ಮೈಸೂರು ನಗರ

ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ಗಟ್ಟಿ: ಹೆಚ್‌.ಸಿ.ಮಹದೇವಪ್ಪ

ಮೈಸೂರು: ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ 5 ವರ್ಷ ಗಟ್ಟಿಯಾಗಿರುತ್ತದೆ. ಯಾವ ಶಿಂಧೆ ಸರ್ಕಾರವು ಬರಲ್ಲ ಎಂದು ಹೇಳುವ ಮೂಲಕ ಮಾಜಿ ಸಚಿವ ಶ್ರೀ ರಾಮುಲು ಹೇಳಿಕೆಗೆ ಸಮಾಜ ಕಲ್ಯಾಣ ಸಚಿವ ಹೆಚ್‌.ಸಿ.ಮಹದೇವಪ್ಪ ತಿರುಗೇಟು ನೀಡಿದ್ದಾರೆ.

ನಗರದಲ್ಲಿ ಇಂದು (ಮಾ.1) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಕಾರ ಹಂಚಿಕೆ ವಿಚಾರ ನಮಗೆ ಗೊತ್ತಿಲ್ಲ ಇನು ನಿಮಗೆ ಹೇಗೆ ಗೊತ್ತು? ಎಂದು ಮಾಧ್ಯಮದವರನ್ನೆ ಮರು ಪ್ರಶ್ನಿಸಿದ್ದಾರೆ.

ನಮ್ಮಲ್ಲಿ ಸಿದ್ದರಾಮಯ್ಯ ಸಿಎಂ ಆಗಿದ್ದಾರೆ.ಯಾವ ಶಿಂಧೆನೂ ಬರಲ್ಲ. ಸಚಿವ ರಾಜಣ್ಣ ಹೇಳಿಕೆ ನೀಡಿದರೂ ಅದು ಮುಖ್ಯವಲ್ಲ. ಸಿಎಂಬದಲಾವಣೆ ಕುರಿತಾದ ಚರ್ಚೆ ಏನು ಆಗಿಲ್ಲ ಎಂದು ಸ್ಪಷ್ಟಪಡಿಸಿದರು.

ದಲಿತರ ಹಣ ದುರುಪಯೋಗದ ವಿಚಾರವಾಗಿ ಮಾತನಾಡಿದ ಅವರು, ಕಾನೂನು ಪ್ರಕಾರವೇ ಹಣ ಬಳಕೆ ಮಾಡುತ್ತಿದ್ದೇವೆ. ನಾವು ಯಾವುದೇ ಹಣ ದುರ್ಬಳಕೆ ಮಾಡುತ್ತಿಲ್ಲ. ಆದರೆ, ಬಿಜೆಪಿ ದಲಿತರ ಹೆಸರಿನಲ್ಲಿ ರಾಜಕೀಯ ಮಾಡುತ್ತಿದೆ ಎಂದರು.

ಬೊಮ್ಮಾಯಿ ನೇತೃತ್ವದ ಸರ್ಕಾರದ ಅವಧಿಯಲ್ಲಿ 10 ಸಾವಿರ ಕೋಟಿ ದಲಿತರ ಹಣ ದುರ್ಬಳಕೆ ಆಯಿತು. ಅದನ್ನು ಪ್ರಶ್ನೆ ಮಾಡಲಿಲ್ಲ. ಈಗ ಆಧಾರವಿಲ್ಲದಿದ್ದರೂ ದಲಿತರ ಹಣ ದುರ್ಬಳಕೆ ಅಂತ ಬೊಬ್ಬೆ ಹೊಡೆಯುತ್ತಿದೆ ಎಂದು ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದರು.

 

ಆಂದೋಲನ ಡೆಸ್ಕ್

Recent Posts

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

7 hours ago

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

12 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

13 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

14 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

15 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

20 hours ago