ಮೈಸೂರು: ನಾಳೆಯಿಂದ ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ನಾಳೆ ಸಂಜೆ 5.30ಕ್ಕೆ ವಿಶೇಷ ವಿಮಾನದ ಮೂಲಕ ಬೆಂಗಳೂರಿನಿಂದ ಮೈಸೂರಿಗೆ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದಾರೆ. ನಾಳೆ ಸಂಜೆ 7 ಗಂಟೆಗೆ ಸ್ಥಳೀಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ನಾಳೆ ಮೈಸೂರಿನಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ.
ಮೇ.14ರ ಬೆಳಿಗ್ಗೆ ಸಿಎಂ ಸಿದ್ದರಾಮಯ್ಯ ಅವರು ಸ್ಥಳೀಯ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲಿದ್ದಾರೆ. ಇದಾದ ಬಳಿಕ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಬೆಂಗಳೂರಿಗೆ ವಾಪಸ್ ತೆರಳಲಿದ್ದಾರೆ.





