ಮೈಸೂರು: ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ರಾಷ್ಟ್ರಪ್ರಶಸ್ತಿ ವಿಜೇತ ಬಾಲನಟ ರೋಹಿತ್ ಅವರ ಆರೋಗ್ಯ ಈಗ ಸ್ಥಿರವಾಗಿದೆ.
ರೋಹಿತ್ ದವಡೆ ಭಾಗಕ್ಕೆ ಶಸ್ತ್ರ ಚಿಕಿತ್ಸೆ ಮಾಡಿ ಪ್ಲೇಟ್ ಅಳವಡಿಸಲಾಗಿದ್ದು, 8 ತಿಂಗಳು ದ್ರವ ಆಹಾರ ಸೇವಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ.
ರೋಹಿತ್ ತಾಯಿ ಛಾಯಾಲಕ್ಷ್ಮೀ ಅವರಿಗೂ ಗಂಭೀರ ಗಾಯಗಳಾಗಿದ್ದು, ಬೆಂಗಳೂರಿಗೆ ಶಿಫ್ಟ್ ಮಾಡಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.
ಅಪಘಾತವಾದಾಗ ರಸ್ತೆ ಬಳಿ ನಿಂತಿದ್ದ ರೋಹಿತ್, ರಕ್ತ ಸುರಿಯುತ್ತಿದ್ದರೂ ಧೃತಿಗೆಡಲಿಲ್ಲ ಎಂದು ಸಂಬಂಧಿಕರು ಹೇಳಿದ್ದಾರೆ.
ಪಾಂಡವಪುರ ನಿವಾಸಿಯಾಗಿರುವ ರೋಹಿತ್ ಅವರಿಗೆ ʼಒಂದಲ್ಲಾ ಎರಡಲ್ಲಾʼ ಚಿತ್ರದ ನಟನೆಗಾಗಿ ರಾಷ್ಟ್ರಪ್ರಶಸ್ತಿ ಬಂದಿತ್ತು. ಇವರು ದರ್ಶನ್ ಅಭಿನಯದ ಕಾಟೇರಾ ಚಿತ್ರದಲ್ಲೂ ಅಭಿನಯಿಸಿದ್ದಾರೆ.
ಶ್ರೀರಂಗಪಟ್ಟಣದ ಪಾಲಹಳ್ಳಿ ಬಳಿ ಈ ಅಪಘಾತ ಸಂಭವಿಸಿದ್ದು, ಪ್ರಕರಣ ಸಂಬಂಧ ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್‌ಆರ್‌ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ…
ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…
ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್ ಸಿಗ್ನಲ್ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ…