ಮೈಸೂರು ನಗರ

ಕಣಿಯನಹುಂಡಿ ತೋಟದ ಮನೆಯಲ್ಲಿ ನೆರವೇರಲಿದೆ ಎಸ್‌.ಜಾನಕಿ ಅವರ ಅಂತ್ಯಕ್ರಿಯೆ

ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಲಿದೆ.

ಗಾನಕೋಕಿಲೆ ಎಸ್.ಜಾನಕಿ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನದ ಬಳಿಕ, ಇದೀಗ ಮೈಸೂರಿನ ಮಹಾರಾಜ ಕಾಲೇಜು ಮೈದಾನದಿಂದ ಬೋಗಾದಿಯ ಕಣಿಯನಹುಂಡಿ ಬಳಿ ಇರುವ ಅವರ ತೋಟದ ಮನೆಗೆ ಅಂತ್ಯಕ್ರಿಯೆಗಾಗಿ ಮೆರವಣಿಗೆಯ ಮೂಲಕ ಕೊಂಡೊಯ್ಯಲಾಗುತ್ತಿದೆ.

​ಇಂದು ಬೆಳಿಗ್ಗೆ ಒಂಬತ್ತು ಗಂಟೆಯಿಂದ ಮಹಾರಾಜ ಕಾಲೇಜು ಮೈದಾನದಲ್ಲಿ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಸಾವಿರಾರು ಅಭಿಮಾನಿಗಳು ಸರತಿ ಸಾಲಿನಲ್ಲಿ ನಿಂತು ತಮ್ಮ ನೆಚ್ಚಿನ ಗಾಯಕಿಯ ಅಂತಿಮ ದರ್ಶನ ಪಡೆದರು. ಕನ್ನಡ, ಮಲಯಾಳಂ, ತಮಿಳು ಚಿತ್ರರಂಗದ ಪ್ರಮುಖ ಗಣ್ಯರು, ಕಲಾವಿದರು ಹಾಗೂ ರಾಜಕೀಯ ಮುಖಂಡರು ಅಂತಿಮ ದರ್ಶನ ಪಡೆದು ತೀವ್ರ ಸಂತಾಪ ಸೂಚಿಸಿದರು.

​ಇದೀಗ ಮೃತದೇಹವು ಕಣಿಯನಹುಂಡಿ ತೋಟದ ಮನೆಗೆ ತಲುಪಲಿದ್ದು, ಧಾರ್ಮಿಕ ವಿಧಿವಿಧಾನಗಳ ನಂತರ ಸಕಲ ಸರ್ಕಾರಿ ಗೌರವಗಳೊಂದಿಗೆ ಸಾರ್ವಜನಿಕ ಸಮ್ಮುಖದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.

ಆಂದೋಲನ ಡೆಸ್ಕ್

Recent Posts

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…

15 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ನಾಳೆ ಅಧಿಕೃತ ಚಾಲನೆ

ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…

16 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

16 hours ago

ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅಜಿಂಕ್ಯ ಶಿಂಧೆ ಸಾರಥ್ಯ

ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…

17 hours ago

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

21 hours ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

21 hours ago