ಮೈಸೂರು ನಗರ

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಾ.ರಾ.ಮಹೇಶ್‌ ಸ್ಪರ್ಧೆ ವಿಚಾರ: ಶಾಸಕ ಜಿ.ಟಿ.ದೇವೇಗೌಡ ಮೊದಲ ಪ್ರತಿಕ್ರಿಯೆ

ಮೈಸೂರು: 2028ರ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಮಾಜಿ ಸಚಿವ ಸಾ.ರಾ.ಮಹೇಶ್‌ ಸ್ಪರ್ಧೆ ಮಾಡಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಜಿ.ಟಿ.ದೇವೇಗೌಡ ಪ್ರತಿಕ್ರಿಯೆ ನೀಡಿದ್ದಾರೆ.

ಕಳೆದ ಕೆಲ ದಿನಗಳಿಂದ ಮಾಜಿ ಸಚಿವ ಸಾ.ರಾ.ಮಹೇಶ್‌ ಅವರು 2028ರ ವಿಧಾನಸಭೆ ಚುನಾವಣೆಯಲ್ಲಿ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಕಣಕ್ಕಿಳಿಯಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಇದಕ್ಕೆ ಕಾರಣ ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ ಅವರು ಜೆಡಿಎಸ್‌ನಿಂದ ದೂರ ಉಳಿದಿರುವುದೇ ಆಗಿದೆ.

ಮಾಜಿ ಸಚಿವ ಸಾ.ರಾ.ಮಹೇಶ್‌ ಸ್ಪರ್ಧೆ ಬಗ್ಗೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಜಿ.ಟಿ.ದೇವೇಗೌಡ ಅವರು, ವಿಧಾನಸಭೆ ಚುನಾವಣೆಗೆ ಇನ್ನೂ ಎರಡೂವರೆ ವರ್ಷ ಇದೆ. ಚುನಾವಣೆ ಬಂದಾಗ ವಿಚಾರದ ಬಗ್ಗೆ ಚರ್ಚೆ ಮಾಡೋಣ ಎಂದು ಹೇಳಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಜೆಡಿಎಸ್‌ನಲ್ಲಿ ಇದ್ದೇನೆ. ಜೆಡಿಎಸ್‌ನಿಂದ ಒಂದು ಹೆಜ್ಜೆ ಹೊರ ತೆಗೆದಿಲ್ಲ. ಕೆಲ ವಿಚಾರದಲ್ಲಿ ನೋವಾಗಿದೆ. ಈ ಬಗ್ಗೆ ನಾಯಕರಿಗೂ ಗೊತ್ತಿದೆ. ನನಗೆ ನೋವಾಗಿದೆ ಎಂದು ಪಕ್ಷದಿಂದ ಹೊರ ಹೋಗಿಲ್ಲ. ಜೆಡಿಎಸ್‌ ವಿರುದ್ಧವಾಗಿ ನಾನೂ ಯಾವತ್ತೂ ಮಾತಾಡಿಲ್ಲ. ಒಳ್ಳೆಯ ದಿನ ಬರುತ್ತದೆ. ಎಲ್ಲವೂ ಸರಿ ಹೋಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಎಲ್‌ಪಿಜಿ ಸಿಲಿಂಡರ್‌ ಸಿಗುತ್ತದೆ, ಜನರಲ್ಲಿ ಭೀತಿ ಬೇಡ : ಕೇಂದ್ರ

ಹೊಸದಿಲ್ಲಿ : ಮಧ್ಯಪ್ರಾಚ್ಯದ ಸಂಘರ್ಷದಿಂದ ಉಂಟಾಗಿರುವ ಎಲ್‌ಪಿಜಿ ಸಿಲಿಂಡರ್ ಕೊರತೆ ಬಗ್ಗೆ ಸಾರ್ವಜನಿಕರಲ್ಲಿ ಉದಿಸಿದ ಆತಂಕದ ನಡುವೆ, ಕೇಂದ್ರ ಸರ್ಕಾರವು…

3 hours ago

IPL 2026 | ಮಾ.28ರಿಂದ ಪಂದ್ಯ ಆರಂಭ, ಬೆಂಗಳೂರಿನಲ್ಲಿ ಉದ್ಘಾಟನೆ, ಹೀಗಿದೆ ವೇಳಾಪಟ್ಟಿ

ಬೆಂಗಳೂರು : ಬಹುನಿರೀಕ್ಷಿತ 2026ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ-20 ಕ್ರಿಕೆಟ್ ಟೂರ್ನಿಯ ಮೊದಲ ಹಂತದ ವೇಳಾಪಟ್ಟಿಯನ್ನು…

3 hours ago

“ಸಂಶೋಧನೆಗೆ AI ನಿಂದಲ್ಲ, ಸ್ವಂತಿಕೆಯಿಂದ ಕೂಡಿರಲಿ” : ಕುಲಪತಿ ಶರಣಪ್ಪ ಹಲಸೆ ಸಲಹೆ

ಮೈಸೂರು : ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ ಸಂಶೋಧನೆಗಳನ್ನು ಸಿದ್ಧಪಡಿಸಬೇಕು, AI ತಂತ್ರಜ್ಞಾನದ ಕಡೆ ಮೊರೆಹೋಗುವುದನ್ನು ಕಡಿಮೆ…

4 hours ago

ಖಾತೆ ಮಾಡಿಕೊಡದ ಅಧಿಕಾರಿಗಳು : ರೈತನಿಂದ ವಿಷ ಸೇವನೆ ಯತ್ನ

ಸಾಲಿಗ್ರಾಮ : ತನ್ನ ಜಮೀನಿಗೆ ಸಂಬಂಧಿಸಿದ ಖಾತೆಯನ್ನು ಮಾಡಿಕೊಡದೆ ಸಾಲಿಗ್ರಾಮ ನಾಡಕಚೇರಿ ಅವರು ಸತಾಯಿಸುತ್ತಿದ್ದಾರೆ ಎಂದು ಮನನೊಂದು ಸಾಲಿಗ್ರಾಮದ ನಾಡ…

4 hours ago

ಹಡುಗುಗಳ ಮೇಲೆ ದಾಳಿ : ಇಬ್ಬರು ಭಾರತೀಯರ ಸಾವು

ಹೊಸದಿಲ್ಲಿ : ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಸಮುದ್ರ ವಲಯದಲ್ಲಿ ವ್ಯಾಪಾರಿ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು…

4 hours ago

ಗುಂಡ್ಲುಪೇಟೆ | ಕತ್ತು ಕೂಯ್ದು ವ್ಯಕ್ತಿಯ ಬರ್ಬರ ಹತ್ಯೆ

ಗುಂಡ್ಲುಪೇಟೆ : ಪಟ್ಟಣದ ಹೊರವಲಯದ ವಿಜಯಪುರ ಅಮಾನಿ ಕೆರೆಯ ಬಳಿ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಮೂಖಹಳ್ಳಿ…

5 hours ago