Mysore
23
scattered clouds

Social Media

ಬುಧವಾರ, 26 ಆಗಸ್ಟ್ 2026
Light
Dark

ಮಹಾಕುಂಭಮೇಳದಿಂದ ವಾಪಸ್‌ ಬರುವಾಗ ಅಪಘಾತ: ಮೈಸೂರಿನ ಇಬ್ಬರು ಯುವಕರು ಸಾವು

ಮೈಸೂರು: ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳ ಮುಗಿಸಿ ವಾಪಸ್‌ ಬರುವಾಗ ಅಪಘಾತ ಸಂಭವಿಸಿದ ಪರಿಣಾಮ ಮೈಸೂರಿನ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ನಡೆದಿದೆ.

ರಾಮಕೃಷ್ಣ ಶರ್ಮಾ ಹಾಗೂ ಅರುಣ್‌ ಶಾಸ್ತ್ರೀ ಎಂಬುವವರೇ ಮೃತ ದುರ್ದೈವಿಗಳಾಗಿದ್ದಾರೆ.

ಪ್ರಯಾಗ್‌ರಾಜ್‌ ಮುಗಿಸಿಕೊಂಡು ಕಾಶಿಗೆ ಬರುವಾಗ ಮಿರ್ಜಾಪುರ ಬಳಿ ಲಾರಿ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದೆ.

ಈ ವೇಳೆ ತೀವ್ರ ಗಾಯಗೊಂಡಿದ್ದ ಇಬ್ಬರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಇಬ್ಬರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಇನ್ನು ರಾಮಕೃಷ್ಣ ಶರ್ಮಾ ಅವರು ಕೆಆರ್‌ಎಸ್‌ ಹಿನ್ನೀರಿನ ವೇಣುಗೋಪಾಲಸ್ವಾಮಿ ದೇವಸ್ಥಾನದಲ್ಲಿ ಸಹಾಯಕ ಅರ್ಚಕರಾಗಿದ್ದರು. ಅರುಣ್‌ ಶಾಸ್ತ್ರೀ ಕೂಡ ಪುರೋಹಿತರಾಗಿ ಕೆಲಸ ಮಾಡುತ್ತಿದ್ದರು. ಇವರಿಬ್ಬರಿಗೂ ಮದುವೆ ಆಗಿರಲಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

Tags:
error: Content is protected !!