ಮೈಸೂರು: ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳ ಮುಗಿಸಿ ವಾಪಸ್ ಬರುವಾಗ ಅಪಘಾತ ಸಂಭವಿಸಿದ ಪರಿಣಾಮ ಮೈಸೂರಿನ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ನಡೆದಿದೆ.
ರಾಮಕೃಷ್ಣ ಶರ್ಮಾ ಹಾಗೂ ಅರುಣ್ ಶಾಸ್ತ್ರೀ ಎಂಬುವವರೇ ಮೃತ ದುರ್ದೈವಿಗಳಾಗಿದ್ದಾರೆ.
ಪ್ರಯಾಗ್‌ರಾಜ್ ಮುಗಿಸಿಕೊಂಡು ಕಾಶಿಗೆ ಬರುವಾಗ ಮಿರ್ಜಾಪುರ ಬಳಿ ಲಾರಿ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದೆ.
ಈ ವೇಳೆ ತೀವ್ರ ಗಾಯಗೊಂಡಿದ್ದ ಇಬ್ಬರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಇಬ್ಬರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಇನ್ನು ರಾಮಕೃಷ್ಣ ಶರ್ಮಾ ಅವರು ಕೆಆರ್‌ಎಸ್ ಹಿನ್ನೀರಿನ ವೇಣುಗೋಪಾಲಸ್ವಾಮಿ ದೇವಸ್ಥಾನದಲ್ಲಿ ಸಹಾಯಕ ಅರ್ಚಕರಾಗಿದ್ದರು. ಅರುಣ್ ಶಾಸ್ತ್ರೀ ಕೂಡ ಪುರೋಹಿತರಾಗಿ ಕೆಲಸ ಮಾಡುತ್ತಿದ್ದರು. ಇವರಿಬ್ಬರಿಗೂ ಮದುವೆ ಆಗಿರಲಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.
ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…
ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…
ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್‌ಆರ್‌ಟಿಸಿ ವಿಫಲ…
ಗಿರೀಶ್ ಹುಣಸೂರು ಹೊಸ ವರ್ಷಾಚರಣೆ, ಕ್ರಿಸ್‌ಮಸ್ ರಜೆ ನಿರೀಕ್ಷೆಯಲ್ಲಿ ವ್ಯಾಪಾರಸ್ಥರು, ಉದ್ಯಮಿಗಳು ಮೈಸೂರು: ೨೦೨೫ನೇ ವರ್ಷಕ್ಕೆ ವಿದಾಯ ಹೇಳಿ, ೨೦೨೬ರ…
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…