ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸಾ.ರಾ.ಮಹೇಶ್ ಸ್ಪರ್ಧಿಸಲಿದ್ದಾರೆ ಎಂದು ವಿಧಾನಪರಿಷತ್ ಜೆಡಿಎಸ್ ಸದಸ್ಯ ಮಂಜೇಗೌಡ ಹೇಳಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ಮುಂದಿನ ಚುನಾವಣೆಯಲ್ಲಿ ಸಾ.ರಾ.ಮಹೇಶ್ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಾ.ರಾ.ಮಹೇಶ್ ಸ್ಪರ್ಧಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಎಚ್.ಡಿ.ದೇವೇಗೌಡರ ನೇತೃತ್ವದಲ್ಲಿ ಸಭೆ ಇದೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸ್ಪರ್ಧೆಗೆ ಸಾ.ರಾ.ಮಹೇಶ್ ಒಪ್ಪಿದ್ದಾರೆ ಎಂದು ತಿಳಿಸಿದ್ದಾರೆ.
ಜಿ.ಟಿ.ದೇವೇಗೌಡ ಸಹಕಾರ ಕ್ಷೇತ್ರದ ಚುನಾವಣೆಯಲ್ಲಿ ಮೋಸ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. 2028ರ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಸಾ.ರಾ.ಮಹೇಶ್ ಅವರನ್ನು ಅಭ್ಯರ್ಥಿ ಮಾಡುತ್ತೇವೆ. ಎಲ್ಲಾ ವಿಚಾರವನ್ನು ಜೆಡಿಎಸ್ ವರಿಷ್ಠರ ಗಮನಕ್ಕೆ ತರುತ್ತೇವೆ ಎಂದು ವಿಧಾನಪರಿಷತ್ ಜೆಡಿಎಸ್ ಸದ್ಯ ಮಂಜೇಗೌಡ ಹೇಳಿದ್ದಾರೆ.





