ಮೈಸೂರು: ಸಿದ್ದರಾಮಯ್ಯ ಐದು ವರ್ಷ ಸಿಎಂ ಆಗಿರುತ್ತಾರೆ ಎಂದು ಎಂಎಲ್‌ಸಿ ಹಾಗೂ ಮಾಜಿ ಸಚಿವ ಕೆ.ಎನ್.ರಾಜಣ್ಣ ಪುತ್ರ ರಾಜೇಂದ್ರ ಹೇಳಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಐದು ವರ್ಷ ಸಿಎಂ ಆಗಿರಬೇಕೆಂಬುದು ನಮ್ಮ ಆಸೆಯಾಗಿದೆ. ಈಗಾಗಲೇ ಸಿಎಂ ಸಿದ್ದರಾಮಯ್ಯ ಬಜೆಟ್ ತಯಾರಿ ಆರಂಭಿಸಿದ್ದಾರೆ. ಹೈಕಮಾಂಡ್ ಮಾತಿಗೆ ನಾನು ಬದ್ಧ ಎಂದು ಕೂಡ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ನನ್ನ ಪ್ರಕಾರ ಸಿದ್ದರಾಮಯ್ಯ ಐದು ವರ್ಷ ಸಿಎಂ ಆಗಿರುತ್ತಾರೆ ಎಂದು ಹೇಳಿದರು.
ಇನ್ನು ಡಿ.ಕೆ.ಶಿವಕುಮಾರ್ ಸಿಎಂ ಆಗಲು ಯಾರದ್ದೂ ಕೂಡ ವಿರೋಧ ಇಲ್ಲ. ಹೈಕಮಾಂಡ್ ನಾಯಕರು ತೀರ್ಮಾನ ಮಾಡಬೇಕು ತಾನೇ? ನನ್ನ ತಂದೆ ರಾಜಣ್ಣ ಹಾಗೂ ಡಿಕೆಶಿ ನಡುವೆ ಜಗಳವೇನು ಇಲ್ಲ. ಅವರಿಬ್ಬರು ಹಳೆಯ ಸ್ನೇಹಿತರು. ರಾಜಣ್ಣ ಹಾಗೂ ಡಿ.ಕೆ.ಶಿವಕುಮಾರ್ ಇಬ್ಬರೂ ಚೆನ್ನಾಗಿದ್ದಾರೆ ಎಂದು ಸ್ಪಷ್ಟನೆ ನೀಡಿದರು.




