ಮೈಸೂರು: ನಗರದ ಕೆಆರ್‌ಎಸ್ ರಸ್ತೆಗೆ ಸಿದ್ದರಾಮಯ್ಯ ಅವರ ಹೆಸರಿಡುವ ವಿಚಾರಕ್ಕೆ ಸಂಬಂಧಿಸಿದಂತೆ ವಿರೋಧ ವ್ಯಕ್ತಪಡಿಸಿ ರಸ್ತೆಯ ಅಲ್ಲಲ್ಲಿ ನಿನ್ನೆ ಸಂಜೆ ಅಂಟಿಸಿದ್ದ ಪ್ರಿನ್ಸೆಸ್ ಸ್ಟೀಕರ್ ಅನ್ನು ರಾತ್ರೋರಾತ್ರಿ ತೆರವುಗೊಳಿಸಲಾಗಿದೆ.
ಕೆಆರ್‌ಎಸ್ ರಸ್ತೆಗೆ ಸಿಎಂ ಸಿದ್ದರಾಮಯ್ಯ ಅವರ ಹೆಸರನ್ನು ನಾಮಕರಣ ಮಾಡುವ ವಿಚಾರ ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ಮಧ್ಯೆಯೇ ಕರ್ನಾಟಕ ರಾಷ್ಟ್ರ ಸೇನೆ, ಇನ್ನಿತರ ಕೆಲ ಸಂಘಟನೆಗಳ ಕಾರ್ಯಕರ್ತರು ಈ ರಸ್ತೆಯ ಹಲವು ಭಾಗಗಳಲ್ಲಿ ಬುಧವಾರ(ಜನವರಿ.1) ಸಂಜೆಯ ವೇಳೆ ಪ್ರಿನ್ಸೆಸ್ ರಸ್ತೆ ಎಂಬ ಸ್ಟೀಕರ್ ಅಂಟಿಸಿ ಪೂಜೆ ಸಲ್ಲಿದ್ದರು.
ಈ ಸ್ಟೀಕರ್‌ಅನ್ನು ಕೆಆರ್‌ಎಸ್ ರಸ್ತೆಯ ಚೆಲುವಾಂಬ ಪಾರ್ಕ್ ಪ್ರತಿಮೆಯ ಬಳಿ ಹಾಗೂ ರಸ್ತೆಯ ಅನೇಕ ಕಡೆ ನಾಲ್ವಡಿ ಕೃಷ್ಣರಾಜ ಒಡೆಯರ್ ಮತ್ತು ಕೃಷ್ಣಾಜಮ್ಮಣ್ಣಿ ಭಾವಚಿತ್ರವನ್ನು ಪ್ರಿನ್ಸೆಸ್ ಎಂಬ ನಾಮಫಲಕವಿರುವಂತೆ ಅಂಟಿಸಲಾಗಿತ್ತು. ಆದರೆ ಈ ಸ್ಟೀಕರ್‌ಗಳನ್ನು ರಾತ್ರೋರಾತ್ರಿ ತೆರವುಗೊಳಿಸಿದ್ದಾರೆ. ಅದನ್ನು ತೆರವುಗೊಳಿಸಿದವರು ಯಾವುದಾದರೂ ಸಂಘಟನೆಯ ಕಾರ್ಯಕರ್ತರ ಅಥವಾ ಬೇರೆಯವರ ಎಂಬುದು ತಿಳಿದು ಬಂದಿಲ್ಲ.
ಬೆಂಡರವಾಡಿ ಕೆರೆಗೆ ಹಾರಿ ಮಂಡ್ಯ ಜಿಲ್ಲೆಯ ವ್ಯಕ್ತಿ ಆತ್ಮಹತ್ಯೆ ಚಾಮರಾಜನಗರ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ…
ಹೈದರಾಬಾದ್: ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ಹೈದರಾಬಾದ್‌ನಲ್ಲಿ ಅವರ ಮನೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. 2016ರಲ್ಲಿ ನಿಧನರಾದ ಜಯಲಲಿತಾ…
ಬೆಂಗಳೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ…
ಬೆಂಗಳೂರು: ಇಲ್ಲಿನ ಯಲಹಂಕ ಠಾಣೆ ಪೊಲೀಸರು, ಸುಮಾರು 2 ಕೋಟಿ ರೂ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದು, ನೈಜೀರಿಯಾ ಮೂಲದ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಟೆನಿಸ್ ಐಕಾನ್ ಲಿಯಾಂಡರ್ ಪೇಸ್ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…
ಬೆಂಗಳೂರು: ಖಾಸಗಿ ಶಾಲೆಗಳು ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಸಾಲಿನ ಶುಲ್ಕವನ್ನು 5-10%, ಮತ್ತೆ ಕೆಲವು 10-15% ವರೆಗೆ ಏರಿಕೆ ಮಾಡಿವೆ.…