ಮೈಸೂರು ನಗರ

ಹಿರಿಯ ಪತ್ರಕರ್ತ ಕೆ.ಬಿ.ಗಣಪತಿ ನಿಧನ

ಮೈಸೂರು: ಮೈಸೂರು ಮಿತ್ರ ಮತ್ತು ಸ್ಟಾರ್ ಆಫ್ ಮೈಸೂರು ಪತ್ರಿಕೆಗಳ ಸಂಸ್ಥಾಪಕರಾದ ಹಿರಿಯ ಪತ್ರಿಕೋದ್ಯಮಿ ಕೆ.ಬಿ. ಗಣಪತಿ (85) ಮೈಸೂರಿನ ಶಾಂತವೇರಿ ಗೋಪಾಲಗೌಡ ಆಸ್ಪತ್ರೆಯಲ್ಲಿ ನಿಧನರಾದರು.

ಕಳೆದ ಐವತ್ತು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದ ಕೆ.ಬಿ. ಗಣಪತಿ ಮೂಲತಃ ಕೊಡಗಿನವರು. ತಮ್ಮದೇ ಅಂಕಣದ ಮೂಲಕ ಗಮನ ಸೆಳೆದಿದ್ದ ಗಣಪತಿ ಅವರು, ಸದಾ ಸುದ್ದಿ ಮನೆಯಲ್ಲಿ ಕ್ರೀಯಾಶೀವಾಗಿದ್ದವರು.

ಹಿರಿಯ ಪತ್ರಕರ್ತರಾದ ಕೆ.ಬಿ.ಗಣಪತಿ ಅವರ ನಿಧನಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತೀವ್ರ ಸಂತಾಪ ವ್ಯಕ್ತಪಡಿಸಿದೆ.

ಘನತೆಯಿಂದ ಪತ್ರಿಕೋದ್ಯಮ ನಡೆಸಿದ ಗಣಪತಿ ಅವರ ನಿಧನದಿಂದ ಸುದ್ದಿಮನೆಯ ಹಿರಿಯ ಕೊಂಡಿಯೊಂದು ಕಳಚಿದಂತಾಗಿದೆ ಎಂದು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಶೋಕಿಸಿದ್ದಾರೆ. ಗಣಪತಿ ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಅವರು ಪ್ರಾರ್ಥಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಕ್ಕಳ ಪರೀಕ್ಷಾ ಸಿದ್ಧತೆಯಲ್ಲಿ ಪೋಷಕರ ಪಾತ್ರದ ಮಹತ್ವ

ಡಾ.ಪಿ.ಮಂಜುನಾಥ ನಕಾರಾತ್ಮಕ ಭಾವನೆ ಮಕ್ಕಳಲ್ಲಿ ಮೂಡದಂತೆ ಎಚ್ಚರ ಅಗತ್ಯ  ಪರೀಕ್ಷೆಗಳು ಕೆಲವೇ ತಿಂಗಳುಗಳಲ್ಲಿ ಸಾಲು ಸಾಲಾಗಿ ಪ್ರಾರಂಭವಾಗಲಿವೆ. ಪರೀಕ್ಷೆ ಹತ್ತಿರವಾಗುತ್ತಿದ್ದಂತೆ…

2 mins ago

ಸಾಧನೆಯ ಹಾದಿಯಲ್ಲಿ ಬೆಳೆದು ಬೆಳಗಿದವರು

೨೦೨೫ ನೇ ಸಾಲಿನಲ್ಲಿ ಹಲವಾರು ಸಾಧಕರು ಹೊರಹೊಮ್ಮಿದ್ದು, ಸಾಹಿತ್ಯ, ಕಲೆ, ವಿಜ್ಞಾನ, ಸಂಶೋಧನೆ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ತಮ್ಮ ಪ್ರತಿಭೆ,…

8 mins ago

ಮಳೆ ಕೊರತೆ; ಭರ್ತಿಯಾಗದ ಉಡುತೊರೆ ಜಲಾಶಯ

ಹನೂರು ತಾಲ್ಲೂಕು ವ್ಯಾಪ್ತಿಯ ರೈತರಲ್ಲಿ ಆತಂಕ ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಸಮರ್ಪಕ ಮಳೆಯಾಗದ ಹಿನ್ನೆಲೆಯಲ್ಲಿ ಉಡುತೊರೆ ಜಲಾಶಯ ಭರ್ತಿಯಾಗದೆ, ಇರುವ…

16 mins ago

ಸಫಾರಿ ಬಂದ್; ವರ್ಷಾಂತ್ಯದಲ್ಲಿ ರೆಸಾರ್ಟ್‌ಗಳಿಗೆ ನಷ್ಟ

ಮಂಜು ಕೋಟೆ ಹೊಸ ವರ್ಷದ ಸನಿಹದಲ್ಲಿ ತುಂಬಿ ತುಳುಕುತ್ತಿದ್ದ ರೆಸಾರ್ಟ್‌ಗಳು ಖಾಲಿ ಖಾಲಿ ಎಚ್.ಡಿ.ಕೋಟೆ: ರೈತರ ಮೇಲೆ ನಿರಂತರ ಹುಲಿ…

20 mins ago

ಅಂಧ ವಿದ್ಯಾರ್ಥಿಗಳಿಗೆ ಡಿಜಿಟಲ್ ದೊಂದಿ!

ಗಿರೀಶ್ ಹುಣಸೂರು ಮೈಸೂರು: ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಹೆಬ್ಬಾಗಿಲು ತೆರೆಯುವ ಪ್ರಮುಖ ಘಟ್ಟವಾದ ದ್ವಿತೀಯ ಪಿಯುಸಿ ಪರೀಕ್ಷೆ-೧ ೨೦೨೬ರ -ಬ್ರವರಿ…

25 mins ago