ಮೈಸೂರು: ಇಂದು ಮಹಾಶಿವರಾತ್ರಿ ಹಬ್ಬದ ಸಂಭ್ರಮ ಮನೆಮಾಡಿದ್ದು, ತ್ರಿನೇಶ್ವರನಿಗೆ ಮುಖವಾಡ ಧರಿಸಿ ವಿಶೇಷ ಪೂಜೆ ನೆರವೇರಿಸಲಾಯಿತು.
ಮಹಾಶಿವರಾತ್ರಿಯ ಅಂಗವಾಗಿ ಇಂದು ಬೆಳಿಗ್ಗೆಯಿಂದಲೇ ಅರಮನೆ ಆವರಣದಲ್ಲಿರುವ ತ್ರಿನೇಶ್ವರ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ನೆರವೇರಿಸಲಾಗಿದೆ. ತ್ರಿನೇಶ್ವರ ಸ್ವಾಮಿಗೆ 11 ಕೆಜಿ ತೂಕದ ಚಿನ್ನದ ಮುಖವಾಡ ಕೊಳಗವನ್ನು ಧರಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಇಂದು ಮುಂಜಾನೆಯಿಂದಲೇ ಸಾರ್ವಜನಿಕರು ತ್ರಿನೇಶ್ವರನ ದರ್ಶನಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ.
ಉಪವಾಸ ಹಾಗೂ ಜಾಗರಣೆ ಈ ದಿನದ ವಿಶೇಷವಾಗಿದ್ದು, ಮೈಸೂರು ಜಿಲ್ಲೆಯಲ್ಲೂ ಕೂಡ ಶಿವರಾತ್ರಿ ಸಂಭ್ರಮ ಬಹಳ ಜೋರಾಗಿದೆ.





