ಮೈಸೂರು: ಇನ್ನೂ ಎರಡು ವರ್ಷಗಳ ಕಾಲ ಸಿದ್ದರಾಮಯ್ಯನವರೇ ಸಿಎಂ ಆಗಿ ಮುಂದುವರಿಯಲಿದ್ದಾರೆ ಎಂದು ಗೃಹ ಸಚಿವ ಪರಮೇಶ್ವರ್ ಅವರು ಸಿಎಂ ಪರ ಬ್ಯಾಟಿಂಗ್ ಮಾಡಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ಸಿದ್ದರಾಮಯ್ಯ ಸಿಎಂ ಆಗಿದ್ದಾರೆ. ಸಿದ್ದರಾಮಯ್ಯನವರೇ ಇನ್ನೂ ಎರಡು ವರ್ಷ ಇರುತ್ತಾರೆ. 2013ರಲ್ಲಿ ಸಿದ್ದರಾಮಯ್ಯ 5 ವರ್ಷ ಸಿಎಂ ಎಂದು ಹೈಕಮಾಂಡ್ ಘೋಷಣೆ ಮಾಡಿರಲಿಲ್ಲ. ಆದರೂ ಅವರು ಐದು ವರ್ಷ ಸಿಎಂ ಆಗಿದ್ರು ತಾನೇ. ಈ ಬಾರಿಯೂ 2023ರಲ್ಲಿ ಸಿದ್ದರಾಮಯ್ಯ ಸಿಎಂ ಎಂದು ಹೈಕಮಾಂಡ್ ಘೋಷಣೆ ಮಾಡಿತ್ತು. ಅದರ ಅವಧಿ 2028, ಅದನ್ನ ಮುಗಿಸಬೇಕು ತಾನೇ. ಹೈಕಮಾಂಡ್ ನೀವೇ 5 ವರ್ಷ ಸಿಎಂ ಎಂದು ಪ್ರತ್ಯೇಕವಾಗಿ ಸ್ಪಷ್ಟೀಕರಣ ಕೊಡುವ ಅವಶ್ಯಕತೆ ಇಲ್ಲ. ಹೈಕಮಾಂಡ್ ಯಾವ ಗೊಂದಲಗಳನ್ನ ಸೃಷ್ಟಿ ಮಾಡಿಲ್ಲ. ಯಾರು ಏನೇ ಹೇಳಿದರು ಅದು ಮುಖ್ಯ ಅಲ್ಲ. ಹೈಕಮಾಂಡ್ ಯಾವತ್ತಾದರೂ ಸಿದ್ದರಾಮಯ್ಯ ಅವಧಿ ಇಷ್ಟು ಎಂದು ಹೇಳಿದ್ಯಾ? ಯಾವತ್ತಾದರೂ ಬದಲಾವಣೆ ಬಗ್ಗೆ ಮಾತನಾಡಿದ್ದಾರಾ?. ಅದರ ಅರ್ಥ ಆ ರೀತಿಯ ಯಾವ ಬೆಳವಣಿಗೆ ಇಲ್ಲ ಎಂದು. ಸಿಎಂ ಸ್ಥಾನ ಬದಲಾವಣೆ ಮಾಡಬೇಕಾಗಿರುವುದು ಹೈಕಮಾಂಡ್. ಹೈಕಮಾಂಡ್ ಯಾವತ್ತಾದರೂ ಇದರ ಬಗ್ಗೆ ಮಾತನಾಡಿದರೆ ಆಗ ಇದಕ್ಕೆ ಒಂದು ಅರ್ಥ ಬರುತ್ತದೆ. ಅಲ್ಲಿಯವರೆಗೆ ಯಾರು ಏನೇ ಮಾತನಾಡಿದ್ರು ಅದು ವೈಯಕ್ತಿಕ ಅಭಿಪ್ರಾಯ. ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿದ್ದಾರೆ, ಡಿಸಿಎಂ ಆಗಿದ್ದಾರೆ, ಅವರು ನಮ್ಮ ನಾಯಕರು.
ಅವರಿಗೆ ಯಾವ ಸಮಸ್ಯೆಯೂ ಆಗಿಲ್ಲ. ಸಿಎಂ ವಿಧಾನಸಭೆಯಲ್ಲೇ ಹೇಳಿದ್ದಾರೆ, ನಮ್ಮ ಎಲ್ಲಾ ಶಾಸಕರು ಸಿಎಂ ಸ್ಥಾನಕ್ಕೆ ಅರ್ಹರು ಎಂದು ಹೇಳಿದ್ದಾರೆ. ಅದರಲ್ಲಿ ನಾನು ಅರ್ಹ ಇನ್ನೊಬ್ಬರು ಎಂಬ ಪ್ರಶ್ನೆಯೇ ಬರುವುದಿಲ್ಲ. ಉಪಚುನಾವಣೆಯ ಫಲಿತಾಂಶಕ್ಕೂ ಬೇರೆ ವಿಚಾರಕ್ಕೆ ಸಂಬಂಧವೇ ಇಲ್ಲ ಎಂದು ಹೇಳಿದರು.
ಇನ್ನು ಉಪಚುನಾವಣೆ ಫಲಿತಾಂಶ ರಾಜ್ಯ ರಾಜಕೀಯದ ದಿಕ್ಸೂಚಿ ಅಲ್ಲ. ಉಪಚುನಾವಣೆಯ ಫಲಿತಾಂಶ ರಾಜ್ಯ ಸರ್ಕಾರಕ್ಕೆ ನೀಡುವ ಮಾರ್ಕ್ಸ್ ಕೂಡ ಅಲ್ಲ. ಅದರ ಫಲಿತಾಂಶದ ಮೇಲೆ ಯಾವ ಬದಲಾವಣೆಯೂ ಆಗುವುದಿಲ್ಲ. ಎರಡು ಕ್ಷೇತ್ರದಲ್ಲೂ ನಾವು ಗೆಲ್ಲುತ್ತೇವೆ. ಜನ ಪರವಾಗಿ ತೀರ್ಪು ಕೊಡುತ್ತಾರೆ. ಗ್ಯಾರೆಂಟಿ ಯೋಜನೆಗಳನ್ನ ಮೀರಿಯೂ ಈ ಸರ್ಕಾರದ ಆಡಳಿತ ದಕ್ಷತೆಗೆ ಜನ ಮತ ಹಾಕುತ್ತಾರೆ. ಬಿಜೆಪಿಯವರು ಇಲ್ಲ ಸಲ್ಲದ ಆರೋಪಗಳನ್ನ ಮಾಡುತ್ತಿದ್ದಾರೆ. ಆದರೆ ಜನ ನಮ್ಮ ಪರವಾಗಿ ಇದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇನ್ನು ಉಪಚುನಾವಣೆಯಲ್ಲಿ ಅವಹೇಳನ ಭಾಷಣ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನಮಗೆ ನಮ್ಮದೇ ಅದ ಸಂಸ್ಕಾರ ಇದೆ. ನಾವು ವೈಯಕ್ತಿಕವಾಗಿ ಅನಗತ್ಯ ನಿಂದನೆ, ಕೆಟ್ಟ ಪದ ಮಾಡಬಾರದು. ಇದನ್ನೆಲ್ಲ ಸಮಾಜ ಗಮನಿಸುತ್ತಾ ಇರುತ್ತದೆ. ಈ ರೀರಿ ನಡವಳಿಕೆ ಸರಿಯಲ್ಲ. ಹೊರಗೆ ಜನ ನಮ್ಮನ್ನ ಹೇಗೆ ನೋಡುತ್ತಾರೆ ಹೇಳಿ ಎಂದು ಪ್ರಶ್ನೆ ಮಾಡಿದರು.
ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್‌ಸಿ ನಜೀರ್ ಅಹಮ್ಮದ್ ಅವರು ರಾಜೀನಾಮೆ ನೀಡಿದ್ದಾರೆ. ನಜೀರ್ ಅಹಮ್ಮದ್ ಅವರು ಸಿಎಂ…
ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…
ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…
ಮೈಸೂರಿನ ಮಾನಸಗಂಗೋತ್ರಿಯಿಂದ ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿಗೆ (ಎಸ್‌ಜೆಸಿಇ) ಸಂಪರ್ಕ ಕಲ್ಪಿಸುವ ರಸ್ತೆಯ ಎಡ ಬದಿಯಲ್ಲಿ ಇರುವ ಮರವೊಂದರ ಕೊಂಬೆ…
ಶ್ರೇಷ್ಠ ಸಂವಿಧಾನದ ಮೂಲಕ ಶೋಷಿತ ಸಮುದಾಯಗಳಿಗೆ ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮೀಸಲು ಸೌಲಭ್ಯ ಕಲ್ಪಿಸುವ ಮೂಲಕ ಅವರ ಬಾಳಿಗೆ…
ಸಿ.ಹರಕುಮಾರ್, ಬರಹಗಾರ ಬಾಬಾ ಸಾಹೇಬ್‌ರ ಧಾರ್ಮಿಕ ನಿಲುವು ಅರಿಯಲು ಬಹುತೇಕರು ವಿಫಲ ಭಾರತದ ಭಾಗ್ಯವಿಧಾತ ಮತ್ತು ಸಂವಿಧಾನ ಕರ್ತೃ ಡಾ.ಬಿ.ಆರ್.ಅಂಬೇಡ್ಕರ್…