Mysore
22
mist

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

ಸಿದ್ದರಾಮಯ್ಯ ಅವರದ್ದು ಡಬಲ್ ಸ್ಟ್ಯಾಂಡ್ : ಹಳ್ಳಿಹಕ್ಕಿ ಟೀಕೆ

ಮೈಸೂರು : ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಸಿದ್ದರಾಮಯ್ಯ ಕಾರಣ. ತಮ್ಮ ಬೆಂಬಲಿಗ ಶಾಸಕರನ್ನು ಬಿಜೆಪಿಗೆ ಕಳಿಸಿದ್ದು ಇದೇ ಸಿದ್ದರಾಮಯ್ಯ ಎಂದು ವಿಧಾನ ಪರಿಷತ್ ಸದಸ್ಯ ಅಡಗೂರು ಎಚ್.ವಿಶ್ವನಾಥ್ ಆರೋಪಿಸಿದರು.

ನಗರದ ಜಲದರ್ಶಿನಿ ಅತಿಥಿಗೃಹದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಪರಿಣಾಮ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂತು. ಕಾಂಗ್ರೆಸ್‌ನಿಂದ ೧೪ ಮಂದಿ ಶಾಸಕರನ್ನು ಕಳುಹಿಸಿ ಯಡಿಯೂರಪ್ಪರನ್ನು ಮುಖ್ಯಮಂತ್ರಿ ಮಾಡಿದರು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ವಿಜಯೇಂದ್ರ ಅವರನ್ನು ಗೆಲ್ಲಿಸುವ ಸಲುವಾಗಿ ಶಿಕಾರಿಪುರದಲ್ಲಿ ಕುರುಬ ಸಮುದಾಯದ ನಾಯಕನಿಗೆ ಟಿಕೆಟ್ ತಪ್ಪಿಸಿದರು ಎಂದು ದೂರಿದರು.

ಲೋಕಸಭಾ ಚುನಾವಣೆಯಲ್ಲಿ ನಾನು ಸೋಲಲು ಕೂಡ ಸಿದ್ದರಾಮಯ್ಯ ಕಾರಣ. ಪ್ರತಾಪ್‌ಸಿಂಹಗೆ ನೆರವು ನೀಡಿ ನನ್ನ ಸೋಲಿಗೆ ಕಾರಣರಾದರು. ೨೦೧೩ರ ವಿಧಾನಸಭೆ ಚುನಾವಣೆಯಲ್ಲಿ ಕೊರಟಗೆರೆ ಕ್ಷೇತ್ರದಲ್ಲಿ ಡಾ.ಜಿ.ಪರ ಮೇಶ್ವರ್ ಸೋಲಿಗೆ ಕಾರಣ ಯಾರು? ಪರಮೇಶ್ವರ್ ಸಿಎಂ ಆಗುವುದನ್ನು ತಪ್ಪಿಸಲು ಅವರನ್ನೂ ಸೋಲಿಸಿದರು. ವರುಣ ಕ್ಷೇತ್ರದಲ್ಲಿ ಸ್ಪಽಸಿದಾಗ ಸುತ್ತೂರು ಶ್ರೀಗಳ ಕಾಲು ಹಿಡಿದು ಕಾ.ಪು.ಸಿದ್ದಲಿಂಗ ಸ್ವಾಮಿಯನ್ನು ತಣ್ಣಗಾಗಿಸಿದರು. ಚಾಮುಂಡೇಶ್ವರಿ ಬೈ ಎಲೆಕ್ಷನ್‌ನಲ್ಲಿ ಉಡುಪಿ ಮಠದ ಪೀಠಾಽಪತಿಗಳ ಕಾಲು ಹಿಡಿದರು. ಸಿದ್ದರಾಮಯ್ಯಗೆ ಒಳಗೊಂದು ಹೊರಗೊಂದು ಎಂಬಂತೆ ಡಬಲ್ ಸ್ಟ್ಯಾಂಡ್ ಹೊಂದಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಅಡಗೂರು ಎಚ್.ವಿಶ್ವನಾಥ್ ಹರಿಹಾಯ್ದರು.

Tags:
error: Content is protected !!