ಮೈಸೂರು: ನಾಳೆ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ವಿದ್ಯುಕ್ತ ಚಾಲನೆ ದೊರೆಯಲಿದೆ.
ಈ ಮಧ್ಯೆ ಖ್ಯಾತ ಶಹನಾಯ್ ವಾದಕ ಪಂಡಿತ್ ಬಸವರಾಜ ಭಜಂತ್ರಿ ಹೆಡಿಗ್ಗೊಂಡ ಅವರಿಗೆ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರಕಟವಾಗಿದೆ.
ಈ ಹಿನ್ನೆಲೆಯಲ್ಲಿ ನಾಳೆ ಅರಮನೆ ಮುಂಭಾಗ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ದಸರಾ ಉದ್ಘಾಟಕರಾದ ಹಂಪಾ ನಾಗರಾಜಯ್ಯ ಹಾಗೂ ಸಿಎಂ ಸಿದ್ದರಾಮಯ್ಯ ಅವರು, ಪಂಡಿತ್ ಬಸವರಾಜ ಭಜಂತ್ರಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಭಜಂತ್ರಿ ಅವರು ಹಾವೇರಿ ಜಿಲ್ಲೆ ಬ್ಯಾಡಗಿ ತಾಲ್ಲೂಕಿನ ಹೆಡಿಗ್ಗೊಂಡ ಗ್ರಾಮದವರಾಗಿದ್ದು, ಪಂಡಿತ್ ಶ್ರೀ ಬಸವರಾಜ ಭಜಂತ್ರಿ ಅವರು ಶಹನಾಯಿ ರಾಜ ಎಂದು ಗುರುತಿಸಿಕೊಂಡಿದ್ದಾರೆ.