ಮೈಸೂರು ನಗರ

“ಸಂಶೋಧನೆಗೆ AI ನಿಂದಲ್ಲ, ಸ್ವಂತಿಕೆಯಿಂದ ಕೂಡಿರಲಿ” : ಕುಲಪತಿ ಶರಣಪ್ಪ ಹಲಸೆ ಸಲಹೆ

ಮೈಸೂರು : ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ ಸಂಶೋಧನೆಗಳನ್ನು ಸಿದ್ಧಪಡಿಸಬೇಕು, AI ತಂತ್ರಜ್ಞಾನದ ಕಡೆ ಮೊರೆಹೋಗುವುದನ್ನು ಕಡಿಮೆ ಮಾಡಿ ತಮ್ಮಲ್ಲಿರುವ ಜ್ಞಾನವನ್ನು ಸಂಶೋಧನೆಯಲ್ಲಿ ಬಳಸಬೇಕು ಎಂದು  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ. ಶರಣಪ್ಪ ಹಲಸೆ ಹೇಳಿದರು.

ಬುಧವಾರ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಡಾ. ಬಾಬು ಜಗಜೀವನರಾಮ್ ಸಂಶೋಧನಾ ಸಂಸ್ಥೆ ಸಮಾಜ ಕಲ್ಯಾಣ ಇಲಾಖೆ ಇವರ ಸಹಯೋಗದೊಂದಿಗೆ  ಕಾವೇರಿ ಸಭಾಂಗಣದಲ್ಲಿ ಸಂಶೋಧನಾ ವಿಧಾನಗಳ ಕುರಿತು ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕರ್ನಾಟಕ  ರಾಜ್ಯ ಮುಕ್ತ ವಿಶ್ವವಿದ್ಯಾಲಯ ನಿಲಯದಲ್ಲಿ ಇಂದು 345 ವಿದ್ಯಾರ್ಥಿಗಳು ಸಂಶೋಧನೆಗೆ  ಪ್ರವೇಶಾತಿ ಪಡೆದುಕೊಂಡಿದ್ದಾರೆ. ಇಂದಿನ ಸಂಶೋಧನೆಗಳು ತಮ್ಮ ಮೂಲ ತತ್ವವನ್ನು ಕಳೆದುಕೊಳ್ಳುತ್ತಿವೆ, ಸಂಶೋಧನೆಯಲ್ಲಿ ಪ್ಲಾಗರಿಸಂ (ಕೃತಿಚೌರ್ಯ) ಚೆಕ್ ಮಾಡುವುದು  ಅವಶ್ಯಕವಾಗಿದೆ ಆದ್ದರಿಂದ  UGC ಸಂಸ್ಥೆಯು ಸಂಶೋಧನೆಯಲ್ಲಿ ಸಂಶೋಧನಾ ನೀತಿ ಶಾಸ್ತ್ರ ಪತ್ರಿಕೆಯನ್ನು  ಸೇರಿಸಲಾಗಿದೆ ಎಂದರು.

ಸರ್ಕಾರದಿಂದ  5 ಲಕ್ಷ.ರೂ ಅನುದಾನ ನೀಡಿ ಇಂದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಊಟ ವಸತಿ ಸೌಲಭ್ಯದೊಂದಿಗೆ  ಮೂರು ದಿನದ ಕಾರ್ಯಗಾರವನ್ನು ಏರ್ಪಡಿಸಿದೆ, ಸಂಶೋಧನೆಗೆ ಸಂಬಂಧಿಸಿದಂತೆ ಮಾಹಿತಿಯನ್ನು ಪಡೆದುಕೊಳ್ಳಿ ಎಂದು ಹೇಳಿದರು.

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಎನ್. ಸಿ.ಇ.ಆರ್. ಟಿ ಪಠ್ಯಪುಸ್ತಕಗಳನ್ನು ಓದಿಕೊಳ್ಳಬೇಕು, ವಿದ್ಯಾರ್ಥಿಗಳು ಯಾವುದೇ ಕೆಲಸವನ್ನು ಮಾಡುವಾಗ ತಮ್ಮನ್ನು ತಾವು ಸಂಪೂರ್ಣವಾಗಿ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.

ಬಹದ್ದೂರ್ ನಿರ್ವಹಣಾ ಸಂಸ್ಥೆಯ ವಿಭಾಗದ ಹಿರಿಯ ಪ್ರಾಧ್ಯಾಪಕರಾದ  ಪ್ರೊ. ಆರ್ ಮಹೇಶ್ ಮಾತನಾಡಿ, ಸಂಶೋಧನೆಗಳನ್ನು ಇಂದಿನ ದಿನಗಳಲ್ಲಿ ವಿವಿಧ ರೀತಿಯ ಆಯಾಮಗಳಿಂದ ಸಿದ್ಧಪಡಿಸಬೇಕು, ನಮ್ಮ ಸಂಶೋಧನೆಗಳು ಸಮಾಜ ಮುಖಿಯಾಗಿರಬೇಕು ಎಂದರು.

ಆರ್ಟಿಫಿಶಿಯಲ್ ಇಂಟಲಿಜೆನ್ಸಿ ತಂತ್ರಜ್ಞಾನದ ಸಂಪೂರ್ಣ ಮಾಹಿತಿ ಇಂದಿನ ಸಂಶೋಧನೆಯಲ್ಲಿ ಕಂಡು ಬರುತ್ತಿದೆ. AI ತಂತ್ರಜ್ಞಾನವು ಅದರ ಯೋಜನೆ ಕಡೆ ಕರೆದುಕೊಂಡು ಹೋಗುತ್ತಿದೆ ಆದರೆ ತಮ್ಮ ಮೂಲ ಪರಿಶ್ರಮ ಕಡಿಮೆಯಾಗುತ್ತಿದೆ ಎಂದು ಹೇಳಿದರು.

ಕೆಲವು ಸಂಶೋಧನೆಯಲ್ಲಿ ಪ್ರಾಮಾಣಿಕತೆ ಶೂನ್ಯದಿಂದ ಕುಡಿರುತ್ತದೆ, ತಂತ್ರಜ್ಞಾನಗಳಿಂದ ಲಾಭವನ್ನು ಪಡೆದುಕೊಳ್ಳಬೇಕೆ ಹೊರತು ನಾವೇ ತಂತ್ರಜ್ಞಾನಕ್ಕೆ ಒಳಪಡಬಾರದು. ಸಂಶೋಧನೆಗಳಿಗೆ  ಸಂಬಂಧಿಸಿದ ವಿಷಯಗಳನ್ನು ಕುರಿತು ಗುಂಪುಗಾರಿಕೆಯಲ್ಲಿ ಚರ್ಚೆಗಳನ್ನು ನಡೆಸಿ ಮಾಹಿತಿಯನ್ನು ಸಿದ್ಧಪಡಿಸಿಕೊಳ್ಳಬೇಕು. ಮೌಲ್ಯಮಾಪಕರು ಸಂಶೋಧನೆಯನ್ನು ಮೌಲ್ಯಮಾಪನ ಮಾಡುವಾಗ ಅತಿ ಹೆಚ್ಚು ಪ್ರಾಮಾಣಿಕತೆಯನ್ನು ಗುರುತಿಸಬೇಕು ಸಂಶೋಧನೆಗಳು ಸಮಾಜಕ್ಕೆ ಪೂರಕವಾಗಿರಬೇಕು ಹಾಗೂ ಇತರರಿಗೆ ಸಹಾಯವಾಗುವಂತೆ ಸಿದ್ಧಪಡಿಸಬೇಕು ಎಂದು ಹೇಳಿದರು.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಡೀನ್ ಪ್ರೊ. ಎಂ ರಾಮನಾಥಮ್ ನಾಯ್ಡು ಅವರು ಮಾತನಾಡಿ ವಿದ್ಯಾರ್ಥಿಗಳು ಸಂಶೋಧನೆಗಳ ಬಗ್ಗೆ ಅತಿಹೆಚ್ಚಿನ ಜ್ಞಾನವನ್ನು ಪಡೆದುಕೊಳ್ಳಬೇಕು ಮತ್ತು ಸಂಶೋಧನೆಯಲ್ಲಿ ಮೆಥಡಾಲಜಿ  ಬಗ್ಗೆ ತಿಳಿದುಕೊಳ್ಳುವುದು ಬಹಳ ಮುಖ್ಯವಾದದ್ದು ಎಂದು ಹೇಳಿದರು.

ಭಾಷೆಗಳಿಗೆ ವಿವಿಧ ರೀತಿಯ ಮೆಥಡಾಲಜಿ ಇದೆ ಆದ್ದರಿಂದ  ವಿವಿಧ ರೀತಿಯ ತಜ್ಞರನ್ನು ಕರೆತಂದು ಇಂದಿನ ಸಂಶೋಧನಾ ಕಾರ್ಯಗಾರವನ್ನು ಏರ್ಪಡಿಸಲಾಗಿದೆ. ಕಠಿಣ ಪರಿಶ್ರಮದಿಂದ ಸಂಶೋಧನೆಯನ್ನು ಸಿದ್ಧಪಡಿಸಿ ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲ ಸಚಿವರಾದ ಡಾ.ಸಿ ಎಸ್ ಆನಂದ್ ಕುಮಾರ್, ಹಣಕಾಸು ಅಧಿಕಾರಿಯಾದ ಪ್ರೊ. ನಿರಂಜನ್ ರಾಜ್, ಡೀನ್ ಡಾ. ಎನ್ ಆರ್ ಚಂದ್ರೇಗೌಡ,  ಡಾ.ಬಾಬು ಜಗಜೀವನ್ ರಾಮ್ ಅಧ್ಯಯನ ಸಂಶೋಧನ ಮತ್ತು ವಿಸ್ತಾರಣ ಕೇಂದ್ರದ ನಿರ್ದೇಶಕಿಯಾದ ಡಾ.ಆರ್. ಶರಣಮ್ಮ ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವಾಟಾಳ್‌ ನಾಗರಾಜ್‌ಗೆ ರಾಜ್ಯೋತ್ಸವ ಪ್ರಶಸ್ತಿ ಕೊಡಲು ಕ್ರಮ: ಸಚಿವ ಶಿವರಾಜ್‌ ತಂಗಡಗಿ

ಬೆಂಗಳೂರು: ಕನ್ನಡ ಪರ ಹೋರಾಟಗಾರ ವಾಟಾಳ್‌ ನಾಗರಾಜ್‌ಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕೊಡುವ ಕೆಲಸವನ್ನು ಸರ್ಕಾರ ಮಾಡಲಿದೆ ಎಂದು ಸಚಿವ…

16 mins ago

ವಾಣಿಜ್ಯ ಸಿಲಿಂಡರ್‌ ಸ್ಟಾಕ್‌ ಇಲ್ಲ: ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು: ರಾಜ್ಯದಲ್ಲಿ ವಾಣಿಜ್ಯ ಸಿಲಿಂಡರ್‌ ಸ್ಟಾಕ್‌ ಇಲ್ಲ. ಹೋಟೆಲ್‌ನವರು ಒಂದು ವಾರ ಸಹಿಸಿಕೊಳ್ಳಲೇಬೇಕು ಎಂದು ಆಹಾರ ಸಚಿವ ಮುನಿಯಪ್ಪ ಹೇಳಿದ್ದಾರೆ.…

1 hour ago

ನಾಲ್ಕೈದು ದಿನಗಳ ನಂತರ ಎಲ್‌ಪಿಜಿ ಗ್ಯಾಸ್‌ ಸಿಲಿಂಡರ್‌ ಪೂರೈಕೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ಯುದ್ಧದಿಂದಾಗಿ ದೇಶದಲ್ಲಿ ಗ್ಯಾಸ್‌ ಸಿಲಿಂಡರ್‌ಗಳ ಪೂರೈಕೆಯಲ್ಲಿ ಕೊರತೆ ಉಂಟಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಹಾಗೂ ಮಾಜಿ ಸಿಎಂ…

2 hours ago

ಇರಾನ್‌ ನೂತನ ಸುಪ್ರೀಂ ಲೀಡರ್‌ಗೆ ಕಾಲು ಕಟ್‌, ಕೋಮಾಗೆ ಜಾರಿಗೆ ಮೊಜ್ತಾಬಾ

ಟೆಹರಾನ್:‌ ಇಸ್ರೇಲ್ ಮತ್ತು ಇರಾನ್‌ ನಡುವಿನ ಯುದ್ಧ ಭೀಕರ ಸ್ವರೂಪ ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ ಇರಾನ್‌ ದೇಶಕ್ಕೆ ಚೇತರಿಸಿಕೊಳ್ಳಲಾಗದ ಆಘಾತ ಎದುರಾಗಿದೆ.…

3 hours ago

ಡಿಕೆಶಿ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಔತಣಕೂಟ: ಯಾವ ದಿನ ಗೊತ್ತಾ.?

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಕೆಲ ದಿನಗಳ ಹಿಂದೆ ಡಿನ್ನರ್‌ ಸಭೆ ಆಯೋಜಿಸಿದ್ದ ಬೆನ್ನಲ್ಲೇ ಈಗ ಸಿಎಂ ಸಿದ್ದರಾಮಯ್ಯ ಕೂಡ ಸಚಿವರಿಗೆ…

3 hours ago

ಇರಾನ್‌-ಇಸ್ರೇಲ್‌ ಸಂಘರ್ಷ ಎಫೆಕ್ಟ್:‌ ರಾಜ್ಯದಲ್ಲಿ ಅಡುಗೆ ಎಣ್ಣೆ ದರ ಏರಿಕೆ

ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಈಗ ಜನಸಾಮಾನ್ಯರ ಅಡುಗೆ ಮನೆಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ವಾಣಿಜ್ಯ ಬಳಕೆಯ…

3 hours ago