ಮೈಸೂರು ನಗರ

ಪಾಕಿಸ್ತಾನಕ್ಕೆ ನುಗ್ಗಿ ಹೊಡಿಬೇಕು: ಸಚಿವ ಸಂತೋಷ್ ಲಾಡ್ ಆಕ್ರೋಶ

ಮೈಸೂರು: ನೆರೆಯ ದೇಶ ಪಾಕಿಸ್ತಾನ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಯಾವುದೇ ನಿರ್ಧಾರ ತೆಗೆದುಕೊಂಡರೂ ಸ್ವಾಗತ ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಹೇಳಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಕ್‌ಗೆ ನುಗ್ಗಿ ಹೊಡಿಬೇಕು ಅನ್ನೋದು ನನ್ನ ವೈಯಕ್ತಿಕ ಅಭಿಪ್ರಾಯ. ಈ ಹಿಂದೆ ಇಂದಿರಾ ಗಾಂಧಿ ಅವರು ಪಾಕಿಸ್ತಾನದವರನ್ನು ಮಂಡಿಯೂರಿ ಕೂರುವಂತೆ ಮಾಡಿದ್ರು. ಕಳೆದ 1971ರಲ್ಲಿ ನಡೆದ ಯುದ್ಧದ ಸಂದರ್ಭ ಯಾವ ರೀತಿ ಕ್ರಮ ಆಗಿತ್ತು ಅದನ್ನು ನೆನಪಿಸಿಕೊಳ್ಳಬೇಕು. ಅದೇ ರೀತಿ ಈಗಲೂ ಮಾಡಲಿ. ಆದ್ದರಿಂದ ಪ್ರಧಾನಿ ಮೋದಿ ಯಾವುದೇ ನಿರ್ಧಾರ ಕೈಗೊಂಡರು ನಾವು ಸ್ವಾಗತ ಮಾಡ್ತೀವಿ ಎಂದರು.

ಇನ್ನು ಮಂಗಳೂರಿನಲ್ಲಿ ಪಾಕ್ ಪರ ಘೋಷಣೆ ಕೂಗಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಪಾಕ್ ಪರ ನಮ್ಮ ಮನೆಯವರೇ ಘೋಷಣೆ ಕೂಗಿದ್ರು ಶಿಕ್ಷೆ ಆಗಬೇಕು. ಮಂಗಳೂರಿನಲ್ಲಿ ಪಾಕ್‌ ಪರ ಘೋಷಣೆ ಕೂಗಿದವರ ವಿರುದ್ಧ ಕ್ರಮ ಆಗುತ್ತೆ. ಯಾರೇ ಪಾಕ್ ಪರ ಘೋಷಣೆ ಕೂಗಿದ್ರು ಶಿಕ್ಷೆ ಆಗಲಿ. ನನ್ನ ಅಣ್ಣ ತಮ್ಮನಾಗಲಿ ಯಾರೇ ಆಗಲಿ ಶಿಕ್ಷೆ ಆಗಲೇಬೇಕು.

ಇಂತಹ ಘಟನೆಗಳು ಯಾಕೆ ಜಾಸ್ತಿಯಾಗುತ್ತಿವೆ ಹಾಗೂ ಯಾಕೆ ಪಾಕ್‌ ಪರ ಘೋಷಣೆ ಕೂಗುತ್ತಿದ್ದಾರೆ ಗೊತ್ತಿಲ್ಲ. ನಾವಂತೂ ಘೋಷಣೆ ಕೂಗುವವರ ಪರವಿಲ್ಲ. ದೇಶದ ನಾನಾ ಭಾಗಗಳಲ್ಲೂ ಇಂತಹ ಘಟನೆಗಳು ನಡೆದಿವೆ. ಯಾಕೆ ನಡೆಯುತ್ತಿದೆ ಅನ್ನೋದಕ್ಕೆ ನಾನು ಹೊಣೆಗಾರ ಅಲ್ಲ. ಅದಕ್ಕೆ ನಾನು ಹೇಗೆ ಪ್ರತಿಕ್ರಿಯೆ ನೀಡಲಿ? ಎಂದು ಪ್ರಶ್ನೆ ಮಾಡಿದ ಸಚಿವರು, ದೇಶದಲ್ಲಿ ಕೆಲವು ಕಡೆ ಮುಸ್ಲಿಮರ ಮೇಲೂ ದೌರ್ಜನ್ಯ ನಡೆಯುತ್ತೆ ಅದನ್ನೂ ಕೇಳಬೇಕಲ್ಲ ಎಂದು ಮಾಧ್ಯಮಗಳ ಪ್ರಶ್ನೆಗೆ ಖಡಕ್ ಪ್ರತಿಕ್ರಿಯೆ ಕೊಟ್ಟರು.

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

9 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

13 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

13 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

13 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

13 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

13 hours ago