ಮೈಸೂರು ನಗರ

ಜ.25 ರಂದು ಮೈಸೂರಲ್ಲಿ ಸಾಮೂಹಿಕ ಸೂರ್ಯ ನಮಸ್ಕಾರ

ಮೈಸೂರು : ಇಲ್ಲಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಜ.25 ರಂದು ಬೆಳಗಿನ ಜಾವ 5.30ಕ್ಕೆ 108 ಸಾಮೂಹಿಕ ಸೂರ್ಯ ನಮಸ್ಕಾರ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಡಾ.ಪಿ.ಎನ್. ಗಣೇಶ್‌ಕುಮಾರ್ ತಿಳಿಸಿದರು.

ನಗರದಲ್ಲಿ ಅವರು ಸುದ್ದಿಗಾರರೊಡನೆ ಮಾತನಾಡಿ, ಮೈಸೂರು ಜಿಲ್ಲಾ ಯೋಗ ಸ್ಪೋರ್ಟ್ಸ್ ಫೌಂಡೇಶನ್, ಮೈಸೂರು ಗಣಪತಿ ಸಚ್ಚಿದಾನಂದ ಆಶ್ರಮ, ಮೈಸೂರು ವಿವೇಕಾನಂದ ಯೋಗ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆ, ಕರ್ನಾಟಕ ರಾಜ್ಯ ಅಮೆಚೂರ್ ಯೋಗ ಸ್ಪೋರ್ಟ್ಸ್ ಅಸೋಸಿಯೇಷನ್ ಹಾಗೂ ಗ್ಲೋಬಲ್ ಯೋಗ ಪೋರ್ ಸಂಯುಕ್ತಾಶ್ರಯದಲ್ಲಿ 35ನೇ ರಥಸಪ್ತಮಿ ಅಂಗವಾಗಿ ವಿವೇಕಾನಂದ ಜಯಂತಿ ಹಾಗೂ ಗಣರಾಜ್ಯೋತ್ಸವ ಪ್ರಯುಕ್ತವಾಗಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಟಿ.ಎಸ್. ಶ್ರೀವತ್ಸ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬಿಜೆಪಿ ಮುಖಂಡ ಸಿದ್ದರಾಜು, ಸರ್ಕಾರಿ ಆಯುರ್ವೇದ ಮಹಾವಿದ್ಯಾಲಯ ಮೈಸೂರು ಪ್ರಾಂಶುಪಾಲ ಶ್ರೀವತ್ಸ, ಗ್ಲೋಬಲ್ ಯೋಗ ಫಾರಂ ಅಧ್ಯಕ್ಷ ಶ್ರೀಹರಿ, ಖಜಾಂಚಿ ಶಶಿಕುಮಾರ್, ನಿವೃತ್ತ ಡಿವೈಎಸ್‌ಪಿ ಉಮೇಶ್ ಗಣಪತಿ ಭಟ್, ಶಿಕ್ಷಣ ಇಲಾಖೆ ನಿವೃತ್ತ ಡಿಡಿಪಿಐ ಮಂಜುಳಾ ಇನ್ನಿತರರು ಆಗಮಿಸಲಿದ್ದಾರೆ. ಇದು ಸಂಪೂರ್ಣ ಉಚಿತ ಕಾರ್ಯಕ್ರಮವಾಗಿದ್ದು, ಆಗಮಿಸುವವರು ಬಿಳಿ ಬಣ್ಣದ ಉಡುಪು ಧರಿಸಬೇಕು ಹಾಗೂ ತಾವೇ ಮ್ಯಾಟ್ ತರಬೇಕು ಎಂದು ಮನವಿ ಮಾಡಿದರು.

ಅಲ್ಲದೇ ಕಾರ್ಯಕ್ರಮದಲ್ಲಿ ಚಿತ್ರಕಲಾ ಸ್ಪರ್ಧೆ, ಯೋಗ ಚರ್ಚಾ ಸ್ಪರ್ಧೆ, ಯೋಗಾಸನ ಸ್ಪರ್ಧೆ ಏರ್ಪಡಿಸಲಾಗಿದೆ. ಸ್ಪರ್ಧೆಯಲ್ಲಿ ವಿಜೇತರಾದರವರಿಗೆ ಬಹುಮಾನ ವಿತರಣೆ ಮಾಡಲಾಗುತ್ತದೆ ಹಾಗೂ 108 ಸಾಮೂಹಿಕ ಸೂರ್ಯ ನಮಸ್ಕಾರದಲ್ಲಿ ಭಾಗವಹಿಸುವ ಎಲ್ಲರಿಗೂ ಪ್ರಮಾಣ ಪತ್ರ ನೀಡಲಾಗುತ್ತೆ ಎಂದು ತಿಳಿಸಿದರು.

ನಿವೃತ್ತ ಡಿಡಿಪಿಐ ಮಂಜುಳಾ, ಶಶಿಕುಮಾರ್, ವಿವೇಕ್, ನಿಶಾಂತ್, ಪ್ರೇಮ್‌ಕುಮಾರ್ ಇದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಜನರ ಹಿತ ಕಾಯಲಿ!

ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…

2 hours ago

ಓದುಗರ ಪತ್ರ: ಜಾಗೃತಿ, ನಿಯಂತ್ರಣ ಇರಬೇಕು

ಆಹಾರದಲ್ಲಿ ಬಳಸುವ ಉಪ್ಪು, ಸಕ್ಕರೆ ಬಳಕೆ ಪ್ರಮಾಣಕ್ಕೆ ಕಡಿವಾಣ ಹಾಕಲು ಅರೋಗ್ಯ ಇಲಾಖೆ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ಹಾಗೆಯೇ…

2 hours ago

ಓದುಗರ ಪತ್ರ: ಚಾ.ನಗರ ಜಿಲ್ಲೆಗೆ ವಿಶೇಷ ಅನುದಾನ ನೀಡಲು ಮುಖ್ಯಮಂತ್ರಿಗಳು ಕ್ರಮ ಕೈಗೊಳ್ಳಲಿ

ಚಾಮರಾಜನಗರ ಜಿಯ ಕೊಳ್ಳೇಗಾಲ ಮತ್ತು ಹನೂರು ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು ರೂ.೫೦೦ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ…

2 hours ago

ಆಯಾ ಕೆಲಸ ಮಾಡಿ ಮಕ್ಕಳನ್ನು ಮಾಸ್ಟರ್ಸ್‌ ಮಾಡಿದ ಸತ್ಯಮ್ಮ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳು ದೊಡ್ಡ ಹುದ್ದೆಗಳಿಗೆ ಹೋದರೂ ತನ್ನ ಕಾಯಕ ಮುಂದುವರಿಸಿರುವ ‘ಮಹಾತಾಯಿ’ ತೆಲಂಗಾಣದ ಸಂಗಾರೆಡ್ಡಿಯ ರಾಕೇಶ್…

2 hours ago

ಮಂಜಿನ ನಗರಿಯಲ್ಲಿ ರಸ್ತೆಗಳ ದುಸ್ಥಿತಿ

ಪುನೀತ್ ಮಡಿಕೇರಿ ಮಡಿಕೇರಿ ದಸರಾ ಸಮೀಪಿಸುತ್ತಿದ್ದರೂ ಗುಂಡಿಗಳಿಗೆ ಸಿಗದ ಮುಕ್ತಿ ಮಡಿಕೇರಿ ದಸರಾ ಜನೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಆದರೆ, ದಸರಾ…

2 hours ago

ಅ.೧, ೨ರಂದು ಶ್ರೀ ಗುರುಮಲ್ಲೇಶ್ವರ ದಾಸೋಹ ಭವನ ಉದ್ಘಾಟನೆ

ಮಹೇಂದ್ರ ಹಸಗೂಲಿ ದೇಪಾಪುರದಲ್ಲಿ ಗುಡಿಸಲಿನಲ್ಲಿ ಆರಂಭವಾದ ಅನ್ನ ದಾಸೋಹಕ್ಕೆ ಈಗ ದಾಸೋಹ ಭವನದ ರೂಪ ಗುಂಡ್ಲುಪೇಟೆ: ಸಣ್ಣ ಗುಡಿಸಲಿನಲ್ಲಿ ಆರಂಭಗೊಂಡ…

2 hours ago