ಮೈಸೂರು: ಆಷಾಢ ಮಾಸದ ಕಡೆಯ ಶುಕ್ರವಾರವಾದ ಹಿನ್ನೆಲೆಯಲ್ಲಿಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಮೆಟ್ಟಿಲುಗಳ ಮೂಲಕವೇ ಬೆಟ್ವವನ್ನು ಹತ್ತಿ ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೇಶದ ಒಳಿತಿಗಾಗಿ ಹಾಗೂ ಪ್ರಧಾನಿಯವರ ಆಯಸ್ಸು, ಆರೋಗ್ಯಕ್ಕಾಗಿ ದೇವಿಯ ಬಳಿ ಪ್ರಾರ್ಥನೆ ಸಲ್ಲಿಸಿದ್ದೇನೆ. ಈ ಬಾರಿ ರೈತರಿಗೆ ಉತ್ತಮ ಬೆಳೆ ಸಿಗಲಿ, ದೇಶಕ್ಕೆ ರಕ್ಷಣೆ ಸಿಗಲಿ ಎಂದು ಹಾರೈಸಿದರು.





