ಮೈಸೂರು ನಗರ

ಸಿದ್ದರಾಮಯಯ್ಯ ಕಾಂಗ್ರೆಸ್ಸನ್ನೇ ಮುಗಿಸಲು ಮುಂದಾಗಿದ್ದಾರೆ: ಎಂಎಲ್‌ಸಿ ಎಚ್.ವಿಶ್ವನಾಥ್‌ ವಾಗ್ದಾಳಿ

ಮೈಸೂರು: ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಸಂಪೂರ್ಣವಾಗಿ ಕುಂಠಿತಗೊಂಡಿವೆ. ಇದಕ್ಕೆ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಪವರ್‌ ಶೇರಿಂಗ್‌ ಚರ್ಚೆಗಳೇ ಕಾರಣ ಎಂದು ಎಂಎಲ್‌ಸಿ ಎಚ್.ವಿಶ್ವನಾಥ್‌ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ದಿನ ಬೆಳಗಾದರೆ ಸಾಕು ಅಧಿಕಾರ ಹಂಚಿಕೆ ಬಗ್ಗೆ ಚರ್ಚೆ ನಡೆಯುತ್ತಿದೆ. ಇದರಿಂದಾಗಿ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಈ ವಿಚಾರದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಮಧ್ಯ ಪ್ರವೇಶಿಸಿ ಡಿಕೆಶಿ ಅವರಿಗೆ ಸಿಎಂ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು.

ಜೆಡಿಎಸ್‌ನಿಂದ ಸಿದ್ದರಾಮಯ್ಯ ಅವರನ್ನು ಹೊರಹಾಕಿದಾಗ ಆಶ್ರಯ ಕೊಟ್ಟಿದ್ದು ಕಾಂಗ್ರೆಸ ಪಕ್ಷ. ಆದರೆ ಈಗ ಸಿದ್ದರಾಮಯ್ಯ ಕಾಂಗ್ರೆಸ್‌ ಪಾರ್ಟಿಯನ್ನೇ ಮುಗಿಸಲು ಮುಂದಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರು ಅಧಿಕಾರ ಹಂಚಿಕೆ ವಿಚಾರದಲ್ಲಿ ಎಐಸಿಸಿ ಅಧ್ಯಕ್ಷರ ಸಮಕ್ಷಮದಲ್ಲಿ ಆಣೆ ಪ್ರಮಾಣ ಮಾಡಿದ್ದಾರೆ. ಆ ಸಂದರ್ಭದಲ್ಲಿ ಡಿಕೆಶಿ, ಡಿ.ಕೆ.ಸುರೇಶ್‌ ಸಹೋದರರ ಸಮ್ಮುಖದಲ್ಲಿ ಕಾಂಗ್ರೆಸ್‌ನ ಕೆಲ ಹಿರಿಯ ನಾಯಕರು ಉಪಸ್ಥಿತರಿದ್ದರು. ಆದರೆ ಈ ಬಗ್ಗೆ ಯಾರೊಬ್ಬರೂ ಈಗ ಬಾಯಿ ಬಿಡುತ್ತಿಲ್ಲ ಎಂದು ಬಹಿರಂಗಪಡಿಸಿದರು.

ಡಿಕೆಶಿಗೆ ಅಧಿಕಾರ ಹಸ್ತಾಂತರ ಮಾಡದಿದ್ದರೆ ಮುಂದಿನ ದಿನಗಳಲ್ಲಿ ಕಾಂಗ್ರೆಸ್‌ ಪಾರ್ಟಿ ಧೂಳಿಪಟವಾಗಲಿದೆ ಎಂದು ಎಚ್ಚರಿಕೆ ನೀಡಿದರು.

ಆಂದೋಲನ ಡೆಸ್ಕ್

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

7 hours ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

7 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

8 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

9 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

12 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

13 hours ago