ಮೈಸೂರು ನಗರ

ಸಿಎಂ ಸಿದ್ದರಾಮಯ್ಯ ದಸರಾದ ಯಾವುದೇ ಕಾರ್ಯಕ್ರಮದಲ್ಲಿ ಭಾಗಿಯಾಗದೇ ರಾಜೀನಾಮೆ ಕೊಡಲಿ: ಎನ್‌.ಮಹೇಶ್‌

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರು ಲೋಕಾಯುಕ್ತದಲ್ಲಿ ಎಫ್‌ಐಆರ್‌ ದಾಖಲಾಗಿದ್ದು, ಸಿಎಂ ಯಾವುದೇ ಕಾರ್ಯಕ್ರಮದಲ್ಲಿ ಭಾಗವಹಿಸದೇ ರಾಜೀನಾಮೆ ಕೊಟ್ಟು ತನಿಖೆ ಎದುರಿಸಲಿ ಎಂದು ಮಾಜಿ ಸಚಿವ ಎನ್‌.ಮಹೇಶ್‌ ಒತ್ತಾಯಿಸಿದರು.

ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪಂಚ ಗ್ಯಾರಂಟಿಗಳನ್ನು ಜಾರಿಗೊಳಿಸಿ ಸರ್ಕಾರ ಮುಗ್ಗರಿಸಿ ಬೀಳುತ್ತಿದೆ. ಇದನ್ನು ತಡೆಯಲು ಎಸ್‌ಸಿ ಮತ್ತು ಎಸ್‌ಟಿ ಸಮುದಾಯಕ್ಕೆ ಮೀಸಲಿದ್ದ ಅನುದಾನದ ಹಣವನ್ನು ಮೊದಲ ವರ್ಷ ಸುಮಾರು 11,144 ಕೋಟಿ ರೂ. ಹಣವನ್ನ ದುರುಪಯೋಗ ಪಡಿಸಿ ಕೊಂಡಿದೆ. ಈ ವರ್ಷ ಸುಮಾರು 14 ಸಾವಿರ ಕೋಟಿ ಹಣವನ್ನ ಗ್ಯಾರಂಟಿಗೆ ಬಳಸಿದ್ದಾರೆ. ಒಟ್ಟು ಸುಮಾರು 26 ಸಾವಿರ ಕೋಟಿಗಳಷ್ಟು ದುರುಪಯೋಗ ಪಡಿಸಿಕೊಂಡಿದೆ. ಹೀಗಾಗಿ ಎಸ್‌ಸಿ ಮತ್ತು ಎಸ್‌ಟಿಯನ್ನು ಪ್ರತಿನಿಧಿಸುವ 6 ನಿಗಮಗಳು ಗುಟುಕು ನೀರು ಕುಡಿಯುವ ಪರಿಸ್ಥಿತಿ ತಲುಪಿ ಅಭಿವೃದ್ಧಿಗೆ ಹಣವಿಲ್ಲದೆ ಪರದಾಡುವತಂಹ ಮಾಡಿದ್ದಾರೆ ಎಂದು ಆರೋಪಿಸಿದರು.

ಮುಡಾ ಹಗರಣ ಸಂಬಂಧ ಮೈಸೂರಿನಲ್ಲಿ ಬಿಜೆಪಿ ನಾಯಕರಾದ ಮಾಜಿ ಸಚಿವ ಎನ್ ಮಹೇಶ್,ಶಾಸಕ ಶ್ರೀವತ್ಸ, ನಾಗೇಂದ್ರರ ಸಮ್ಮುಖದಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಯಿತು.ಆರು ನಿಗಮಕ್ಕೆ ಕೇವಲ 510 ಕೋಟಿ ರೂ. ಮಾತ್ರ ನೀಡಿದ್ದಾರೆ. ಇನ್ನೂ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಸುಮಾರು 187 ಕೋಟಿ ರೂ. ದುರುಪಯೋಗವಾಗಿದೆ. ಇದನ್ನು ಸ್ವತಃ ಸಿದ್ದರಾಮಯ್ಯ ಅವರೇ ಸದನದಲ್ಲಿ ಬಹಿರಂಗ ಪಡಿಸಿದ್ದಾರೆ. ಅಲ್ಲದೇ ಈ ನಿಗಮದಿಂದಲೇ 87 ಕೋಟಿ ರೂ. ವಿವಿಧ ಖಾತೆಗಳಿಗೆ ವರ್ಗಾವಣೆ ಆಗಿದೆ. ಸಿದ್ದರಾಮಯ್ಯ ಅವರು ಇದಕ್ಕೂ ನನಗೂ ಸಂಬಂಧ ಇಲ್ಲ ಎನ್ನುವಂತೆ ವರ್ತಿಸುತ್ತಿದ್ದಾರೆ. ಮುಡಾ ಹಗರಣದಲ್ಲೂ ಅದೇ ರೀತಿ ವರ್ತಿಸುತ್ತಿದ್ದಾರೆ ಎಂದು ಕಿಡಿಕಾರಿದರು.

ಮುಡಾ ಹಗರಣ ಸಂಬಂಧಿಸಿದಂತೆ ಪ್ರಾರಂಭದಲ್ಲಿ 14 ನಿವೇಶನಗಳನ್ನು ಹಿಂತಿರುಗಿಸಲು ಸಾಧ್ಯವಿಲ್ಲ. ಒಂದು ವೇಳೆ ಹಿಂತಿರುಗಿಸುವುದಾದರೆ ಆ ನಿವೇಶನಗಳ ಬೆಲೆ 62 ಕೋಟಿ ಅಂತ ಹೇಳಿದರು. ಆದರೆ ಇದೀಗ ನಿವೇಶನಗಳನ್ನು ಮುಡಾಗೆ ವಾಪಾಸ್‌ ನೀಡಿದ್ದಾರೆ. ಸಿದ್ದರಾಮಯ್ಯ ಅವರು ತಪ್ಪು ಮಾಡಿಲ್ಲ ಎನ್ನುವುದಾದರೆ ಯಾಕೆ ನಿವೇಶನಗಳನ್ನು ವಾಪಾಸ್‌ ಮುಡಾ ವಶಕ್ಕೆ ಕೊಡಬೇಕಿತ್ತು. ಮುಡಾ ಹಗರಣದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿದ್ದ ಅರ್ಜಿಯನ್ನು ಹೈಕೋರ್ಟ್‌ ಎತ್ತಿ ಹಿಡಿದಿದೆ. ಈ ಹಿಂದೆ ಮಾಜಿ ಮುಖ್ಯಂಮತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಮೇಲೆ ಬಂದಂತಹ ಇಂತಹದ್ದೇ ಆರೋಪವನ್ನ ಸಿಎಂ ಸಿದ್ದರಾಮಯ್ಯ ಖಂಡಿಸಿದರು ಎಂದು ವಿವರಿಸಿದರು.

ಬಿ.ಎಸ್‌.ಯಡಿಯೂರಪ್ಪ ಅವರಿಗೆ ಬಂದತಂಹ ಪರಿಸ್ಥಿತಿಯೇ ಇಂದು ಸಿದ್ದರಾಮಯ್ಯ ಅವರಿಗೆ ಬಂದಿದೆ. 2011 ರಲ್ಲಿ ಯಡಿಯೂರಪ್ಪ ಅವರು ಅವರ ಮಕ್ಕಳಿಗೆ ಕೊಟ್ಟ ನಿವೇಶನ ವಾಪಸ್ ಕೊಟ್ಟಾಗ ನೀವು ಅವರನ್ನು ನಿಂದಿಸುವ ಕೆಲಸ ಮಾಡಿದ್ದೀರಾ? ಈಗ ಅದೇ ಪರಿಸ್ಥಿತಿಯಲ್ಲಿ ನೀವು ನಿಂತಿದ್ದೀರಿ. ಒಟ್ಟಾರೆ ಒಂದು ವಿಷ ವರ್ತುಲದಲ್ಲಿ ಸಿದ್ದರಾಮಯ್ಯ ಅವರು ಸಿಕ್ಕಿಹಾಕಿಕೊಂಡಿದ್ದಾರೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ನಿನ್ನೆಯಿಂದ ಹೊಸ ತಿರುವು ಪಡೆದುಕೊಂಡಿದ್ದು, ಕೇಡುಗಾಲಕ್ಕೆ ನಾಯಿ ಮೊಟ್ಟೆ ಇಟ್ಟಂತೆ ಸಿಎಂ ಪತ್ನಿ ನಿವೇಶನ ವಾಪಸ್ ವಶಪಡಿಸಿಕೊಳ್ಳುವಂತೆ ಪತ್ರ ಬರೆದಿದ್ದಾರೆ. ಒಂದೇ ದಿನಗಳಲ್ಲಿ ನಿವೇಶನ ವಾಪಸ್ ಮಾಡುವ ಪಕ್ರಿಯೆಯಲ್ಲಿ ಸಿಎಂ ಪುತ್ರ ತೊಡಗಿದ್ದಾರೆ. ರಾಜ್ಯದಲ್ಲಿ ಪ್ರಜಾಪ್ರಭುತ್ವ, ಸಂವಿಧಾನದ ಬಗ್ಗೆ ದೊಡ್ಡದಾಗಿ ಮಾತನಾಡುವ ಸಿದ್ದರಾಮಯ್ಯ ದಸರಾ ಮಹೋತ್ಸವ ಯಾವುದೇ ಕಾರ್ಯಕ್ರಮದಲ್ಲಿ ಭಾಗವಹಿಸದೇ ರಾಜಿನಾಮೆ ನೀಡಬೇಕು. ರಾಜಿನಾಮೆ ನೀಡಿ ತನಿಖೆ ಎದುರಿಸಬೇಕು. 40 ವರ್ಷಗಳ ನಿಮ್ಮ ನಿಷ್ಕಳಂಕ ರಾಜಕಾರಣ ಮಾಡಿದ್ದೇನೆ ಎನ್ನುವುದಾದರೆ, ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

29 mins ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

31 mins ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

33 mins ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

4 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

4 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

4 hours ago