ಮೈಸೂರು ನಗರ

ಸಚಿವ ಜಮೀರ್‌ ಅಹಮ್ಮದ್‌ ಚಡ್ಡಿ ಹೇಳಿಕೆಗೆ ಮಾಜಿ ಸಚಿವ ಸಾ.ರಾ.ಮಹೇಶ್‌ ತಿರುಗೇಟು

ಮೈಸೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಬಗ್ಗೆ ಲಘುವಾಗಿ ಮಾತನಾಡಿದ್ದ ಸಚಿವ ಜಮೀರ್‌ ಅಹಮ್ಮದ್‌ಗೆ ಮಾಜಿ ಸಚಿವ ಸಾ.ರಾ.ಮಗೇಶ್‌ ತಿರುಗೇಟು ನೀಡಿದ್ದಾರೆ.

ಕೇಂದ್ರ ಸಚಿವ ಎಚ್‌ಡಿಕೆ ಅವರ ಪ್ಯಾಂಟ್‌ ಒಳಗೆ ಖಾಕಿ ಚಡ್ಡಿ ಇದೆ ಎಂದು ಜಮೀರ್‌ ಅಹಮ್ಮದ್‌ ಲಘುವಾಗಿ ಮಾತನಾಡಿದ್ದರು.

ಈ ಬಗ್ಗೆ ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಚಿವ ಸಾ.ರಾ.ಮಹೇಶ್‌ ಅವರು, ದರಿದ್ರ ನಾರಾಯಣ ಹರಿ ಅಂತ 2006ರಲ್ಲಿ ಚಂದ ಎತ್ತಿ ಮಾಜಿ ಪ್ರಧಾನಿ ದೇವೇಗೌಡ ಅವರು, ನಿಮ್ಮನ್ನು ಶಾಸಕರನ್ನಾಗಿ ಮಾಡಿದ್ದರು. ಲಘುವಾಗಿ ಮಾತನಾಡುವುದು ಸರಿಯಲ್ಲ. ಇದೆಲ್ಲವನ್ನು ನೋಡಿದರೆ ಜನರಿಗೆ ರಾಜಕಾರಣದ ಬಗ್ಗೆ ಕೆಟ್ಟ ಮನೋಭಾವನೆ ಬೆಳೆಯುತ್ತದೆ ಎಂದು ಜಮೀರ್‌ ಅಹಮ್ಮದ್‌ಗೆ ತಿರುಗೇಟು ನೀಡಿದರು.

ಎಚ್‌.ಡಿ.ಕುಮಾರಸ್ವಾಮಿ ಅವರ ಬಗ್ಗೆ ಲಘುವಾಗಿ ಮಾತನಾಡುವುದನ್ನು ನಿಲ್ಲಿಸಬೇಕು. ನೀವು ನಡೆದು ಬಂದ ಹಾದಿ ಬಗ್ಗೆ ಒಮ್ಮೆ ಕೂತು ಯೋಚನೆ ಮಾಡಿ. ಆಗ ಯಾರ ಬಗ್ಗೆಯೂ ಮಾತನಾಡುವುದಿಲ್ಲ ಎಂದು ಕಿಡಿಕಾರಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಸಿಎಂಗೆ ನಾನು ಮನವಿ ಮಾಡಿಕೊಳ್ಳುತ್ತೇನೆ. ಅಧಿಕಾರಕ್ಕಾಗಿ ಆತ್ಮಸಾಕ್ಷಿ ವಿರುದ್ಧ ನಡೆದುಕೊಳ್ಳಬೇಡಿ. ತಪ್ಪು ಮಾಡಿದವರನ್ನು ಮುಲಾಜಿಲ್ಲದೇ ಕಂಬಿ ಹಿಂದೆ ಹಾಕಿ ಎಂದು ಒತ್ತಾಯಿಸಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ವಿಮಾನ ದುರಂತದಲ್ಲಿ ಪ್ರಾಣ ಕಳೆದುಕೊಂಡ ಪ್ರಮುಖ ರಾಜಕಾರಣಿಗಳಿವರು…

ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…

2 hours ago

ಹೆಬ್ಬಾಳಿನಲ್ಲಿ ಡ್ರಗ್ಸ್‌ ಲ್ಯಾಬ್‌ ಶಂಕೆ : ಶೆಡ್‌ವೊಂದರ ಮೇಲೆ ಎನ್‌ಸಿಬಿ ದಾಳಿ

ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…

2 hours ago

ನಿಗಮ ಮಂಡಳಿ | ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ

ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…

2 hours ago

ಡಿಜಿಟಲ್‌ ಅರೆಸ್ಟ್‌ ಕುತಂತ್ರ : 1 ಕೋಟಿ ವಂಚನೆ

ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…

2 hours ago

ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್‌ ಇನ್ನಿಲ್ಲ ; ಬೆಂಗಳೂರು ಚಲೋ ಮುಂದೂಡಿಕೆ

ಬೆಂಗಳೂರು : ಕೆಎಸ್‌ಆರ್‌ಟಿಸಿ ಸ್ಟಾಫ್‌ ವರ್ಕರ್ಸ್‌ ಫೆಡರೇಷನ್‌ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್‌ ಸುಬ್ಬರಾವ್‌ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…

3 hours ago

ಮೈಸೂರು | ಮೃಗಾಲಯದ ಯುವರಾಜ ಸಾವು

ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…

3 hours ago