ಮೈಸೂರು: ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಇ.ತುಕಾರಾಂ ಪತ್ನಿ ಅನ್ನಪೂರ್ಣ ಅವರು ಸ್ಪರ್ಧೆ ಮಾಡಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ರಾಜ್ಯದಲ್ಲಿ ಮೂರು ಕ್ಷೇತ್ರಗಳ ಉಪಚುನಾವಣೆ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಸಂಡೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯ ಹೆಸರನ್ನು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಈ ಬಗ್ಗೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಇ.ತುಕಾರಾಂ ಅವರ ಪತ್ನಿಗೆ ಸಂಡೂರು ಉಪಚುನಾವಣೆ ಟಿಕೆಟ್ ನೀಡುವುದಾಗಿ ಘೋಷಿಸಿದ್ದಾರೆ.
ಇನ್ನು ಮುಂದುವರಿದು ಮಾತನಾಡಿದ ಅವರು, ಇಂದೇ ಚನ್ನಪಟ್ಟಣ ಕಾಂಗ್ರೆಸ್ ಅಭ್ಯರ್ಥಿಯ ಹೆಸರನ್ನು ಸಹ ಘೋಷಣೆ ಮಾಡಲಾಗುತ್ತದೆ. ನಮ್ಮ ಅಧ್ಯಕ್ಷರು ಅಲ್ಲೇ ಇದ್ದು, ಅಭ್ಯರ್ಥಿ ಬಗ್ಗೆ ಅವರೇ ತೀರ್ಮಾನ ಮಾಡುತ್ತಾರೆ. ಮಾಜಿ ಸಂಸದ ಡಿ.ಕೆ.ಸುರೇಶ್ ಹೆಸರು ಚರ್ಚೆಯಲ್ಲಿದೆ. ಸಂಜೆಯ ವೇಳೆಗೆ ಅಭ್ಯರ್ಥಿ ಯಾರೆಂದು ಘೋಷಣೆ ಮಾಡುತ್ತೇವೆ ಎಂದು ತಿಳಿಸಿದರು.