ಪ್ರಶಾಂತ್ ಎನ್ ಮಲ್ಲಿಕ್
ಮೈಸೂರು: ಮಾಜಿ ಸಿಎಂ ದಿವಂಗತ ದೇವರಾಜ ಅರಸು ಅವರ ಕಾಲಿನ ಧೂಳಿಗೂ ಸಿದ್ದರಾಮಯ್ಯ ಸಮವಲ್ಲ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ನಡೆಯುತ್ತಿರುವ ಜನಾಕ್ರೋಶ ಯಾತ್ರೆಯ ವೇಳೆ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ ಅವರು, ನಾವು ರಾಜ್ಯ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆಯನ್ನು ಮೈಸೂರು ರಾಜರ ಸ್ಥಳದಿಂದ ಪ್ರಾರಂಭ ಮಾಡಿದ್ದೇವೆ. ಮಹಾರಾಜರಿಗಿಂತ ಹೆಚ್ಚು ಅಭಿವೃದ್ಧಿ ಕೆಲಸ ಮಾಡಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿಕೊಂಡಿದ್ದಾರೆ.
ಮಾಜಿ ಸಿಎಂ ದಿವಂಗತ ದೇವರಾಜ ಅರಸು ಅವರಿಗೂ ಹೋಲಿಕೆ ಮಾಡುವ ನೀವು ಅವರ ಕಾಲಿನ ಧೂಳಿಗೂ ಸಮಾನರಲ್ಲ. ರಾತ್ರೋರಾತ್ರಿ 14 ಸೈಟ್ ಪಡೆದುಕೊಂಡಿರುವ ನಿಮಗೆ ದೇವರಾಜ ಅರಸು ಅವರ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಇಡೀ ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ. ಸಿದ್ದರಾಮಯ್ಯ ಹೆಚ್ಚು ಕಪ್ಪ ಕೊಟ್ಟರೆ ಮಾತ್ರ ಸಿಎಂ ಆಗಿ ಮುಂದುವರೆಯುತ್ತಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಈ ರೀತಿಯ ಬೆಳವಣಿಗೆ ದೆಹಲಿಯಲ್ಲಿ ಪದೇ ಪದೇ ನಡೆಯುತ್ತಲೇ ಇದೆ ಎಂದು ಲೇವಡಿ ಮಾಡಿದರು.