ಮೈಸೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರಿಂದು ಶಕ್ತಿಧಾಮ ಆಶ್ರಮದ ಮಕ್ಕಳ ಜೊತೆ ಸಂಜು ವೆಡ್ಸ್ ಗೀತಾ-2 ಸಿನಿಮಾ ವೀಕ್ಷಿಸಿ ಖುಷಿಪಟ್ಟರು.
ಮೈಸೂರಿನ ಡಿಆರ್‌ಸಿ ಮಾಲ್‌ನಲ್ಲಿ ಪತ್ನಿ ಗೀತಾ ಜೊತೆ ಶಿವರಾಜ್ ಕುಮಾರ್ ಅವರು ಸಂಜು ವೆಡ್ಸ್ ಗೀತಾ-2 ಸಿನಿಮಾ ವೀಕ್ಷಿಸಿದರು.
ಸಿನಿಮಾ ವೀಕ್ಷಣೆ ಮಾಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಶಿವರಾಜ್ ಕುಮಾರ್ ಅವರು, ಶಕ್ತಿಧಾಮದ ಮಕ್ಕಳ ಜೊತೆ ಸಿನಿಮಾ ನೋಡಿ ಖುಷಿ ಆಗಿದೆ. ಸಿನಿಮಾ ತುಂಬಾ ಚೆನ್ನಾಗಿದೆ. ಗೀತಾ ಹೆಸರಲ್ಲಿ ಒಂದು ಶಕ್ತಿಯಿದೆ. ಈ ಹಿಂದೆ ಅನೇಕ ಸಿನಿಮಾಗಳು ಗೀತಾ ಹೆಸರಿನಲ್ಲಿ ಬಂದು ಹಿಟ್ ಆಗಿವೆ. ಈ ಸಿನಿಮಾವು ಹಿಟ್ ಆಗುತ್ತದೆ. ನಾಗಶೇಖರ್ ಚೆನ್ನಾಗಿ ಸಿನಿಮಾ ಕಟ್ಟಿಕೊಟ್ಟಿದ್ದಾರೆ. ನನಗೂ ಒಂದು ಸಿನಿಮಾ ಡೈರೆಕ್ಟ್ ಮಾಡ್ತೀನಿ ಎಂದು ಈ ಹಿಂದೆ ಹೇಳಿದ್ದರು. ಅದಕ್ಕಾಗಿ ನಾನು ಕೂಡ ಕಾಯ್ತಾ ಇದ್ದೀನಿ ಎಂದರು.
ಇನ್ನು ಮಲ್ಟಿಫ್ಲೆಕ್ಸ್‌ನಲ್ಲಿ ಕನ್ನಡ ಸಿನಿಮಾಗೆ ಸ್ಕ್ರೀನ್ ಸಿಗದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಎಲ್ಲದಕ್ಕೂ ನಮ್ಮನ್ನ ಕೇಳಿದ್ರೆ ಹೇಗೆ? ನೀವು ಕೂಡ ನಮ್ಮ ಜೊತೆ ಕೈಜೋಡಿಸಿ
ಮಾಧ್ಯಮದವರು ನಮ್ಮ ಜೊತೆ ಕೈಜೋಡಿಸಿ. ಯಾಕೆ ಕನ್ನಡ ಸಿನಿಮಾಗೆ ಸ್ಕ್ರೀನ್ ಸಿಗಲ್ಲ ನೋಡೋಣ ಎಂದರು.
ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…
ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…
ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…
ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…
ಮಂಡ್ಯ : ಸಕ್ಕರೆ ನಗರ ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ರಾಜ್ಯ, ರಾಷ್ಟ್ರ ಹಾಗೂ…