ಮೈಸೂರು ನಗರ

ಹೊಸ ವರ್ಷಾಚರಣೆಗೆ ಪೋಲಿಸರ ಕಣ್ಗಾವಲು: ಸೀಮಾ ಲಾಟ್ಕರ್‌

ಮೈಸೂರು: ಸಾಂಸಕೃತಿಕ ನಗರಿ ಮೈಸೂರು ನಗರದಾದ್ಯಂತ ಹೊಸ ವರ್ಷಾಚರಣೆಗೆ ಕ್ಷಣಗಣನೆ ಶುರುವಾಗಿದ್ದು, ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಪೊಲೀಸರು ಬಿಗಿ ಬಂದೋಬಸ್ತ್‌ ಮೂಲಕ ಕಣ್ಗಾವಲು ವಹಿಸಲಿದ್ದಾರೆ ಎಂದು ಮೈಸೂರು ಪೊಲೀಸ್‌ ಕಮಿಷನರ್‌ ಸೀಮಾ ಲಾಟ್ಕರ್‌ ತಿಳಿಸಿದ್ದಾರೆ.

ಈ ಕುರಿತು ಇಂದು(ಡಿಸೆಂಬರ್‌.30) ಪೊಲೀಸ್‌ ಆಯುಕ್ತರ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹೊಸ ವರ್ಷಾಚರಣೆ ಪ್ರಯುಕ್ತ 2025ರ ಜನವರಿ 1 ರಂದು ಮಧ್ಯರಾತ್ರಿ ಒಂದು ಗಂಟೆಯವರೆಗೂ ಅವಕಾಶ ನೀಡಲಾಗಿದೆ. ಆದರೆ ಈ ನಿಯಮವನ್ನು ಮೀರಿದರೆ ದಂಡ ಬಿಳೋದು ಖಂಡಿತ. ಇನ್ನೂ ಶುಭ ಕೋರುವ ನೆಪದಲ್ಲಿ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು. ಅಲ್ಲದೇ ಮಹಿಳೆಯರ ರಕ್ಷಣೆಗಾಗಿ ಪಿಂಕ್‌ ಗರುಡ ಪೊಲೀಸ್‌ ಪಡೆ ಗಸ್ತು ತಿರುಗಲಿದೆ. ಜೊತೆಗೆ ಹೊಸ ವರ್ಷ ಸಂಭ್ರಮದ ನೆಪದಲ್ಲಿ ವೀಲ್ಹಿಂಗ್‌ ಹಾಗೂ ಡ್ರಾಗ್‌ ರೇಸ್‌, ಕರ್ಕಶ ಶಬ್ದ ಮಾಡುವುದನ್ನು ತಡೆಗಟ್ಟಲು ಕ್ಷಿಪ್ರ ಪಡೆ ಕಾರ್ಯ ನಿರ್ವಹಿಸಲಿದೆ ಹಾಗೂ ಅದರೊಂದಿಗೆ ವಿದ್ವಂಸಕ ಕೃತ್ಯ ತಡೆಗೆ ಶ್ವಾನ ದಳವೂ ಕೂಡ ಕಾರ್ಯ ನಿರ್ವಹಿಸಲಿದೆ ಎಂದು ಮಾಹಿತಿ ನೀಡಿದ್ದಾರೆ.

ಇನ್ನೂ ನಗರದಾದ್ಯಂತ ಭದ್ರತೆಗಾಗಿ ಪೊಲೀಸ್‌ ಇಲಾಖೆಯ ವತಿಯಿಂದ 4 ಡಿಸಿಪಿ, 12 ಎಸಿಪಿ, 32 ಪಿಐ, 53 ಪಿಎಸ್‌ಐ, 112 ಎಎಸ್‌ಐ, 895 ಎಚ್‌ಸಿ ಹಾಗೂ ಪೊಲೀಸ್‌ ಸಿಬ್ಬಂದಿಗಳನ್ನು ನೇಮಕ ಮಾಡಲಾಗಿದೆ. ಅಲ್ಲದೇ 8 ಸಿಎಆರ್‌ ತುಕಡಿ, 4 ಕೆಎಸ್‌ಆರ್‌ಪಿ, 2 ಕಮಾಂಡೋ ಪಡೆ, 1 ಶ್ವಾನ ದಳ ಹಾಗೂ 2 ಎಎಸ್‌ಪಿಯಿಂದ ಬಿಗಿ ಬಂದೋ ಬಸ್ತ್‌ ಮಾಡುವ ಮೂಲಕ ಕಣ್ಗಾವಲು ಇರಿಸಲಾಗಿದೆ ಎಂದು ಹೇಳಿದ್ದಾರೆ.

ಸಾರ್ವಜನಿಕರು ಒಂದು ವೇಳೆ ನಿಯಮ ಮೀರಿದರೆ ದಂಡ ವಿಧಿಸಲಾಗುವುದು. ಹೊಸ ವರ್ಷಾಚರಣೆಯನ್ನು ಮುಕ್ತಾಯಗೊಳಿಸಲು ಜನವರಿ 2ರ ಮಧ್ಯರಾತ್ರಿ 1 ಗಂಟೆಯವರೆಗೂ ಪೊಲೀಸ್‌ ಇಲಾಖೆ ಗಡುವು ನೀಡಿದೆ ಎಂದಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

11 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

11 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

18 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

18 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

18 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

18 hours ago