ಮೈಸೂರು: ಮೈಸೂರು ದಸರಾ ಉದ್ಘಾಟನಾ ಸಂದರ್ಭದಲ್ಲಿ ಪ್ರತಿ ವರ್ಷವೂ ಅರಮನೆ ಆವರಣದಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರದಾನ ಮಾಡುವುದು ಸಂಪ್ರದಾಯ.
ಹೀಗಾಗಿ, ಈ ವರ್ಷ ಈ ಪ್ರತಿಷ್ಠಿತ ಪ್ರಶಸ್ತಿಗೆ ಹಾವೇರಿ ಜಿಲ್ಲೆಯ ಖ್ಯಾತ ಶಹನಾಯಿ ವಾದಕ ಪಂಡಿತ್ ಬಸವರಾಜ ಭಜಂತ್ರಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ಎಸ್ ತಂಗಡಗಿ ಹೇಳಿದ್ದಾರೆ.
ಪಂಡಿತ್ ಎಂ . ವೆಂಕಟೇಶ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ರಚಿಸಲಾದ ಆಯ್ಕೆ ಸಮಿತಿ ಇವರನ್ನು ಆಯ್ಕೆ ಮಾಡಿದೆ.
ನಾಳೆ ಸಂಜೆ ಮೈಸೂರು ಅರಮನೆ ಆವರಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ಈ ಪ್ರತಿಷ್ಠಿತ ಸಂಗೀತ ವಿದ್ವಾನ್ ಪ್ರಶಸ್ತಿಯನ್ನು ಪಂಡಿತ್ ಬಸವರಾಜ ಭಜಂತ್ರಿ ಅವರಿಗೆ ಪ್ರದಾನ ಮಾಡಲಿದ್ದಾರೆ ಎಂದು ಅವರು ತಿಳಿಸಿದರು.
ಈ ಪ್ರಶಸ್ತಿಯು 5 ಲಕ್ಷ ರೂಪಾಯಿ ನಗದು, ಪ್ರಶಸ್ತಿಫಲಕ ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ ಎಂದು ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ.
ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…
ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…
ಹೊಸದಿಲ್ಲಿ: ಮುಂಬರುವ ಐಸಿಸಿ ಟಿ-೨೦ ವಿಶ್ವಕಪ್‌ಗಾಗಿ ೧೫ ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಶುಭಮನ್…
ಹೊಸದಿಲ್ಲಿ : ಮೊಟ್ಟೆ ಸೇವೆನೆಗೆ ಸುರಕ್ಷಿತವಾಗಿದ್ದು ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕವಾಗುವ ಯಾವುದೇ ಅಂಶ ಪತ್ತೆ ಆಗಿಲ್ಲ ಎಂದು ಕೇಂದ್ರ ಆಹಾರ…
ಚಾಮರಾಜನಗರ : ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವಂತಹ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಜಲಶಕ್ತಿ ಮಂತ್ರಾಲಯದ…
ಮೈಸೂರು : ಕ್ರಿಸ್‌ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪ್ರವಾಸಿಗರು, ಸ್ಥಳೀಯರಿಗೆ ಮನರಂಜನೆ ಒದಗಿಸಲು ಅರಮನೆ ಅಂಗಳದಲ್ಲಿ ಡಿ.೨೧ರಿಂದ ೩೧ರವರೆಗೆ…