ಮೈಸೂರು ನಗರ

ಇನ್ನೂ ಎರಡು ವರ್ಷ ಸಿದ್ದರಾಮಯ್ಯನವರೇ ಸಿಎಂ: ಗೃಹ ಸಚಿವ ಪರಮೇಶ್ವರ್‌

ಮೈಸೂರು: ಇನ್ನೂ ಎರಡು ವರ್ಷಗಳ ಕಾಲ ಸಿದ್ದರಾಮಯ್ಯನವರೇ ಸಿಎಂ ಆಗಿ ಮುಂದುವರಿಯಲಿದ್ದಾರೆ ಎಂದು ಗೃಹ ಸಚಿವ ಪರಮೇಶ್ವರ್‌ ಅವರು ಸಿಎಂ ಪರ ಬ್ಯಾಟಿಂಗ್‌ ಮಾಡಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ಸಿದ್ದರಾಮಯ್ಯ ಸಿಎಂ ಆಗಿದ್ದಾರೆ. ಸಿದ್ದರಾಮಯ್ಯನವರೇ ಇನ್ನೂ ಎರಡು ವರ್ಷ ಇರುತ್ತಾರೆ. 2013ರಲ್ಲಿ ಸಿದ್ದರಾಮಯ್ಯ 5 ವರ್ಷ ಸಿಎಂ ಎಂದು ಹೈಕಮಾಂಡ್ ಘೋಷಣೆ ಮಾಡಿರಲಿಲ್ಲ. ಆದರೂ ಅವರು ಐದು ವರ್ಷ ಸಿಎಂ ಆಗಿದ್ರು ತಾನೇ. ಈ ಬಾರಿಯೂ 2023ರಲ್ಲಿ ಸಿದ್ದರಾಮಯ್ಯ ಸಿಎಂ ಎಂದು ಹೈಕಮಾಂಡ್ ಘೋಷಣೆ ಮಾಡಿತ್ತು. ಅದರ ಅವಧಿ 2028, ಅದನ್ನ ಮುಗಿಸಬೇಕು ತಾನೇ. ಹೈಕಮಾಂಡ್ ನೀವೇ 5 ವರ್ಷ ಸಿಎಂ ಎಂದು ಪ್ರತ್ಯೇಕವಾಗಿ ಸ್ಪಷ್ಟೀಕರಣ ಕೊಡುವ ಅವಶ್ಯಕತೆ ಇಲ್ಲ. ಹೈಕಮಾಂಡ್ ಯಾವ ಗೊಂದಲಗಳನ್ನ ಸೃಷ್ಟಿ ಮಾಡಿಲ್ಲ. ಯಾರು ಏನೇ ಹೇಳಿದರು ಅದು ಮುಖ್ಯ ಅಲ್ಲ. ಹೈಕಮಾಂಡ್ ಯಾವತ್ತಾದರೂ ಸಿದ್ದರಾಮಯ್ಯ ಅವಧಿ ಇಷ್ಟು ಎಂದು ಹೇಳಿದ್ಯಾ? ಯಾವತ್ತಾದರೂ ಬದಲಾವಣೆ ಬಗ್ಗೆ ಮಾತನಾಡಿದ್ದಾರಾ?. ಅದರ ಅರ್ಥ ಆ ರೀತಿಯ ಯಾವ ಬೆಳವಣಿಗೆ ಇಲ್ಲ ಎಂದು. ಸಿಎಂ ಸ್ಥಾನ ಬದಲಾವಣೆ ಮಾಡಬೇಕಾಗಿರುವುದು ಹೈಕಮಾಂಡ್. ಹೈಕಮಾಂಡ್ ಯಾವತ್ತಾದರೂ ಇದರ ಬಗ್ಗೆ ಮಾತನಾಡಿದರೆ ಆಗ ಇದಕ್ಕೆ ಒಂದು ಅರ್ಥ ಬರುತ್ತದೆ‌. ಅಲ್ಲಿಯವರೆಗೆ ಯಾರು ಏನೇ ಮಾತನಾಡಿದ್ರು ಅದು ವೈಯಕ್ತಿಕ ಅಭಿಪ್ರಾಯ. ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿದ್ದಾರೆ, ಡಿಸಿಎಂ ಆಗಿದ್ದಾರೆ, ಅವರು ನಮ್ಮ ನಾಯಕರು.
ಅವರಿಗೆ ಯಾವ ಸಮಸ್ಯೆಯೂ ಆಗಿಲ್ಲ. ಸಿಎಂ ವಿಧಾನಸಭೆಯಲ್ಲೇ ಹೇಳಿದ್ದಾರೆ, ನಮ್ಮ ಎಲ್ಲಾ ಶಾಸಕರು ಸಿಎಂ ಸ್ಥಾನಕ್ಕೆ ಅರ್ಹರು ಎಂದು ಹೇಳಿದ್ದಾರೆ. ಅದರಲ್ಲಿ ನಾನು ಅರ್ಹ ಇನ್ನೊಬ್ಬರು ಎಂಬ ಪ್ರಶ್ನೆಯೇ ಬರುವುದಿಲ್ಲ. ಉಪಚುನಾವಣೆಯ ಫಲಿತಾಂಶಕ್ಕೂ ಬೇರೆ ವಿಚಾರಕ್ಕೆ ಸಂಬಂಧವೇ ಇಲ್ಲ ಎಂದು ಹೇಳಿದರು.

ಇನ್ನು ಉಪಚುನಾವಣೆ ಫಲಿತಾಂಶ ರಾಜ್ಯ ರಾಜಕೀಯದ ದಿಕ್ಸೂಚಿ ಅಲ್ಲ. ಉಪಚುನಾವಣೆಯ ಫಲಿತಾಂಶ ರಾಜ್ಯ ಸರ್ಕಾರಕ್ಕೆ ನೀಡುವ ಮಾರ್ಕ್ಸ್ ಕೂಡ ಅಲ್ಲ. ಅದರ ಫಲಿತಾಂಶದ ಮೇಲೆ ಯಾವ ಬದಲಾವಣೆಯೂ ಆಗುವುದಿಲ್ಲ. ಎರಡು ಕ್ಷೇತ್ರದಲ್ಲೂ ನಾವು ಗೆಲ್ಲುತ್ತೇವೆ. ಜನ ಪರವಾಗಿ ತೀರ್ಪು ಕೊಡುತ್ತಾರೆ. ಗ್ಯಾರೆಂಟಿ ಯೋಜನೆಗಳನ್ನ ಮೀರಿಯೂ ಈ ಸರ್ಕಾರದ ಆಡಳಿತ ದಕ್ಷತೆಗೆ ಜನ ಮತ ಹಾಕುತ್ತಾರೆ. ಬಿಜೆಪಿಯವರು ಇಲ್ಲ ಸಲ್ಲದ ಆರೋಪಗಳನ್ನ ಮಾಡುತ್ತಿದ್ದಾರೆ. ಆದರೆ ಜನ ನಮ್ಮ ಪರವಾಗಿ ಇದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇನ್ನು ಉಪಚುನಾವಣೆಯಲ್ಲಿ ಅವಹೇಳನ ಭಾಷಣ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನಮಗೆ ನಮ್ಮದೇ ಅದ ಸಂಸ್ಕಾರ ಇದೆ. ನಾವು ವೈಯಕ್ತಿಕವಾಗಿ ಅನಗತ್ಯ ನಿಂದನೆ, ಕೆಟ್ಟ ಪದ ಮಾಡಬಾರದು. ಇದನ್ನೆಲ್ಲ ಸಮಾಜ ಗಮನಿಸುತ್ತಾ ಇರುತ್ತದೆ. ಈ ರೀರಿ ನಡವಳಿಕೆ ಸರಿಯಲ್ಲ. ಹೊರಗೆ ಜನ ನಮ್ಮನ್ನ ಹೇಗೆ ನೋಡುತ್ತಾರೆ ಹೇಳಿ ಎಂದು ಪ್ರಶ್ನೆ ಮಾಡಿದರು.

 

ಆಂದೋಲನ ಡೆಸ್ಕ್

Recent Posts

ವರ್ತಕರಿಗೆ ಹಬ್ಬದ ನಿರಾಳತೆ: ದೀಪಾವಳಿ ನಂತರಕ್ಕೆ UPI ಮರ್ಚೆಂಟ್‌ ಶುಲ್ಕ ಜಾರಿ ಮುಂದೂಡಿಕೆ

ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್‌ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್‌ ಪಾವತಿಗಳ ಮೇಲಿನ…

12 hours ago

ಸ್ಟಿಂಗ್ ಆಪರೇಷನ್ ಬಗ್ಗೆ ಕುಮಾರಸ್ವಾಮಿಯನ್ನೇ ಕೇಳಿ: ಸಚಿವ ಪುಟ್ಟರಂಗಶೆಟ್ಟಿ

ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…

13 hours ago

ಸ್ಟಿಂಗ್ ಆಪರೇಷನ್ ಆರೋಪ: ಸಾಕ್ಷಿ ಬಿಡುಗಡೆಗೆ ಶಾಸಕ ತನ್ವೀರ್ ಸೇಠ್ ಒತ್ತಾಯ

ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…

14 hours ago

ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…

14 hours ago

ಕಾಡಾನೆ ದಾಳಿ: ರೈತ ಸಾವು

ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…

14 hours ago

ಓದುಗರ ಪತ್ರ: ರಾಜಕಾರಣಿಗಳದ್ದು ‘ಆಚಾರವಿಲ್ಲದ ನಾಲಿಗೆ’ ಆಗಬಾರದಲ್ಲವೇ?

ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…

17 hours ago