ಮೈಸೂರು ನಗರ

RSSನವರು ಅಂಬೇಡ್ಕರ್ ಸಂವಿಧಾನವನ್ನು ವಿರೋಧಿಸಿದ್ದರು, ಇವರ ಬಗ್ಗೆ ಎಚ್ಚರ ಇರಲಿ: ಸಿಎಂ ಸಿದ್ದರಾಮಯ್ಯ ಕರೆ

ಮೈಸೂರು: ಸಂಘ ಪರಿವಾರ ಮತ್ತು RSSನವರು ಅಂಬೇಡ್ಕರ್ ಅವರ ಸಂವಿಧಾನವನ್ನು ವಿರೋಧಿಸಿದ್ದರು. ಈಗಲೂ ವಿರೋಧಿಸುತ್ತಿದ್ದಾರೆ. ಹೀಗಾಗಿ ಇವರ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆಕೊಟ್ಟರು.

ಮೈಸೂರು ವಿಶ್ವವಿದ್ಯಾಲಯದ ರಜತ ಮಹೋತ್ಸವ ಹಾಗೂ ನೂತನ ಜ್ಞಾನ ದರ್ಶನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು.

ಅಂಬೇಡ್ಕರ್ ಅವರು ತಮ್ಮ ಜ್ಞಾನವನ್ನು ಸಮಾಜದ ಬದಲಾವಣೆಗೆ ಬಳಸಿದ ಮಹಾನ್ ಚೇತನ. ಇವರು ಸಮಾಜವನ್ನು ಅರ್ಥ ಮಾಡಿಕೊಳ್ಳಲು ಜ್ಞಾನ‌ ಸಂಪಾದನೆ ಮಾಡಿದರು. ಬಳಿಕ ತಮ್ಮ ಜ್ಞಾನವನ್ನು ಬದುಕಿನುದ್ದಕ್ಕೂ ಸಮಾಜದ ಬದಲಾವಣೆಗೆ ಬಳಸಿದರು ಎಂದು ಮೆಚ್ಚುಗೆ ಸೂಚಿಸಿದರು.

ಅಂಬೇಡ್ಕರ್ ಅವರ ಹೆಸರಲ್ಲಿ ಬಿಜೆಪಿಯವರು, ಸಂಘ ಪರಿವಾರದವರು ಅಪಪ್ರಚಾರ ಮಾಡುತ್ತಿದ್ದಾರೆ. ಅವರನ್ನು ಚುನಾವಣೆಯಲ್ಲಿ ಸೋಲಿಸಿದ್ದು ಕಾಂಗ್ರೆಸ್ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಆದರೆ, ಸತ್ಯ ಏನೆಂದರೆ “ನನ್ನನ್ನು ಚುನಾವಣೆಯಲ್ಲಿ ಸೋಲಿಸಿದ್ದು ಸಾವರ್ಕರ್ ಮತ್ತು ಡಾಂಗೆ” ಎಂದು ಸ್ವತಃ ಅಂಬೇಡ್ಕರ್ ಅವರೇ ತಮ್ಮದೇ ಹಸ್ತಾಕ್ಷರದಲ್ಲಿ ಬರೆದಿದ್ದಾರೆ. ಇಂಥಾ ಸತ್ಯಗಳನ್ನು ಸಮಾಜದ ಮುಂದಿಟ್ಟು ಸಂಘ ಪರಿವಾರದ ಸುಳ್ಳುಗಳನ್ನು ಬಹಿರಂಗಗೊಳಿಸಬೇಕು ಎಂದು ಕರೆ ನೀಡಿದರು.

ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಅನ್ನು ನಾನು ಸ್ಥಾಪಿಸಿದ್ದು ಏಕೆಂದರೆ ಅವರನ್ನು ಓದಿಕೊಂಡವರು ಅವರ ಮಾರ್ಗದಲ್ಲಿ ನಡೆಯಲಿ ಉದ್ದೇಶದಿಂದ. ಅಂಬೇಡ್ಕರ್ ಅವರಿಗೆ ಅಂಬೇಡ್ಕರ್ ಅವರೇ ಸಾಟಿ. ಮತ್ತೊಬ್ಬ ಅಂಬೇಡ್ಕರ್ ಬರಲು ಸಾಧ್ಯವಿಲ್ಲ. ಆದರೆ ಪ್ರತಿಯೊಬ್ಬರೂ ಅವರ ಆದರ್ಶಗಳನ್ನು ಪಾಲಿಸಿ ಅವರ ಹಾದಿಯಲ್ಲಿ ನಡೆಯಬೇಕು ಎಂದರು.

ವಿಶ್ವದ ಎಲ್ಲಾ ಸಂವಿಧಾನಗಳನ್ನು ಓದಿ, ಜೀರ್ಣಿಸಿಕೊಂಡು ಭಾರತೀಯ ಸಮಾಜಕ್ಕೆ ಅನ್ವಯ ಆಗುವ ವಿಶ್ವ ಶ್ರೇಷ್ಠ ಸಂವಿಧಾನವನ್ನು ಅಂಬೇಡ್ಕರ್ ಅವರು ಭಾರತಕ್ಕೆ ಕೊಟ್ಟರು ಎಂದು ವಿವರಿಸಿದರು.

ಇದನ್ನು ಓದಿ: ಅಂಬೇಡ್ಕರ್‌ ಸಮುದಾಯ ಭವನ ನಿರ್ಮಾಣಕ್ಕೆ ಸಚಿವ ಎಚ್‌ಸಿಎಂ ಗುದ್ದಲಿಪೂಜೆ

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶರ ಮೇಲೆ ಸನಾತನಿ ಒಬ್ಬ ಶೂ ಎಸೆದಿರುವುದು ಸನಾತನಿಗಳು, ಪಟ್ಟಭದ್ರರು ಸಮಾಜದಲ್ಲಿ ಇನ್ನೂ ಇದ್ದಾರೆ ಎನ್ನುವುದಕ್ಕೆ ಸಾಕ್ಷಿ ಎಂದರು.

ಶೂ ಎಸೆತವನ್ನು ದಲಿತರಷ್ಟೇ ಅಲ್ಲ. ಪ್ರತಿಯೊಬ್ಬರೂ ವಿರೋಧಿಸಬೇಕು. ಹೀಗಾದಾಗ ಮಾತ್ರ ಸಮಾಜ ಬದಲಾವಣೆಯ ಹಾದಿಯಲ್ಲಿದೆ ಎಂದು ಸಮಾಧಾನ ಪಟ್ಟುಕೊಳ್ಳಬಹುದು ಎಂದರು.

ನಾನು ಬುದ್ದ, ಬಸವ, ಅಂಬೇಡ್ಕರ್ ವಿಚಾರದಲ್ಲಿ ನಂಬಿಕೆ ಇಟ್ಟುಕೊಂಡಿದ್ದೀನಿ. ಈ ಕಾರಣಕ್ಕೇ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯಬೇಕು ಎಂದು ಆಶಿಸುತ್ತೇನೆ. ವಿಜ್ಞಾನ ಓದಿಯೂ ಮೂಢ ನಂಬಿಕೆ ಆಚರಿಸುವವರಾಗಬೇಡಿ ಎಂದರು.

ಮೈಸೂರು ವಿವಿಯಲ್ಲಿ ಅಂಬೇಡ್ಕರ್ ಅಧ್ಯಯನ‌ ಕೇಂದ್ರ ಆಗಿ 25 ವರ್ಷಗಳಾಗಿವೆ. ಈ ಸಂದರ್ಭದಲ್ಲಿ “ವಿಶ್ವ ಜ್ಞಾನಿ ಅಂಬೇಡ್ಕರ್ ಸಭಾ ಭವನ” ಲೋಕಾರ್ಪಣೆ ಆಗುತ್ತಿರುವುದು ಸ್ವಾಗತಾರ್ಹ ಎಂದರು.

ಎಲ್ಲರಿಗೂ ಸಮಾನ ಅವಕಾಶಗಳು ಸಿಗದೇ ಇದ್ದುದರಿಂದ ಅಸಮಾನತೆ ಸೃಷ್ಟಿಯಾಗಿದೆ. ವಿದ್ಯೆ ಯಾರಪ್ಪನ ಮನೆ ಆಸ್ತಿ ಅಲ್ಲ. ಅವಕಾಶಗಳು ಸಿಗಬೇಕು ಅಷ್ಟೆ. ಅವಕಾಶ ಸಿಕ್ಕಾಗ ವಿದ್ವಾಂಸರಾಗುತ್ತಾರೆ, ಜ್ಞಾನಿ ಆಗುತ್ತಾರೆ. ಅಂಬೇಡ್ಕರ್ ಅವರು ತಮ್ಮ ಜ್ಞಾನವನ್ನು ಸಮಾಜದ ಬದಲಾವಣೆಗೆ ಬಳಸಿದ ಮಹಾನ್ ಚೇತನ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಅನಿಲ ಸಿಲಿಂಡರ್ ಬೆಲೆ ಏರಿಕೆ ತರವಲ್ಲ

ಪಶ್ಚಿಮ ಏಷ್ಯಾದ ಯುದ್ಧದ ಹಿನ್ನೆಲೆಯಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿದ್ದು, ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ದರ ರೂ.೬೦…

12 mins ago

ಓದುಗರ ಪತ್ರ: ಮೈಸೂರು ಆಕಾಶವಾಣಿ ಪ್ರಸರಣ ಸಾಮರ್ಥ್ಯ ಹೆಚ್ಚಿಸಿ

ಭಾರತದಲ್ಲೇ ಮೊದಲ ಆಕಾಶವಾಣಿ ಕೇಂದ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮೈಸೂರಿನ ಆಕಾಶವಾಣಿ ಕೇಂದ್ರ ೯೦ ವಸಂತಗಳನ್ನು ಪೂರೈಸಿದ್ದು, ಪ್ರಭಾವಿ ಸಾರ್ವಜನಿಕ…

14 mins ago

ಓದುಗರ ಪತ್ರ: ಆಟ… ಕಿರೀಟ !

ಟಿ-೨೦ವಿಶ್ವಕಪ್‌ನಲ್ಲಿ ಕಿವೀಸ್ ಕಿವಿ ಹಿಂಡಿದ ಇಂಡಿಯಾ ಆಡಿದ್ದು ದಾಖಲೆಗಳ ಆಟ ! ಅದಕ್ಕೇ ಒಲಿಯಿತು ಭಾರತಕ್ಕೆ ವಿಶ್ವಕಪ್ ಕಿರೀಟ !…

17 mins ago

ಓದುಗರ ಪತ್ರ: ಕೊಲ್ಲಿ ಯುದ್ಧ: ವಿಶ್ವ ಸಂಸ್ಥೆಯ ಮೌನವೇಕೆ?

ಇರಾನ್ ಮೇಲೆ ಇಸ್ರೇಲ್-ಅಮೆರಿಕ ರಾಷ್ಟ್ರಗಳು ಯುದ್ಧ ನಡೆಸುತ್ತಿದ್ದು, ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲ ಖಮೇನಿ ಅವರನ್ನು ಹತ್ಯೆ ಮಾಡಿವೆ. ಇದರಿಂದ…

19 mins ago

ಓದುಗರ ಪತ್ರ: ಕಾಲೇಜು ಮೈದಾನದಲ್ಲಿ ಖಾಸಗಿ ಕಾರ್ಯಕ್ರಮಗಳಿಗೆ ಅನುಮತಿ ಬೇಡ

ಮೈಸೂರಿನ ಮಹಾರಾಜ ಕಾಲೇಜಿಗೆ ೧೩೭ ವರ್ಷಗಳ ಇತಿಹಾಸವಿದೆ. ಕಾಲೇಜಿನಲ್ಲಿ ಉತ್ತಮ ಬೋಧನಾ ವ್ಯವಸ್ಥೆಯೂ ಇದ್ದು, ಪ್ರತಿವರ್ಷ ನೂರಾರು ವಿದ್ಯಾರ್ಥಿಗಳು ಇಲ್ಲಿ…

21 mins ago

ಗೂಗಲ್ ಮಹಾತ್ಮೆ: ಗೂಗಲ್ ಮಾತ್ರ ಸತ್ಯ, ಉಳಿದೆಲ್ಲವೂ ಮಿಥ್ಯ?

ರಮಾನಂದ ಶರ್ಮ ಯಾವುದೋ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಟೆಕ್ಕಿಯೊಬ್ಬರು ವೈದ್ಯರ ಬಳಿ ಹೋಗಿದ್ದರಂತೆ. ವೈದ್ಯರು ಅವರನ್ನು ಸ್ಥೂಲವಾಗಿ ಪರೀಕ್ಷಿಸಿ, ಮೂರು…

3 hours ago