗರೇಟ್‌ ಸಿಕ್ಕಿದೆ. ವಿದೇಶಿಗರು ಪಾರ್ಟಿಯಲ್ಲಿ ಭಾಗಿಯಾಗಿರುವ ಬಗ್ಗೆ ಮಾಧ್ಯಮದವರು ಮಾಹಿತಿ ನೀಡಿದ್ದಾರೆ. ಈ ಬಗ್ಗೆಯು ಪರಿಶೀಲಿಸಲಾಗುವುದು ಎಂದರು.

ಎಲ್ಲರ ರಕ್ತದ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದೆ. ವರದಿ ಬಂದ ನಂತರ ಈ ಬಗ್ಗೆ ಸ್ಪಷ್ಟತೆ ಸಿಗಲಿದೆ. ಪಾರ್ಟಿ ಆಯೋಜಕರು, ಭೂ ಮಾಲೀಕರ ವಿರುದ್ದ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

2026ರ ಮೈಸೂರು ದಸರಾಗೆ ಡಿಜಿಟಲ್ ಸ್ಪರ್ಶ!

ಕೆ.ಎಸ್.ಚಂದ್ರಶೇಖರ್‌ಮೂರ್ತಿ ಅರಮನೆಯಿಂದ ಪಂಜಿನ ಕವಾಯತುವರೆಗೂ ಅಂಗೈಯ ವೀಕ್ಷಣೆಗೆ ಅವಕಾಶ  ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ೨೦೨೬ರ ವರ್ಷದಲ್ಲಿ ಹತ್ತು ಹಲವು…

2 mins ago

ಮಡಿಕೇರಿ ದಸರಾ ಶೋಭಾಯಾತ್ರೆ ದಿನಾಂಕ ಗೊಂದಲ

ನವೀನ್ ಡಿಸೋಜ ಅ.೨೦, ೨೧ರ ಕುರಿತು ಭಿನ್ನ ನಿರ್ಧಾರ; ದೇವಪ್ರಶ್ನೆ ಮೂಲಕ ಪರಿಹಾರಕ್ಕೆ ಕರಗ ಸೇವೆದಾರರ ಮನವಿ ಮಡಿಕೇರಿ: ಐತಿಹಾಸಿಕ…

8 mins ago

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

11 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

17 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

20 hours ago