ಮೈಸೂರು : ನಗರದಲ್ಲಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ(ಎಂಡಿಎ) ರಚಿಸಿರುವ ನಿವೇಶನಗಳನ್ನು ತೆರವುಗೊಳಿಸಿ ದೊಡ್ಡಕೆರೆ ಮತ್ತು ಲಿಂಗಾಂಬುಧಿ ಕೆರೆಯನ್ನು ಪುನರುಜ್ಜೀವನಗೊಳಿಸಬೇಕು ಎಂದು ದಾವಣಗೆರೆಯ ಪರಿಸರ ಸಂರಕ್ಷಣಾ ವೇದಿಕೆ ಅಧ್ಯಕ್ಷ ಗಿರೀಶ್ ದೇವರಮನಿ ಒತ್ತಾಯಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಭಿವೃದ್ಧಿ, ನಿವೇಶನಗಳ ಹೆಸರಿನಲ್ಲಿ ಈವರೆಗೆ ಮೈಸೂರು ಸೇರಿದಂತೆ ರಾಜ್ಯದಲ್ಲಿ ಹಲವಾರು ಕೆರೆಕಟ್ಟೆಗಳನ್ನು ಮುಚ್ಚಲಾಗಿದ್ದು, ಜಲಮೂಲಗಳಿಗೆ ಕಂಟಕ ಎದುರಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಇದೀಗ ನಗರದ ಕುರುಬಾರಹಳ್ಳಿ ಗ್ರಾಮದ ಸರ್ವೇ ನಂ.4ರಲ್ಲಿ ಎಂಡಿಎ ವತಿಯಿಂದ ನಿವೇಶನಗಳನ್ನು ನಿರ್ಮಿಸಲಾಗಿದೆ. ಇದರಿಂದ ಪ್ರಕೃತಿ ಮತ್ತು ಜಲಮೂಲಗಳಿಗೆ ಹಾನಿಯಾಗಿದ್ದು, ಭೂಗರ್ಭದಲ್ಲಿ ಜಲ ಮಣ್ಣು ಕುಸಿಯುವ ಅಪಾಯವಿದೆ. ಕೂಡಲೇ ಎಂಡಿಎ ಹಾಗೂ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು ಪರಿಸರ ಸಮತೋಲನ ಕಾಪಾಡಲು ಹಾಗೂ ಭವಿಷ್ಯದಲ್ಲಿ ಜಲಮೂಲಗಳನ್ನು ಸಂರಕ್ಷಿಸುವ ಸಲುವಾಗಿ ನಿವೇಶಗಳನ್ನು ತೆರವುಗೊಳಿಸಬೇಕು ಎಂದರು.
ಸರ್ವೇ ನಂ.4ರ ಜಲಮೂಲ ಪ್ರದೇಶದ ನಿವೇಶನಗಳನ್ನು ರದ್ದುಪಡಿಸಿ, ತೆರವು ಮಾಡಬೇಕು. ಹಾಳಾಗಿರುವ ಕೆರೆ, ಕಟ್ಟೆಗಳನ್ನು ಪುನರ್‌ಸ್ಥಾಪಿಸಿ ಸಂರಕ್ಷಿಸಬೇಕು. ನಗರದ ದೊಡ್ಡಕೆರೆಯನ್ನು ಮೂಲ ಸ್ಥಿತಿಗೆ ತಂದು ಪುನರುಜ್ಜೀವನಗೊಳಿಸಬೇಕು. ಪರಿಸರ ಹಾನಿಗೆ ಕಾರಣವಾದ ಯೋಜನೆಗಳನ್ನು ಮರುಪರಿಶೀಲಿಸಿ, ನಗರದ ಮಾಲ್ ಆಫ್ ಮೈಸೂರ್‌ಗೆ ನೀಡಿದ ಅನುಮೋದನೆಯನ್ನು ರದ್ದುಗೊಳಿಸಬೇಕು. ಲಿಂಗಾಂಬುಧಿ ಕೆರೆಯನ್ನು ಸಂಪೂರ್ಣವಾಗಿ ಪುನರ್ ಸ್ಥಾಪಿಸಿ ಅದರ ಆವರಣದ ಸುತ್ತಲಿನ ಅಕ್ರಮ ನಿರ್ಮಾಣಗಳನ್ನು ಕ್ರಮ ಜರುಗಿಸಿ ತೆರವುಗೊಳಿಸಬೇಕು. ಈ ಎಲ್ಲಾ ಮನವಿಗಳನ್ನು ಪರಿಗಣಿಸಿ 15 ದಿನಗಳೊಳಗಾಗಿ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ, ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗುತ್ತದೆ ಎಂದು ಎಚ್ಚರಿಸಿದರು.
ಎಸ್.ಮಾಲತೇಶ್, ವಿಜಯ್‌ಕುಮಾರ್, ಎಂ.ಶಿವಕುಮಾರ್ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ಬೆಂಗಳೂರು : ಇಂದು ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆಗೆ ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದೆ. ಪಶ್ಚಿಮ…
ಹುಣಸೂರು: ತಾಲ್ಲೂಕಿನ ಬಿಳಿಕೆರೆ ಗ್ರಾಮದ ಕೆರೆಯ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಒಡಿಶಾ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿಕೊಂಡು ನಿತ್ರಾಣಗೊಂಡಿದ್ದ ಹೆಣ್ಣಾನೆ ಚಿಕಿತ್ಸೆಗೆ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಳೆ ಮತದಾನ ನಡೆಯಲಿದೆ. ನಾಳೆ ಉತ್ತರ ಬಂಗಾಳದ ಎಲ್ಲಾ 152…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದಕ್ಕಾಗಿ ಚುನಾವಣಾ ಆಯೋಗವು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ…