ಮೈಸೂರು ನಗರ

ಗಲಾಟೆ ಹಿಂದೆ ಆರ್‌ಎಸ್‌ಎಸ್‌ ಕೈವಾಡ: ಎಂ. ಲಕ್ಷ್ಮಣ್‌

ಮೈಸೂರು: ಉದಯಗಿರಿ ಪೊಲೀಸ್‌ ಠಾಣೆಯಲ್ಲಿ ನಡೆದ ಗಲಾಟೆಯ ಹಿಂದೆ ಆರ್‌ಎಸ್‌ಎಸ್‌ನ ಕೈವಾಡಿವಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಹೇಳಿದ್ದಾರೆ.

ಇಂದು (ಫೆ.13) ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಿಪಕ್ಷ ನಾಯಕ ಆರ್‌.ಅಶೋಕ್‌ ಧಮ್ಕಿಗೆ ಹೆದರಿ ಪೊಲೀಸರು ಎಫ್‌ಐಆರ್‌ ದಾಖಲು ಮಾಡಿದ್ದಾರೆ. ಸುಮಾರು ಒಂದು ಸಾವಿರ ಜನರ ಮೇಲೆ ದೂರು ದಾಖಲು ಆಗಿದೆ. ಹಲವರನ್ನು ಬಂಧಿಸಿದ್ದಾರೆ. ಮುಂದಿನ ದಿನಗಳಲ್ಲಿ ಎಷ್ಟು ಜನರನ್ನು ಬಂಧಿಸುತ್ತಾರೆ ಎಂಬ ಮಾಹಿತಿ ಇಲ್ಲ. ಅಲ್ಲಿ ನೆರೆದಿದ್ದ ಪೈಕಿ ಒಂದು ಸಾವಿರ ಜನರು ಇರಲೇ ಇಲ್ಲ ಎಂದು ತಿಳಿಸಿದರು.

ಉದಯಗಿರಿ ಪೊಲೀಸ್‌ ಠಾಣೆ ಗಲಾಟೆಗೆ ಆರ್‌ಎಸ್‌ಎಸ್‌ನ ಸುರೇಶ್‌ ಎಂಬಾತ ಕಾರಣ. ಈ ಘಟನೆಯ ಹಿಂದೆ ಯಾರಿದ್ದಾರೆ ಎಂಬುದರ ತನಿಖೆ ಆಗಬೇಕು. ಈ ಸಂಬಂಧ ಕಂಪ್ಲೆಟ್‌ ನೀಡಲು ಹೋದರೆ, ವಿಪಕ್ಷ ನಾಯಕರು ಪೊಲೀಸರ ಜೊತೆ ಸಭೆ ನಡೆಸುತ್ತಿದ್ದರು. ಪೊಲೀಸ್‌ ಠಾಣೆಯ ಒಳಗೆ ಸಭೆ ನಡೆಸಲು ಅವಕಾಶ ಇದೆಯಾ, ಇದರ ಬಗ್ಗೆ ಸ್ಪಷ್ಟನೆ ಕೊಡಬೇಕು ಎಂದರು.

ಮುಂದುವರಿದು ಮಾತನಾಡುತ್ತಾ, ಆರ್‌. ಅಶೋಕ್‌, ಛಲವಾದಿ ನಾರಾಯಣಸ್ವಾಮಿ ಅವರನ್ನು ಆರ್‌ಎಸ್‌ಎಸ್‌ ಚಡ್ಡಿತೊಳೆಯಲಿಕ್ಕೆ ಇಟ್ಟುಕೊಂಡಿರುವುದು. ಛಲವಾದಿ ನಾರಾಯಣ್‌ಗೆ ಎಂಎಲ್‌ಸಿ ಸ್ಥಾನ ನೀಡಿರುವುದೇ ಆರ್‌ಎಸ್‌ಎಸ್‌ ಚಡ್ಡಿ ಹೊತ್ತಾಡಲು ಹಾಗೂ ವಿರೋಧ ಪಕ್ಷದ ನಾಯಕರನ್ನು ಬೈಯ್ಯಲು ಎಂದು ಹೇಳಿದರು.

ಪೊಲೀಸರು ಆರೆಸ್ಟ್‌ ಮಾಡಿರುವ 15ಜನರ ಪೈಕಿ ಕೆಲವರು ಮುಗ್ದರಿದ್ದಾರೆ. ಪಾರದರರ್ಶಕ ತನಿಖೆ ಆಗೇಕು, ಒನ್‌ಸೈಡ್‌ ಆಗಬಾರದು ಎಂದು ಹೇಳಿದರು.

 

ಆಂದೋಲನ ಡೆಸ್ಕ್

Recent Posts

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

1 hour ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

1 hour ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

1 hour ago

ಸುಬ್ಬಮ್ಮ ಜೋಯಿಸ್ ಮೈಸೂರಿನಲ್ಲಿ ತ್ರಿವರ್ಣಧ್ವಜ ಹಾರಿಸಿದ್ದು

ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…

2 hours ago

ಉರಿ ಉಂಡ ಕರ್ಪೂರ ಟಿ.ಎಸ್.ಸುಬ್ಬಣ್ಣ

ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…

2 hours ago

ಬ್ಯಾರಿಸ್ಟರ್ ಏನೋ ಆದೆ ಆದರೆ ಆಮೇಲೆ?

ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…

2 hours ago