ಮೈಸೂರು: ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಹಾಗೂ ಡಿಸೆಂಬರ್ ಕ್ರಾಂತಿ ಯಾವುದೂ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಪುತ್ರ ಹಾಗೂ ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಿನ ಪರಿಸ್ಥಿತಿಗೆ ಸಿದ್ದರಾಮಯ್ಯನವರೇ ಐದು ವರ್ಷ ಸಿಎಂ. ರಾಜ್ಯದಲ್ಲಿ ನವೆಂಬರ್ ಕ್ರಾಂತಿ, ಡಿಸೆಂಬರ್ ಕ್ರಾಂತಿ ಯಾವುದು ಇಲ್ಲ ಎಂದು ಸಿಎಂ ಖುರ್ಚಿ ಮೇಲೆ ಕಣ್ಣಿಟ್ಟವರಿಗೆ ಪರೋಕ್ಷ ತಿರುಗೇಟು ನೀಡಿದರು.
ಇದನ್ನು ಓದಿ: ಯಾರೀ ಈ ಪ್ರತಾಪ್ ಸಿಂಹ..? ಪ್ರಸಿದ್ಧಿ ಪಡೆಯಲು ಸುಮ್ನೆ ಮಾತಡ್ತಾರೆ : ಯತೀಂದ್ರ ಟಾಂಗ್
ಇನ್ನು ನಾಯಕತ್ವ ವಿಚಾರವಾಗಿ ಹೇಳಿಕೆ ನೀಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಈಗಲೂ ನನ್ನ ಮಾತಿಗೆ ನಾನು ಬದ್ದನಿದ್ದೇನೆ. ನನ್ನ ಮಾತಿಗೆ ಸ್ಪಷ್ಟಿಕರಣ ಕೂಡ ಕೊಟ್ಟಿದ್ದೇನೆ. ಪಕ್ಷದ ಆಂತರಿಕ ವಿಚಾರಗಳನ್ನು ಮಾಧ್ಯಮಗಳ ಮುಂದೆ ಮಾತನಾಡಲ್ಲ. ಪಕ್ಷ ನನಗೆ ನೋಟಿಸ್ ಕೊಟ್ಟರೆ ಉತ್ತರ ಕೊಡುತ್ತೇನೆ ಎಂದು ಸ್ಪಷ್ಟನೆ ನೀಡಿದರು.





