ಮೈಸೂರು ನಗರ

ದಸರಾ ಮಹೋತ್ಸವದಲ್ಲಿ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿ ; ಜಿಲ್ಲಾಧಿಕಾರ ಜಿ.ಲಕ್ಷ್ಮೀಕಾಂತ ರೆಡ್ಡಿ ಮಾಹಿತಿ

ಮೈಸೂರು : ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಯ ವೇಳೆ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿಯಾಗುವರು ಎಂದು ಜಿಲ್ಲಾಧಿಕಾರಿಗಳಾದ ಜಿ ಲಕ್ಷ್ಮೀಕಾಂತ ರೆಡ್ಡಿ ಅವರು ತಿಳಿಸಿದರು.

ಇಂದು ಜಿಲ್ಲಾ ಪಂಚಾಯತ್ ಮಿನಿ ಸಭಾಂಗಣದಲ್ಲಿ ಚಲನಚಿತ್ರ ರಂಗದ ಪದಾಧಿಕಾರಿಗಳ ಜೊತೆ ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಾನ್ಯ ಮುಖ್ಯಮಂತ್ರಿಗಳ ಆಶಯದಂತೆ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ನಟ ನಟಿಯರು ಕಲಾವಿದರು ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳನ್ನು ಅಂಬಾರಿ ಬಸ್ ನಲ್ಲಿ ಜಂಬೂ ಸವಾರಿಯ ದಿನ ಮೆರವಣಿಗೆಯಲ್ಲಿ ಕರೆದುಕೊಂಡು ಹೋಗಲಾಗುವುದು ಎಂದರು.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ರಾದ ನಟಿ ಡಾ.ಜಯಮಾಲಾ ಅವರು ಮಾತನಾಡಿ ಚಲನಚಿತ್ರ ರಂಗವು 93 ವರ್ಷಗಳಿಂದ ನಡೆದು ಬಂದ ಹಾದಿ ಕುರಿತ ಮಾಹಿತಿಯನ್ನು ಹೊತ್ತ ಸ್ತಬ್ಧ ಚಿತ್ರವನ್ನು ನಿರ್ಮಾಣ ಮಾಡಲಾಗುವುದು. ಈ ಸ್ತಬ್ಧ ಚಿತ್ರದಲ್ಲಿ 30 ಪ್ರಖ್ಯಾತ ಕನ್ನಡ ಚಲನ ಚಿತ್ರನಟ ನಟಿಯರು ಮೆರವಣಿಗೆ ಯಲ್ಲಿ ಅಭಿಮಾನಿಗಳಿಗೆ ಕೈಬಿಸುವರು ಎಂದರು.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಆಧ್ಯಕ್ಷ ಸಾ.ರಾ ಗೋವಿಂದು ಅವರು ಮಾತನಾಡಿ ಕನ್ನಡ ಚಲನ ಚಿತ್ರ ರಂಗದ ಕಲಾವಿದರನ್ನು ಕರೆಸಿ ದಸರಾ ಮಹೋತ್ಸವದಲ್ಲಿ ಸನ್ಮಾನ ಕಾರ್ಯಕ್ರಮವನ್ನು ಏರ್ಪಡಿಸಬೇಕು. ಕರ್ನಾಟಕ ಚಲನಚಿತ್ರ ರಂಗ ನಡೆದು ಬಂದ ಹಾದಿಯ ಕುರಿತು ಪ್ರದರ್ಶನ ಏರ್ಪಡಿಸಬೇಕು ಎಂದು ಮನವಿ ಮಾಡಿದರು.

ಚಲನಚಿತ್ರ ಕಲಾವಿದರ ಸಂಘದ ಅಧ್ಯಕ್ಷರಾದ ರಾಕ್ ಲೈನ್ ವೆಂಕಟೇಶ್ ಅವರು ಮಾತನಾಡಿ ದಸರಾ ಕಾರ್ಯಕ್ರಮದಲ್ಲಿ ಭಾಗವಹಿಸುವ ಕಲಾವಿದರಿಗೆ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡುವಂತೆ ಜಿಲ್ಲಾಧಿಕಾರಿಗಳಲ್ಲಿ ಮನವಿ ಮಾಡಿದರು.

ಸಭೆಯಲ್ಲಿ ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಎಸ್ ಐ, ಆರ್ ಡಿ ನಿರ್ದೇಶಕರಾದ ಶೇಖ್ ತನ್ವೀರ್ ಆಸೀಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಮಲ್ಲಿಕಾರ್ಜುನ ಬಾಲದಂಡಿ ಸೇರಿದಂತೆ ಚಲನಚಿತ್ರ ಮಂಡಳಿಯ ಸದಸ್ಯರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಕನ್ನಡಿಗರನ್ನು ಕಡೆಗಣಿಸಿದರೆ ಕಠಿಣ ಕ್ರಮ: ಐಟಿ ಕಂಪನಿಗಳಿಗೆ ಡಿಕೆಶಿ ಎಚ್ಚರಿಕೆ!

ಬೆಂಗಳೂರು: ಬೆಂಗಳೂರಿನ ಐಟಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶಗಳ ವಿಚಾರದಲ್ಲಿ ಅನ್ಯಾಯವಾಗುತ್ತಿದೆ ಎಂಬ ಆರೋಪವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಮುಖ್ಯಮಂತ್ರಿ…

4 hours ago

ಜನವರಿಯೊಳಗೆ ಜಿ.ಪಂ ಹಾಗೂ ತಾ.ಪಂ ಚುನಾವಣೆ: ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ರಾಜ್ಯದಲ್ಲಿ ಬಹುನಿರೀಕ್ಷಿತ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳಿಗೆ ಸಿದ್ಧತೆಗಳು ನಡೆಯುತ್ತಿವೆ. ಮುಂದಿನ ಡಿಸೆಂಬರ್‌ ಅಂತ್ಯ ಅಥವಾ…

5 hours ago

ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ: ಕೆಆರ್‌ಎಸ್‌ಗೆ ಹೆಚ್ಚಿದ ಒಳಹರಿವು

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಕೆಆರ್‌ಎಸ್‌ ಜಲಾಶಯಕ್ಕೆ ಮತ್ತೆ ಒಳಹರಿವು ಹೆಚ್ಚಾಗಿದೆ. ಜಲಾಶಯಕ್ಕೆ 9,457 ಕ್ಯುಸೆಕ್‌…

5 hours ago

ಓದುಗರ ಪತ್ರ: ದಡದಹಳ್ಳಿ -ಬ್ಯಾತಹಳ್ಳಿ ರಸ್ತೆ ದುರಸ್ತಿಪಡಿಸಿ

ಮೈಸೂರು ಜೆಪಿ ನಗರ ರಿಂಗ್ ರಸ್ತೆಯ ರೈಲ್ವೆ ಅಂಡರ್‌ಬ್ರಿಡ್ಜ್ ಬಳಿಯ ಶ್ರೀನಗರ ಬಡಾವಣೆಗೆ ಹೋಗುವ ರಸ್ತೆಯು ರೈಲ್ವೆ ಕ್ರಾಸಿಂಗ್ ದಾಟಿ…

9 hours ago

ಓದುಗರ ಪತ್ರ: ಇ- ಕೆವೈಸಿ: ಮತ್ತಷ್ಟು ಆಧಾರ್ ಕೇಂದ್ರಗಳನ್ನು ಆರಂಭಿಸಿ

ಪಡಿತರ ಬಿಪಿಎಲ್ ಹಾಗೂ ಎಪಿಎಲ್ ಕಾರ್ಡ್ ಹೊಂದಿರುವವರು ಇ- ಕೆವೈಸಿ ಮಾಡಿಸಲು ರಾಜ್ಯ ಸರ್ಕಾರ ಆದೇಶ ಮಾಡಿದ್ದು, ಇದಕ್ಕೆ ಆಧಾರ್…

9 hours ago

ಓದುಗರ ಪತ್ರ: ಕೇಂದ್ರ ಸಚಿವರಿಗೆ ಇದು ಬೇಕಾಗಿತ್ತೇ?

ಇತ್ತೀಚಿನ ದಿನಗಳಲ್ಲಿ ರಾಜ್ಯ ರಾಜಕಾರಣದಲ್ಲಿ ತಲ್ಲಣ ಉಂಟು ಮಾಡಿರುವ ಸ್ಟಿಂಗ್ ಆಪರೇಷನ್ ( ಮಾರುವೇಷದ ಕಾರ್ಯಾಚರಣೆ) ಬಗ್ಗೆ ಕೇಂದ್ರ ಸಚಿವ…

9 hours ago