ಮೈಸೂರು ನಗರ

ಸುಪ್ರೀಂನಲ್ಲಿ ಸಿಎಂ ಪತ್ನಿ ಪಾರ್ವತಿಗೆ ರಿಲೀಫ್:‌ ಮೈಸೂರಿನಲ್ಲಿ ಕೈ ಕಾರ್ಯಕರ್ತರ ಸಂಭ್ರಮಾಚರಣೆ

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ನಲ್ಲಿ ಸಿಎಂ ಪತ್ನಿ ಪಾರ್ವತಿಗೆ ಬಿಗ್‌ ರಿಲೀಫ್‌ ಸಿಕ್ಕಿರುವ ಹಿನ್ನೆಲೆಯಲ್ಲಿ ಮೈಸೂರಿನಲ್ಲಿಂದು ಕಾಂಗ್ರೆಸ್‌ ಕಾರ್ಯಕರ್ತರು ಸಂಭ್ರಮಾಚರಣೆ ಆಚರಿಸಿದರು.

ಮೈಸೂರಿನ ಲೋಕಾಯುಕ್ತ ಕಚೇರಿ ಮುಂದೆ ಜಮಾಯಿಸಿದ ಕಾಂಗ್ರೆಸ್‌ ಕಾರ್ಯಕರ್ತರು, ಸತ್ಯ ಮೇವ ಜಯತೆ ಎಂದು ಬಿತ್ತಿ ಪತ್ರ ಹಿಡಿದು ಸಂಭ್ರಮಿಸಿದರು. ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್, ಗ್ರಾಮಾಂತರ ಅಧ್ಯಕ್ಷ ಬಿ.‌ಜೆ.ವಿಜಯ ಕುಮಾರ್, ನಗರಾಧ್ಯಕ್ಷ ರಘು ಸೇರಿದಂತೆ ಅನೇಕ ಕೈ ಕಾರ್ಯಕರ್ತರು ಭಾಗಿಯಾಗಿ ಪರಸ್ಪರ ಸಿಹಿ ತಿನ್ನಿಸಿ ಖುಷಿಪಟ್ಟರು.

ಈ ವೇಳೆ ಮಾತನಾಡಿದ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಅವರು, ಇಡಿಯು ಬಿಜೆಪಿ ಏಜೆಂಟ್ ರೀತಿ ವರ್ತನೆ ಮಾಡುತ್ತಿದೆ. ಆರ್‌ಎಸ್‌ಎಸ್ ಕೂಲಿಕಾರರಾಗಿ ಇಡಿ ಕೆಲಸ ಮಾಡುತ್ತಿದೆ. ಮುಡಾ ಸೈಟ್‌ನಲ್ಲಿ ಮನಿ ಲಾಡರಿಂಗ್ ಎಲ್ಲಿ ಆಗಿದೆ ಎಂದು ಪ್ರಶ್ನಿಸಿದ ಅವರು, ದೂರುದಾರ ಸ್ನೇಹ ಮಯಿ ಕೃಷ್ಣ ಒಬ್ಬ ಕ್ರಿಮಿನಲ್. ಅವನು ಸಾಯುವವರೆಗೂ ಇದೇ ರೀತಿ ಹೇಳಿಕೊಂಡು ತಿರುಗಬೇಕು. ಹೈಕೋರ್ಟ್ ಆದೇಶ ಬಹಳ ಸ್ಪಷ್ಟವಾಗಿದೆ. ಲೋಕಾಯುಕ್ತ ತನಿಖೆ ಮಾಡುವಾಗ ಇಡಿ ತನಿಖೆ ಮಾಡುವ ಅವಶ್ಯಕತೆ ಇಲ್ಲ. ಆದರೂ ಸುಪ್ರೀಂಕೋರ್ಟ್‌ಗೆ ಅಪೀಲ್ ಮಾಡಿಕೊಂಡಿದ್ದಾರೆ. ಸುಪ್ರೀಂ‌ಕೋರ್ಟ್ ಇಡಿಗೆ ಚೀಮಾರಿ ಹಾಕಿದೆ. ಇಡಿಯನ್ನು ಕ್ಲೋಸ್ ಮಾಡಿಸಬೇಕು. ಬಿಜೆಪಿಯವರು ಇಡಿ, ಸಿಬಿಐ ಹಾಗೂ ಎನ್‌ಐಎಯನ್ನು ರಾಜಕೀಯ ದಾಳವಾಗಿ ಬಳಸಿಕೊಳ್ಳುವುದನ್ನು ಬಿಡಬೇಕು ಎಂದು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.

ಆಂದೋಲನ ಡೆಸ್ಕ್

Recent Posts

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

5 mins ago

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

6 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

6 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

7 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

8 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

14 hours ago