ಮೈಸೂರು ನಗರ

ದೇವರಾಜ ಅರಸು ಅವರ ಕಾಲಿನ ಧೂಳಿಗೂ ಸಿದ್ದರಾಮಯ್ಯ ಸಮವಲ್ಲ: ಛಲವಾದಿ ನಾರಾಯಣಸ್ವಾಮಿ

ಪ್ರಶಾಂತ್‌ ಎನ್‌ ಮಲ್ಲಿಕ್‌

ಮೈಸೂರು: ಮಾಜಿ ಸಿಎಂ ದಿವಂಗತ ದೇವರಾಜ ಅರಸು ಅವರ ಕಾಲಿನ ಧೂಳಿಗೂ ಸಿದ್ದರಾಮಯ್ಯ ಸಮವಲ್ಲ ಎಂದು ವಿಧಾನಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ನಡೆಯುತ್ತಿರುವ ಜನಾಕ್ರೋಶ ಯಾತ್ರೆಯ ವೇಳೆ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ ಅವರು, ನಾವು ರಾಜ್ಯ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆಯನ್ನು ಮೈಸೂರು ರಾಜರ ಸ್ಥಳದಿಂದ ಪ್ರಾರಂಭ ಮಾಡಿದ್ದೇವೆ. ಮಹಾರಾಜರಿಗಿಂತ ಹೆಚ್ಚು ಅಭಿವೃದ್ಧಿ ಕೆಲಸ ಮಾಡಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿಕೊಂಡಿದ್ದಾರೆ.
ಮಾಜಿ ಸಿಎಂ ದಿವಂಗತ ದೇವರಾಜ ಅರಸು ಅವರಿಗೂ ಹೋಲಿಕೆ ಮಾಡುವ ನೀವು ಅವರ ಕಾಲಿನ ಧೂಳಿಗೂ ಸಮಾನರಲ್ಲ. ರಾತ್ರೋರಾತ್ರಿ 14 ಸೈಟ್‌ ಪಡೆದುಕೊಂಡಿರುವ ನಿಮಗೆ ದೇವರಾಜ ಅರಸು ಅವರ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಇಡೀ ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ. ಸಿದ್ದರಾಮಯ್ಯ ಹೆಚ್ಚು ಕಪ್ಪ ಕೊಟ್ಟರೆ ಮಾತ್ರ ಸಿಎಂ ಆಗಿ ಮುಂದುವರೆಯುತ್ತಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಈ ರೀತಿಯ ಬೆಳವಣಿಗೆ ದೆಹಲಿಯಲ್ಲಿ ಪದೇ ಪದೇ ನಡೆಯುತ್ತಲೇ ಇದೆ ಎಂದು ಲೇವಡಿ ಮಾಡಿದರು.

ಆಂದೋಲನ ಡೆಸ್ಕ್

Recent Posts

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

32 mins ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

4 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

4 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

4 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

8 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

8 hours ago