Mysore
29
overcast clouds

Social Media

ಮಂಗಳವಾರ, 29 ಸೆಪ್ಟೆಂಬರ್ 2026
Light
Dark

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ ನಡೆದಿದೆ.

ಮೈಸೂರಿನ ವಿಜಯನಗರದ ಹಾಸ್ಟೆಲ್‌ನಿಂದ ಕಾಲೇಜಿಗೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದ್ದು, ಹಾಸ್ಟೆಲ್‌ನ ಅನತಿ ದೂರದಲ್ಲೇ ಯುವಕನಿಂದ ದುಷ್ಕೃತ್ಯ ನಡೆದಿದೆ.

ಶೇ.80ರಷ್ಟು ಸುಟ್ಟ ಗಾಯಗಳಾಗಿರುವ ಯುವಕನಿಗೆ ಕೆ.ಆರ್. ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಹಲಗೂರು ಗ್ರಾಮದ ನಿವಾಸಿ ಚಂದನ್‌ (27) ಎಂಬಾತನಿಂದ ದುಷ್ಕೃತ್ಯ ನಡೆದಿದೆ.

ಅದೇ ಗ್ರಾಮದ ಡಿಪ್ಲೊಮಾ ಎಂಜಿನಿಯರಿಂಗ್ ವಿದ್ಯಾರ್ಥಿನಿ ಜೊತೆ ಒನ್‌ ಸೈಡ್‌ ಲವ್‌ ಹೊಂದಿದ್ದ ಎನ್ನಲಾಗಿದೆ.

ಶೇ.20ರಷ್ಟು ಸುಟ್ಟ ಗಾಯಗಳಾಗಿರುವ ಹುಡುಗಿಗೂ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆ ಸಂಬಂಧ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:
error: Content is protected !!