ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ ನಡೆದಿದೆ.
ಮೈಸೂರಿನ ವಿಜಯನಗರದ ಹಾಸ್ಟೆಲ್‌ನಿಂದ ಕಾಲೇಜಿಗೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದ್ದು, ಹಾಸ್ಟೆಲ್‌ನ ಅನತಿ ದೂರದಲ್ಲೇ ಯುವಕನಿಂದ ದುಷ್ಕೃತ್ಯ ನಡೆದಿದೆ.
ಶೇ.80ರಷ್ಟು ಸುಟ್ಟ ಗಾಯಗಳಾಗಿರುವ ಯುವಕನಿಗೆ ಕೆ.ಆರ್. ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಹಲಗೂರು ಗ್ರಾಮದ ನಿವಾಸಿ ಚಂದನ್ (27) ಎಂಬಾತನಿಂದ ದುಷ್ಕೃತ್ಯ ನಡೆದಿದೆ.
ಅದೇ ಗ್ರಾಮದ ಡಿಪ್ಲೊಮಾ ಎಂಜಿನಿಯರಿಂಗ್ ವಿದ್ಯಾರ್ಥಿನಿ ಜೊತೆ ಒನ್ ಸೈಡ್ ಲವ್ ಹೊಂದಿದ್ದ ಎನ್ನಲಾಗಿದೆ.
ಶೇ.20ರಷ್ಟು ಸುಟ್ಟ ಗಾಯಗಳಾಗಿರುವ ಹುಡುಗಿಗೂ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆ ಸಂಬಂಧ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…
ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…