ಮೈಸೂರು: 2025ರ ಹೊಸ ವರ್ಷಾಚರಣೆಗೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕ್ಷಣಗಣನೆ ಆರಂಭವಾಗಿದ್ದು, ಚಾಮುಂಡಿ ಬೆಟ್ಟದಲ್ಲಿ ಯಾವುದೇ ಅಹಿತಕರ ಘಟನೆ ಸಂಭವಿಸಿದಂತೆ ಪೊಲೀಸ್ ಇಲಾಖೆ ಹೈ ಆಲರ್ಟ್ ಆಗಿದೆ ಎಂದು ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಆದೇಶ ಹೊರಡಿಸಿದ್ದಾರೆ.
ಈ ಕುರಿತು ಆದೇಶ ಹೊರಡಿಸಿರುವ ಮೈಸೂರು ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್ ಹಾಕಲಾಗಿದೆ. ಅಲ್ಲದೇ ಇಂದು(ಡಿಸೆಂಬರ್.31) ರಾತ್ರಿ 8 ಗಂಟೆಯಿಂದ 2025ರ ಜನವರಿ 1ರ ಬೆಳಿಗ್ಗೆ 6 ಗಂಟೆಯವರೆಗೂ ಬೆಟ್ಟಕ್ಕೆ ಆಗಮಿಸುವ ಪ್ರವಾಸಿಗರಿಗೆ ಹಾಗೂ ಭಕ್ತರಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಇನ್ನೂ ಚಾಮುಂಡಿ ಬೆಟ್ಟದಲ್ಲಿರುವವರೆಲ್ಲರೂ ರಾತ್ರಿ 9 ಗಂಟೆಯ ನಂತರ ಖಾಲಿ ಮಾಡಿಕೊಂಡು ಕೆಳಕ್ಕೆ ಬರಬೇಕು. ಆದರೆ ಬೆಟ್ಟಕ್ಕೆ ಊಟ ಮತ್ತು ಮದ್ಯವನ್ನು ತೆಗೆದುಕೊಂಡು ಹೋಗುತ್ತಿಲ್ಲ. ತಾವರೆಕಟ್ಟೆ ಮಾರ್ಗದ ಮೂಲಕ ಬೆಟ್ಟದಿಂದ ನಿರ್ಗಮಿಸಬೇಕು. ಬೆಟ್ಟದ ನಿವಾಸಿಗಳನ್ನು ಹೊರತು ಪಡಿಸಿ ಯಾರೇ ಹೋದರೂ ಅಂತಹವರಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಆದರೆ ಹೊಸ ವರ್ಷದ ದಿನದಂದು ಚಾಮುಂಡಿ ದೇವಿ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಹೇಳಿದ್ದಾರೆ.
ಹೊಸ ವರ್ಷಾಚರಣೆ ಖಾಕಿ ಕಣ್ಗಾವಲು
ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಪೊಲೀಸರು ಹೈ ಅಲರ್ಟ್ ಆಗಿದ್ದು, ನಗರದಲ್ಲಿ ಯಾವುದೇ ಅಹಿತಕರ ಘಟನೆಗಲು ಸಂಭವಿಸಿದಂತೆ ಖಾಕಿ ಕಣ್ಗಾವಲು ವಹಿಸಿದೆ. ಹೀಗಾಗಿ ಪೊಲೀಸ್ ಇಲಾಖೆಯೂ ಅರಮನೆ, ಚಾಮುಂಡಿ ಬೆಟ್ಟ, ಮೃಗಾಲಯ, ರೈಲ್ವೆ ನಿಲ್ದಾಣ ಹಾಗೂ ಬಸ್ ನಿಲ್ದಾಣ ಸೇರಿದಂತೆ ಬಾಂಬ್ ಪತ್ತೆದಳ ಹಾಗೂ ಶ್ವಾನದಳ ದಿಂದ ತೀವ್ರ ತಪಾಸಣೆ ನಡೆಸಲಾಗಿದೆ. ಅಲ್ಲದೇ ನಗರದ ಅನೇಕ ಸ್ಥಳಗಳಲ್ಲಿಯೂ ಸಹ ಶೋಧ ನಡೆಸಿದ್ದು, ಅನುಮಾನಸ್ಪದ ವಸ್ತು ಹಾಗೂ ವ್ಯಕ್ತಿಗಳನ್ನು ತಪಾಸಣಾ ಕಾರ್ಯ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…
ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…
ಮಂಡ್ಯ: ಇದೇ ಅಕ್ಟೋಬರ್.11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…
ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್…