ಮೈಸೂರು ನಗರ

ಕಾನೂನಾತ್ಮಕವಾಗಿಯೇ ರಸ್ತೆಗೆ ಸಿದ್ದರಾಮಯ್ಯ ಹೆಸರು ಇಡ್ತೀವಿ: ಶಾಸಕ ಹರೀಶ್‌ ಗೌಡ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ರಸ್ತೆ ಹೆಸರಿಗಾಗಿ ರಾಜಕೀಯ ಮುಖಂಡರ ನಡುವೆ ತೀವ್ರ ಜಟಾಪಟಿ ಜೋರಾಗಿದ್ದು, ಈ ಬಗ್ಗೆ ಶಾಸಕ ಹರೀಶ್‌ ಗೌಡ ಪ್ರತಿಕ್ರಿಯೆ ನೀಡಿದ್ದಾರೆ.

ರಸ್ತೆ ಹೆಸರಿನ ವಿಚಾರವಾಗಿ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಆರೋಗ್ಯ ಮಾರ್ಗ ಎಂದು ಹೆಸರಿಡಲು ಪ್ರಸ್ತಾಪ ಮಾಡಿದ್ದೇ ನಾನು. ಮಹಾರಾಜರ ನಂತರ ಮೈಸೂರಿಗೆ ಸಿದ್ದರಾಮಯ್ಯ ಅತೀ ಹೆಚ್ಚು ಕೊಡುಗೆ ಕೊಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರ ಹೆಸರಿಡಲು ನಾನೇ ಪ್ರಸ್ತಾಪ ಮಾಡಿದ್ದೇ. ಇದಕ್ಕೆ ವಿರೋಧ ಮಾಡುತ್ತಿರುವವರು ಸಿಎಂ ಸಿದ್ದರಾಮಯ್ಯ ಅವರ ವಿರೋಧಿಗಳು ಎಂದು ಕಿಡಿಕಾರಿದರು.

ಸಿದ್ದರಾಮಯ್ಯ ಅವರು ಶಾಲಾ-ಕಾಲೇಜುಗಳ ನಿರ್ಮಾಣ, ಆಸ್ಪತ್ರೆಗಳ ನಿರ್ಮಾಣ ವಿಚಾರದಲ್ಲಿ ಸಿದ್ದರಾಮಯ್ಯನವರ ಕೊಡುಗೆ ಬಹಳ ದೊಡ್ಡದು. ಪ್ರತಾಪ್‌ ಸಿಂಹ ಹೇಳಿದ್ದನ್ನು ಕೇಳಿ ಖುಷಿಯಾಯ್ತು. ಅವರು ಚೆನ್ನಾಗಿ ಸಿಎಂ ಸಿದ್ದರಾಮಯ್ಯ ಅವರ ಸಾಧನೆಯನ್ನು ವಿವರಿಸಿದ್ದಾರೆ. ಯಾರಿಗೆ ಮನಸ್ಸು ಶುದ್ಧಿ ಇಲ್ಲವೋ ಅವರುಗಳು ಮಾತ್ರ ಸಿದ್ದರಾಮಯ್ಯನವರ ಹೆಸರನ್ನು ವಿರೋಧ ಮಾಡುತ್ತಾರೆ. ಮಹಾತ್ಮ ಗಾಂಧಿ ಮೇಲೂ ಆರೋಪ ಮಾಡುತ್ತಾರೆ ಎಂದು ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದರು.

ಇನ್ನು ಮುಂದುವರಿದು ಮಾತನಾಡಿದ ಬಿಜೆಪಿಯವರು ಸಿದ್ದರಾಮಯ್ಯರ ಮೇಲೆ ಇಲ್ಲ ಸಲ್ಲದ ಆಪಾದನೆ ಮಾಡುತ್ತಿದ್ದಾರೆ. ನೂರಕ್ಕೆ ನೂರು ಸಿದ್ದರಾಮಯ್ಯ ಹೆಸರನ್ನು ಕೆಆರ್‌ಎಸ್‌ ರಸ್ತೆಗೆ ಇಡುತ್ತೇವೆ. ಇದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಸ್ಪಷ್ಟನೆ ನೀಡಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

2 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

2 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

2 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

2 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

2 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

2 hours ago