_Yaduveer Wadiyar post
ಮೈಸೂರು: ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಬಳಿ ವ್ಯಕ್ತಿಯೋರ್ವ ಹುಚ್ಚಾಟ ಮೆರೆದಿದ್ದ ಪ್ರಕರಣವನ್ನು ಖಂಡಿಸಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಸಂಸದ ಯದುವೀರ್ ಒಡೆಯರ್ ಅವರು, ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪ್ರತಿಮೆಯ ಮೇಲೆ ನಡೆದ ಈ ಅಗೌರವ ಕೃತ್ಯವನ್ನು ನಾವು ಬಲವಾಗಿ ಖಂಡಿಸುತ್ತೇವೆ. ಅವರು ರಾಜ್ಯ ಮತ್ತು ರಾಷ್ಟ್ರಕ್ಕಾಗಿ ಕೈಗೊಂಡ ದೂರದೃಷ್ಟಿಯ ಅಭಿವೃದ್ಧಿ ಕಾರ್ಯಗಳಿಗೆ ಈ ನಾಡಿನ ಜನತೆ ಆಭಾರಿಯಾಗಿ ಸ್ಮರಿಸುತ್ತಿದ್ದಾರೆ. ಅವರ ಗೌರವ ಭಾವನೆಗಳಿಗೆ ಈಗ ಧಕ್ಕೆ ಉಂಟಾಗಿದೆ. ಐತಿಹಾಸಿಕ ಮತ್ತು ಸಾಂಸ್ಕೃತಿಕ ಪ್ರಾಮುಖ್ಯತೆಯ ಸ್ಮಾರಕಗಳು, ಪ್ರತಿಮೆಗಳಿಗೆ ಹೆಚ್ಚಿನ ಜಾಗರೂಕತೆ ಮತ್ತು ರಕ್ಷಣೆಯನ್ನು ವಿಸ್ತರಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಒತ್ತಾಯಿಸಿದರು.
ಇನ್ನು ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ನಮ್ಮ ಪರಂಪರೆ ಮತ್ತು ಹೆಮ್ಮೆಯನ್ನು ಸಂಕೇತಿಸುತ್ತಾರೆ. ಅವರು ನಮ್ಮ ರಾಷ್ಟ್ರದ ಅತ್ಯಮೂಲ್ಯ ಸಂಪತ್ತಾಗಿರುತ್ತಾರೆ. ಹೀಗಾಗಿ ಇನ್ನು ಮುಂದೆ ಇಂತಹ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.
ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…
ಟ್ರಾಫಿಕ್ ನಿಯಮ ಉಲ್ಲಂಘಿಸಿ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡಿರುವವರಿಂದ ಹಣ ವಸೂಲಿ ಮಾಡಲು, ಆ ದಂಡದ ಮೊತ್ತವನ್ನು ಅವರ ಮನೆ…
ತನ್ನ ಪ್ರಾಣವನ್ನೇ ಒತ್ತೆಯಿಟ್ಟು ದುಬೈನಿಂದ ಇಸ್ರೇಲ್‌ನ ಅವೀವ್‌ಗೆ ತೆರಳುತ್ತಿದ್ದ -ದುಬೈ ವಿಮಾನ ಹೈಜಾಕ್ ತಪ್ಪಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್…
ಡಾ . ಚೇತನ ಗುರುರಾಜು, ಮುಖ್ಯ ಶಿಕ್ಷಕಿ, ಅರಿವು ವಿದ್ಯಾಸಂಸ್ಥೆ, ಮೈಸೂರು ಸಾಮಾಜಿಕ ಮಾಧ್ಯಮಗಳ ಬಲೆಗೆ ಸಿಲುಕಿವೆ ಹಲವು ದೇಶಗಳು…
ಸ್ವಾವಲಂಬನೆಯ ಸಂಕೇತ ಮಹಾತ್ಮ ಗಾಂಧೀಜಿ ಮಹಾತ್ಮ ಗಾಂಧೀಜಿ ಅವರು ಭಾರತದ ಸ್ವಾತಂತ್ರ್ಯ ಹೋರಾಟದ ಮಹಾನ್ ನಾಯಕ ಹಾಗೂ ರಾಷ್ಟ್ರಪಿತ ಎಂದು…
ಪರಶುರಾಮ್, ನಿರ್ದೇಶಕರು, ಒಡನಾಡಿ ಸೇವಾ ಸಂಸ್ಥೆ ಗಾಂಧಿ ವಿಚಾರಗಳನ್ನು ಸಂವಾದದ ಮೂಲಕ ಮುನ್ನಡೆಸಲು ಸಾಧ್ಯವೇ? ಅಥವಾ ಅನುಸರಿಸಲು ಸಾಧ್ಯವಾಗದಿರುವ ನಡೆಯನ್ನು…