Mysore
23
haze

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರಿಯುತ್ತಾರೆ: ಸಚಿವ ಎಚ್.ಸಿ.ಮಹದೇವಪ್ಪ

ಮೈಸೂರು: ರಾಜ್ಯದಲಲಿ ನಾಯಕತ್ವ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಎಚ್.ಸಿ.ಮಹದೇವಪ್ಪ ಪ್ರತಿಕ್ರಿಯೆ ನೀಡಿದ್ದು, ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಇದ್ದಾರೆ, ಮುಂದಿನ ದಿನಗಳಲ್ಲಿಯೂ ಅವರೇ ಮುಂದುವರೆಯುತ್ತಾರೆ. ಆಯಾಯ ಕಾಲಕ್ಕೆ ತಕ್ಕಂತೆ ರಾಜಕೀಯ ನಿರ್ಧಾರಗಳನ್ನು ನಮ್ಮ ಹೈಕಮಾಂಡ್ ತೆಗೆದುಕೊಳ್ಳುತ್ತದೆ. ನಮಗೆ ಹೈಕಮಾಂಡ್ ಇದೆ. ಹೈಕಮಾಂಡ್ ಎಲ್ಲಾ ನಿರ್ಧಾರಗಳನ್ನು ಮಾಡುತ್ತದೆ. ಹೈಕಮಾಂಡ್ ಬಿಟ್ಟು ಉಳಿದವರು ಏನೇ ಮಾತನಾಡಿದರು ಅದರಲ್ಲಿ ಪ್ರಯೋಜನವೂ ಇಲ್ಲ, ಅರ್ಥವೂ ಇಲ್ಲ ಎಂದು ಹೇಳಿದರು.

ಇನ್ನು ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಯಶಸ್ವಿಯಾದ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಅಭಿನಂದನೆ ಸಲ್ಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಅವರು, ಈ ಬಾರಿಯ ದಸರಾ ಮಹೋತ್ಸವ ಬಹಳ ಅಚ್ಚುಕಟ್ಟಾಗಿ ಜರುಗಿತು. ಇದು ಜನರ ದಸರಾ ಆಗಿ ಸಂವಿಧಾನ ಪೀಠಿಕೆ ಮೊದಲ ಸಾಲಿನಂತೆ ಭಾರತೀಯರಾದ ನಾವು ಎನ್ನುವ ಆಶಯದಂತೆ ನೆರವೇರಿತು. 11 ದಿನದಲ್ಲಿ ಒಂದು ಸಾವಿರ ಟನ್ ಕಸ ಸಂಗ್ರಹ ಆಗಿದೆ ಪೌರ ಕಾರ್ಮಿಕರ ಪರಿಶ್ರಮದಿಂದ ಇಡೀ ನಗರ ಸ್ವಚ್ಛವಾಗಿದೆ. ಪೌರಕಾರ್ಮಿಕರಿಗೆ ನನ್ನ ಮೊದಲ ಕೃತಜ್ಞತೆಗಳು. ಜಿಲ್ಲಾಡಳಿತ, ಪೊಲೀಸ್ ಇಲಾಖೆ ಎಲ್ಲರೂ ತಮ್ಮ ಮನೆಯ ಹಬ್ಬದ ರೀತಿ ದಸರಾ ಮಾಡಿದರು. ಆರಂಭದಲ್ಲಿ ಸ್ವಲ್ಪ ಗೊಂದಲ ಇತ್ತು. ಅದನ್ನೆಲ್ಲಾ ಬಗೆಹರಿಸಿಕೊಂಡು ಯಶಸ್ವಿಯಾಗಿ ದಸರಾ ಮಾಡಿದ್ದೇವೆ. ನಮಗೆ ದಸರಾದಲ್ಲಿ ಯಾವ ರಾಜಕೀಯ ಅಜೆಂಡಾ ಇರಲಿಲ್ಲ. ಈಗಾಗಿ ಆತಂಕವಿಲ್ಲದೆ ದಸರಾ ಮಾಡಿದ್ದೇವೆ ಎಂದು ಸಂತಸ ವ್ಯಕ್ತಪಡಿಸಿದರು.

ಇದನ್ನೂ ಓದಿ:-ಅಕ್ಟೋಬರ್.‌9ರಂದು ಹಾಸನಾಂಬ ದೇವಾಲಯ ಓಪನ್‌

ಇನ್ನು ಮೊಮ್ಮಗನನ್ನು ತೆರದ ಜೀಪ್‌ನಲ್ಲಿ ಕರೆದುಕೊಂಡು ಹೋಗಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಅಲ್ಲಿ ಯಾವ ಪ್ರೋಟೊಕಾಲ್ ಕೂಡ ಉಲ್ಲಂಘನೆಯಾಗಿಲ್ಲ. ಅದು ಪ್ರೋಟೊಕಾಲ್ ವ್ಯಾಪ್ತಿಗೆ ಬರುವುದೇ ಇಲ್ಲ. ಅದು ಪೆರೇಡ್ ಅಲ್ಲ. ಅಲ್ಲಿ ಯಾವ ಧ್ವಜ ವಂದನೆಯೂ ಇರಲಿಲ್ಲ. ಕೇವಲ ಜನರಿಗೆ ವಂದನೆ ಸಲ್ಲಿಸಲು ಎಲ್ಲರೂ ಒಟ್ಟಾಗಿ ಹೋದೆವು.
ದಸರಾ ಅಚರಣೆ ಬಗ್ಗೆ ಗೊತ್ತಿಲ್ಲದವರು ಈ ರೀತಿಯ ಸುದ್ದಿ ಹಬ್ಬಿಸುತ್ತಾರೆ ಅಷ್ಟೇ ಎಂದು ಹೇಳಿದರು.

Tags:
error: Content is protected !!