Mysore
16
few clouds

Social Media

ಶನಿವಾರ, 24 ಜನವರಿ 2026
Light
Dark

ರಾಜ್ಯ ಸರ್ಕಾರಕ್ಕೆ ವೀರೇಂದ್ರ ಹೆಗ್ಡೆ ಧನ್ಯವಾದ ವಿಚಾರ: ಗೃಹ ಸಚಿವ ಪರಮೇಶ್ವರ್‌ ಪ್ರತಿಕ್ರಿಯೆ

CM will resolve the MLAs' dissatisfaction: Minister G. Parameshwara

ಮೈಸೂರು: ರಾಜ್ಯ ಸರ್ಕಾರಕ್ಕೆ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಡೆ ಧನ್ಯವಾದ ಹೇಳಿರುವ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪರಮೇಶ್ವರ್‌ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸತ್ಯಾ ಸತ್ಯತೆ ಹೊರ ಬರಲಿ ಎಂದೇ ಎಸ್ಐಟಿ ರಚನೆ ಮಾಡಲಾಯಿತು. ಆರೋಪ ಬಂದ ಹಿನ್ನೆಲೆಯಲ್ಲಿ ಅದರ ಸತ್ಯತೆ ತಿಳಿಯಲು ತನಿಖೆ ಆರಂಭಿಸಲಾಯಿತು. ಈಗಾಗಲೇ ಎಸ್ಐಟಿ ತನಿಖೆ ನಡೆಸುತ್ತಿದೆ. ಅಂತಿಮ ಹಂತದ ವರದಿ ಬರೋವರೆಗೂ ಸರ್ಕಾರ ಯಾವುದೇ ನಿರ್ಧಾರಕ್ಕೆ ಬರಲ್ಲ ಎಂದರು.

ಇದನ್ನೂ ಓದಿ:-ಐತಿಹಾಸಿಕ ಕಾವೇರಿ ಆರತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌

ಇನ್ನು ವಿಪಕ್ಷಗಳ ಧರ್ಮಸ್ಥಳ ಚಲೋ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಸರ್ಕಾರದ ವಿರುದ್ಧ ಹೇಳಿಕೆ ನೀಡಿದ್ರು ಈ ಬಗ್ಗೆ ಪ್ರತಿಕ್ರಿಯೆ ನೀಡಲ್ಲ. ಅಂತಿಮ ಹಂತದ ಬರೋ ತನಕ ಈ ಬಗ್ಗೆ ಮಾತನಾಡಲ್ಲ ಎಂದು ಹೇಳಿದರು.

Tags:
error: Content is protected !!