ಮೈಸೂರು: ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಸಂಪೂರ್ಣವಾಗಿ ಕುಂಠಿತಗೊಂಡಿವೆ. ಇದಕ್ಕೆ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಪವರ್ ಶೇರಿಂಗ್ ಚರ್ಚೆಗಳೇ ಕಾರಣ ಎಂದು ಎಂಎಲ್‌ಸಿ ಎಚ್.ವಿಶ್ವನಾಥ್ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ದಿನ ಬೆಳಗಾದರೆ ಸಾಕು ಅಧಿಕಾರ ಹಂಚಿಕೆ ಬಗ್ಗೆ ಚರ್ಚೆ ನಡೆಯುತ್ತಿದೆ. ಇದರಿಂದಾಗಿ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಈ ವಿಚಾರದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಮಧ್ಯ ಪ್ರವೇಶಿಸಿ ಡಿಕೆಶಿ ಅವರಿಗೆ ಸಿಎಂ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು.
ಜೆಡಿಎಸ್‌ನಿಂದ ಸಿದ್ದರಾಮಯ್ಯ ಅವರನ್ನು ಹೊರಹಾಕಿದಾಗ ಆಶ್ರಯ ಕೊಟ್ಟಿದ್ದು ಕಾಂಗ್ರೆಸ ಪಕ್ಷ. ಆದರೆ ಈಗ ಸಿದ್ದರಾಮಯ್ಯ ಕಾಂಗ್ರೆಸ್ ಪಾರ್ಟಿಯನ್ನೇ ಮುಗಿಸಲು ಮುಂದಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರು ಅಧಿಕಾರ ಹಂಚಿಕೆ ವಿಚಾರದಲ್ಲಿ ಎಐಸಿಸಿ ಅಧ್ಯಕ್ಷರ ಸಮಕ್ಷಮದಲ್ಲಿ ಆಣೆ ಪ್ರಮಾಣ ಮಾಡಿದ್ದಾರೆ. ಆ ಸಂದರ್ಭದಲ್ಲಿ ಡಿಕೆಶಿ, ಡಿ.ಕೆ.ಸುರೇಶ್ ಸಹೋದರರ ಸಮ್ಮುಖದಲ್ಲಿ ಕಾಂಗ್ರೆಸ್‌ನ ಕೆಲ ಹಿರಿಯ ನಾಯಕರು ಉಪಸ್ಥಿತರಿದ್ದರು. ಆದರೆ ಈ ಬಗ್ಗೆ ಯಾರೊಬ್ಬರೂ ಈಗ ಬಾಯಿ ಬಿಡುತ್ತಿಲ್ಲ ಎಂದು ಬಹಿರಂಗಪಡಿಸಿದರು.
ಡಿಕೆಶಿಗೆ ಅಧಿಕಾರ ಹಸ್ತಾಂತರ ಮಾಡದಿದ್ದರೆ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಾರ್ಟಿ ಧೂಳಿಪಟವಾಗಲಿದೆ ಎಂದು ಎಚ್ಚರಿಕೆ ನೀಡಿದರು.
ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…
ಮಂಡ್ಯ: ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಸಮುದಾಯಗಳು ಮುಖ್ಯ ವಾಹಿನಿಗೆ ಬರಲು ಶಿಕ್ಷಣದಿಂದ ಮಾತ್ರ ಸಾಧ್ಯ…
ಮಂಡ್ಯ: ತಾಲ್ಲೂಕಿನ ಹೊಸ ಬೂದನೂರಿನಲ್ಲಿ ನೆಲೆಯಾಗಿರುವ ಕಾಶಿ ವಿಶ್ವನಾಥ ಹಾಗೂ ಅನಂತಪದ್ಮನಾಭಸ್ವಾಮಿ ಉತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಈ ಬಾರಿ ಉತ್ಸವಕ್ಕೆ…
ಬೆಂಗಳೂರು: ಈ ವರ್ಷ ಚಳಿ ಪ್ರಮಾಣ ಹೆಚ್ಚಾಗಿದ್ದರಿಂದ ಬಿಸಿಲ ಝಳವೂ ಹೆಚ್ಚಾಗಿರಲಿದ್ದು, ಮುಂದಿನ ಬೇಸಿಗೆಯಲ್ಲಿ ವಿಪರೀತ ಬಿಸಿಲು ಹವಾಮಾನ ಇರಲಿದೆ…
ಬೆಂಗಳೂರು: ರಾಜ್ಯದಲ್ಲಿರುವ ಅಷ್ಟೂ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮಗಾಂಧಿ ಹೆಸರು ಇಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಫ್ರೀಡಂಪಾರ್ಕ್ ನಲ್ಲಿ…