ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರು ಲೋಕಾಯುಕ್ತದಲ್ಲಿ ಎಫ್‌ಐಆರ್ ದಾಖಲಾಗಿದ್ದು, ಸಿಎಂ ಯಾವುದೇ ಕಾರ್ಯಕ್ರಮದಲ್ಲಿ ಭಾಗವಹಿಸದೇ ರಾಜೀನಾಮೆ ಕೊಟ್ಟು ತನಿಖೆ ಎದುರಿಸಲಿ ಎಂದು ಮಾಜಿ ಸಚಿವ ಎನ್.ಮಹೇಶ್ ಒತ್ತಾಯಿಸಿದರು.
ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪಂಚ ಗ್ಯಾರಂಟಿಗಳನ್ನು ಜಾರಿಗೊಳಿಸಿ ಸರ್ಕಾರ ಮುಗ್ಗರಿಸಿ ಬೀಳುತ್ತಿದೆ. ಇದನ್ನು ತಡೆಯಲು ಎಸ್‌ಸಿ ಮತ್ತು ಎಸ್‌ಟಿ ಸಮುದಾಯಕ್ಕೆ ಮೀಸಲಿದ್ದ ಅನುದಾನದ ಹಣವನ್ನು ಮೊದಲ ವರ್ಷ ಸುಮಾರು 11,144 ಕೋಟಿ ರೂ. ಹಣವನ್ನ ದುರುಪಯೋಗ ಪಡಿಸಿ ಕೊಂಡಿದೆ. ಈ ವರ್ಷ ಸುಮಾರು 14 ಸಾವಿರ ಕೋಟಿ ಹಣವನ್ನ ಗ್ಯಾರಂಟಿಗೆ ಬಳಸಿದ್ದಾರೆ. ಒಟ್ಟು ಸುಮಾರು 26 ಸಾವಿರ ಕೋಟಿಗಳಷ್ಟು ದುರುಪಯೋಗ ಪಡಿಸಿಕೊಂಡಿದೆ. ಹೀಗಾಗಿ ಎಸ್‌ಸಿ ಮತ್ತು ಎಸ್‌ಟಿಯನ್ನು ಪ್ರತಿನಿಧಿಸುವ 6 ನಿಗಮಗಳು ಗುಟುಕು ನೀರು ಕುಡಿಯುವ ಪರಿಸ್ಥಿತಿ ತಲುಪಿ ಅಭಿವೃದ್ಧಿಗೆ ಹಣವಿಲ್ಲದೆ ಪರದಾಡುವತಂಹ ಮಾಡಿದ್ದಾರೆ ಎಂದು ಆರೋಪಿಸಿದರು.
ಮುಡಾ ಹಗರಣ ಸಂಬಂಧ ಮೈಸೂರಿನಲ್ಲಿ ಬಿಜೆಪಿ ನಾಯಕರಾದ ಮಾಜಿ ಸಚಿವ ಎನ್ ಮಹೇಶ್,ಶಾಸಕ ಶ್ರೀವತ್ಸ, ನಾಗೇಂದ್ರರ ಸಮ್ಮುಖದಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಯಿತು.ಆರು ನಿಗಮಕ್ಕೆ ಕೇವಲ 510 ಕೋಟಿ ರೂ. ಮಾತ್ರ ನೀಡಿದ್ದಾರೆ. ಇನ್ನೂ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಸುಮಾರು 187 ಕೋಟಿ ರೂ. ದುರುಪಯೋಗವಾಗಿದೆ. ಇದನ್ನು ಸ್ವತಃ ಸಿದ್ದರಾಮಯ್ಯ ಅವರೇ ಸದನದಲ್ಲಿ ಬಹಿರಂಗ ಪಡಿಸಿದ್ದಾರೆ. ಅಲ್ಲದೇ ಈ ನಿಗಮದಿಂದಲೇ 87 ಕೋಟಿ ರೂ. ವಿವಿಧ ಖಾತೆಗಳಿಗೆ ವರ್ಗಾವಣೆ ಆಗಿದೆ. ಸಿದ್ದರಾಮಯ್ಯ ಅವರು ಇದಕ್ಕೂ ನನಗೂ ಸಂಬಂಧ ಇಲ್ಲ ಎನ್ನುವಂತೆ ವರ್ತಿಸುತ್ತಿದ್ದಾರೆ. ಮುಡಾ ಹಗರಣದಲ್ಲೂ ಅದೇ ರೀತಿ ವರ್ತಿಸುತ್ತಿದ್ದಾರೆ ಎಂದು ಕಿಡಿಕಾರಿದರು.
ಮುಡಾ ಹಗರಣ ಸಂಬಂಧಿಸಿದಂತೆ ಪ್ರಾರಂಭದಲ್ಲಿ 14 ನಿವೇಶನಗಳನ್ನು ಹಿಂತಿರುಗಿಸಲು ಸಾಧ್ಯವಿಲ್ಲ. ಒಂದು ವೇಳೆ ಹಿಂತಿರುಗಿಸುವುದಾದರೆ ಆ ನಿವೇಶನಗಳ ಬೆಲೆ 62 ಕೋಟಿ ಅಂತ ಹೇಳಿದರು. ಆದರೆ ಇದೀಗ ನಿವೇಶನಗಳನ್ನು ಮುಡಾಗೆ ವಾಪಾಸ್ ನೀಡಿದ್ದಾರೆ. ಸಿದ್ದರಾಮಯ್ಯ ಅವರು ತಪ್ಪು ಮಾಡಿಲ್ಲ ಎನ್ನುವುದಾದರೆ ಯಾಕೆ ನಿವೇಶನಗಳನ್ನು ವಾಪಾಸ್ ಮುಡಾ ವಶಕ್ಕೆ ಕೊಡಬೇಕಿತ್ತು. ಮುಡಾ ಹಗರಣದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿದ್ದ ಅರ್ಜಿಯನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಈ ಹಿಂದೆ ಮಾಜಿ ಮುಖ್ಯಂಮತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮೇಲೆ ಬಂದಂತಹ ಇಂತಹದ್ದೇ ಆರೋಪವನ್ನ ಸಿಎಂ ಸಿದ್ದರಾಮಯ್ಯ ಖಂಡಿಸಿದರು ಎಂದು ವಿವರಿಸಿದರು.
ಬಿ.ಎಸ್.ಯಡಿಯೂರಪ್ಪ ಅವರಿಗೆ ಬಂದತಂಹ ಪರಿಸ್ಥಿತಿಯೇ ಇಂದು ಸಿದ್ದರಾಮಯ್ಯ ಅವರಿಗೆ ಬಂದಿದೆ. 2011 ರಲ್ಲಿ ಯಡಿಯೂರಪ್ಪ ಅವರು ಅವರ ಮಕ್ಕಳಿಗೆ ಕೊಟ್ಟ ನಿವೇಶನ ವಾಪಸ್ ಕೊಟ್ಟಾಗ ನೀವು ಅವರನ್ನು ನಿಂದಿಸುವ ಕೆಲಸ ಮಾಡಿದ್ದೀರಾ? ಈಗ ಅದೇ ಪರಿಸ್ಥಿತಿಯಲ್ಲಿ ನೀವು ನಿಂತಿದ್ದೀರಿ. ಒಟ್ಟಾರೆ ಒಂದು ವಿಷ ವರ್ತುಲದಲ್ಲಿ ಸಿದ್ದರಾಮಯ್ಯ ಅವರು ಸಿಕ್ಕಿಹಾಕಿಕೊಂಡಿದ್ದಾರೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ನಿನ್ನೆಯಿಂದ ಹೊಸ ತಿರುವು ಪಡೆದುಕೊಂಡಿದ್ದು, ಕೇಡುಗಾಲಕ್ಕೆ ನಾಯಿ ಮೊಟ್ಟೆ ಇಟ್ಟಂತೆ ಸಿಎಂ ಪತ್ನಿ ನಿವೇಶನ ವಾಪಸ್ ವಶಪಡಿಸಿಕೊಳ್ಳುವಂತೆ ಪತ್ರ ಬರೆದಿದ್ದಾರೆ. ಒಂದೇ ದಿನಗಳಲ್ಲಿ ನಿವೇಶನ ವಾಪಸ್ ಮಾಡುವ ಪಕ್ರಿಯೆಯಲ್ಲಿ ಸಿಎಂ ಪುತ್ರ ತೊಡಗಿದ್ದಾರೆ. ರಾಜ್ಯದಲ್ಲಿ ಪ್ರಜಾಪ್ರಭುತ್ವ, ಸಂವಿಧಾನದ ಬಗ್ಗೆ ದೊಡ್ಡದಾಗಿ ಮಾತನಾಡುವ ಸಿದ್ದರಾಮಯ್ಯ ದಸರಾ ಮಹೋತ್ಸವ ಯಾವುದೇ ಕಾರ್ಯಕ್ರಮದಲ್ಲಿ ಭಾಗವಹಿಸದೇ ರಾಜಿನಾಮೆ ನೀಡಬೇಕು. ರಾಜಿನಾಮೆ ನೀಡಿ ತನಿಖೆ ಎದುರಿಸಬೇಕು. 40 ವರ್ಷಗಳ ನಿಮ್ಮ ನಿಷ್ಕಳಂಕ ರಾಜಕಾರಣ ಮಾಡಿದ್ದೇನೆ ಎನ್ನುವುದಾದರೆ, ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಕಾಂಗ್ರೆಸ್…
ಮೈಸೂರು: ಸ್ನೇಹಮಯಿ ಕೃಷ್ಣಗೆ ಫಂಡಿಂಗ್ ಮಾಡುತ್ತಿರುವವರು ಯಾರು ಅನ್ನೋದು ಗೊತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಕಿಡಿಕಾರಿದ್ದಾರೆ. ಮುಡಾ ಪ್ರಕರಣಕ್ಕೆ…
ನವದೆಹಲಿ: ಸಂಸತ್ ಭವನದ ಸಂಕೀರ್ಣದಲ್ಲಿ ಬಿಜೆಪಿ ಸಂಸದರು ನನ್ನನ್ನು ತಳ್ಳಿದ್ದಾರೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ…
ಬೆಳಗಾವಿ: ಕೇಂದ್ರ ಗ್ರಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್. ಅಂಬೇಡ್ಕರ್ ಕುರಿತು ನೀಡಿರುವ ಹೇಳಿಕೆ ವಿರುದ್ಧ ದೇಶಾದ್ಯಂತ ವ್ಯಾಪಕ…
ಬೆಳಗಾವಿ: ಸಂಸತ್ತಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಕರ್ನಾಟಕ…
ಬೆಳಗಾವಿ: ನಕಲಿ ದಾಖಲೆ ಸೃಷ್ಟಿಸಿ ಅಕ್ರಮವಾಗಿ ರಾಜ್ಯದಲ್ಲಿ ನೆಲೆಸಿರುವ ಪಾಕಿಸ್ತಾನ ಹಾಗೂ ಬಾಂಗ್ಲಾದೇಶದ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ…