Mysore
18
broken clouds

Social Media

ಭಾನುವಾರ, 25 ಜನವರಿ 2026
Light
Dark

ಅರಮನೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಜೊತೆ ಫೋಟೋ ಕ್ಲಿಕ್ಕಿಸಿಕೊಂಡ ರಾಜವಂಶಸ್ಥರು

drupadi marmu mysuru royal family

ಮೈಸೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೈಸೂರು ಅರಮನೆಗೆ ಭೇಟಿ ನೀಡಿದ್ದ ಹಿನ್ನೆಲೆಯಲ್ಲಿ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್‌ ಅವರು ಪತ್ರಿಕಾ ಪ್ರಕಟಣೆಯ ಮೂಲಕ ಧನ್ಯವಾದ ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್‌ ಅವರು, ಗಣ್ಯರನ್ನು ಸ್ವಾಗತಿಸಲು ನನಗೆ ಅಪಾರ ಸಂತೋಷ ಮತ್ತು ಹೆಮ್ಮೆ ಆಗಿದೆ. ನನ್ನ ಆಹ್ವಾನವನ್ನು ಸ್ವೀಕರಿಸಿ ಗೌರವಿಸಿದ್ದಕ್ಕಾಗಿ ಹೃತ್ಪೂರ್ವಕ ಧನ್ಯವಾದಗಳು ಎಂದು ತಿಳಿಸಿದ್ದಾರೆ.

ಇನ್ನು ಅರಮನೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಬೆಳ್ಳಿ ತಟ್ಟೆಯಲ್ಲಿ ಉಪಹಾರದ ವ್ಯವಸ್ಥೆ ಮಾಡಲಾಗಿತ್ತು.

ಎಳನೀರು, ಕಿವಿ, ಪ್ಲಮ್‌ ಸೇರಿದಂತೆ ಹಲವು ಹಣ್ಣುಗಳನ್ನು ಇಡಲಾಗಿತ್ತು. ಮೈಸೂರು ಮಸಾಲೆ ದೋಸೆ, ಇಡ್ಲಿ, ಸಾಂಬಾರ್‌, ಚಟ್ನಿ, ಶ್ಯಾವಿಗೆ ಉಪ್ಪಿಟ್ಟು, ಸಬ್ಬಕ್ಕಿ ವಡೆ, ಮೈಸೂರು ಪಾಕ್‌, ಗೋಧಿ ಹಾಲ್ಬಾಯಿ ಮತ್ತು ಬಾದಾಮ್‌ ಹಲ್ವಾವನ್ನು ಗಣ್ಯರಿಗೆ ಬಡಿಸಲಾಯಿತು.

ಉಪಹಾರದ ಬಗ್ಗೆ ಸಂತಸ ವ್ಯಕ್ತಪಡಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ಉಪಹಾರದ ನಂತರ ಅರಮನೆಯ ಕೆಲವು ಮುಖ್ಯ ಭಾಗಗಳನ್ನು ವೀಕ್ಷಣೆ ಮಾಡಿದರು. ಉಪಹಾರದ ಬಳಿಕ ರಾಷ್ಟ್ರಪತಿಗಳ ಜೊತೆ ರಾಜವಂಶ್ಥರು ಫೋಟೋ ಕ್ಲಿಕ್ಕಿಸಿಕೊಂಡರು.

Tags:
error: Content is protected !!