ಮೈಸೂರು: ದಸರಾ ಉದ್ಘಾಟಕರ ಬದಲಾವಣೆಗೆ ಕಾನೂನು ಸಮರ ನಡೆಯುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಲವರು ಕೋರ್ಟ್‌ಗೆ ಹೋಗಿದ್ದಾರೆ. ಕೋರ್ಟ್ ಅದನ್ನು ನೋಡಿಕೊಳ್ಳುತ್ತೆ. ಏನಾಗುತ್ತೆ ಅಂತ ಪಿ. ಐ.ಎಲ್ ಸಲ್ಲಿಸಿರುವವರನ್ನು ಕೇಳಿ. ದಸರಾ ಸಾಂಸ್ಕೃತಿಕವಾಗಿ ನಡೆಯುತ್ತಿರುವ ಕಾರ್ಯಕ್ರಮ. ದಸರಾ ಎಲ್ಲರ ಹಬ್ಬ ಒಂದು, ಜಾತಿ ಧರ್ಮಕ್ಕೆ ಸೇರಿದ ಹಬ್ಬ ಅಲ್ಲ. ಮುಸ್ಲಿಂ, ಕ್ರಿಸ್ಟಿಯನ್ ಎಲ್ಲರೂ ಬರ್ತಾರೆ. ಇದನ್ನು ಬೇರೆ ರೀತಿ ರಾಜಕೀಯವಾಗಿ ವಿರೋಧ ಮಾಡ್ತಾರೆ. ವಿರೋಧ ಮಾಡೋರನ್ನ ಈ ಬಗ್ಗೆ ಕೇಳಿ ಎಂದು ಪರೋಕ್ಷವಾಗಿ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಕಿಡಿಕಾರಿದರು.
ಇನ್ನು ಮಾಜಿ ಸಂಸದ ಪ್ರತಾಪ್ ಸಿಂಹ ಗಡಿಪಾರಿಗೆ ಕೆಲ ಸಂಘಟನೆಗಳು ಒತ್ತಾಯ ಮಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಪೊಲೀಸರು ಆ ಬಗ್ಗೆ ಕ್ರಮ ತೆಗೆದುಕೊಳ್ಳುತ್ತಾರೆ. ನಾನೇನು ಸೂಚನೆ ಕೊಡಲ್ಲ ಎಂದು ಹೇಳಿದರು.





