Mysore
27
scattered clouds

Social Media

ಮಂಗಳವಾರ, 18 ಆಗಸ್ಟ್ 2026
Light
Dark

ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ: ಪರೀಕ್ಷಾ ಕೇಂದ್ರದ ಸುತ್ತಮುತ್ತ ನಿಷೇಧಾಜ್ಞೆ ಜಾರಿ

ಮೈಸೂರು: ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, ಮಾರ್ಚ್.‌17ರವರೆಗೂ ನಡೆಯಲಿದೆ.

ಮೈಸೂರು ಜಿಲ್ಲೆಯಲ್ಲಿ 35,835 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 15,600 ಪುರುಷ ವಿದ್ಯಾರ್ಥಿಗಳು, 20,122 ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರಾಗಿದ್ದಾರೆ.

ಜಿಲ್ಲೆಯಾದ್ಯಂತ 51 ಪರೀಕ್ಷೆ ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದ್ದು, ಮೈಸೂರು ನಗರದಲ್ಲಿ 28, ಗ್ರಾಮಾಂತರದಲ್ಲಿ 23 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ.

ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಉಚಿತ KSRTC ಬಸ್ ವ್ಯವಸ್ಥೆ ಮಾಡಲಾಗಿದ್ದು, ಪರೀಕ್ಷಾ ಕೇಂದ್ರದ 200 ಮೀಟರ್ ಸುತ್ತಮುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಪರೀಕ್ಷಾ ಕೇಂದ್ರದ ಒಳಗೆ ಮೊಬೈಲ್ ನಿಷೇಧ ಮಾಡಲಾಗಿದ್ದು, ಪರೀಕ್ಷಾ ಕೇಂದ್ರದಲ್ಲಿ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಕಲ್ಪಿಸಲಾಗಿದೆ.

ಪರೀಕ್ಷಾ ಕೇಂದ್ರಗಳ ಮೇಲೆ ಶಿಕ್ಷಣ ಇಲಾಖೆ ಹದ್ದಿನ ಕಣ್ಣಿಟ್ಟಿದ್ದು, ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ರಾಜಕೀಯ ಗಣ್ಯರು ಶುಭ ಹಾರೈಸಿದ್ದಾರೆ.

Tags:
error: Content is protected !!