ಮೈಸೂರು: ಹೈಕಮಾಂಡ್ ಯಾವುದೇ ಗಡುವು ನೀಡಿಲ್ಲ. ಹಾಗಾಗಿ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
ಸಿಎಂ ಹಾಗೂ ಡಿಸಿಎಂ ಹೈಕಮಾಂಡ್ ಭೇಟಿ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 5 ವರ್ಷಗಳ ಕಾಲ ಅವರೇ ಮುಂದುವರಿಯುತ್ತಾರೆ. ಹೈಕಮಾಂಡ್ ಯಾವುದೇ ಗಡುವು ನೀಡಿಲ್ಲ. ಇದರ ಬಗ್ಗೆ ಯಾವುದೇ ಚರ್ಚೆಯೂ ಆಗಿಲ್ಲ ಎಂದು ಹೇಳಿದರು.
ಇದನ್ನೂ ಓದಿ:- ಮಾಜಿ ಸಚಿವ ಬಿ.ನಾಗೇಂದ್ರಗೂ ಬೆಳ್ಳಂಬೆಳಿಗ್ಗೆ ಶಾಕ್ ಕೊಟ್ಟ ಇಡಿ
ಇನ್ನು ಬೆಂಗಳೂರು ಕಾಲ್ತುಳಿತ ದುರಂತ ಪ್ರಕರಣ ಖಂಡಿಸಿ ನಾಳೆ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿಯವರಿಗೆ ಪ್ರತಿಭಟನೆ ನಡೆಸುವ ಯಾವುದೇ ನೈತಿಕತೆಯಿಲ್ಲ. ಕುಂಭಮೇಳದಲ್ಲಿ ಕಾಲ್ತುಳಿತ ಆಯ್ತಲ್ಲ ಯಾರು ರಾಜೀನಾಮೆ ಕೊಟ್ರು.? ಎಂದು ಪ್ರಶ್ನಿಸಿದ ಅವರು, ಈಗಾಗಲೇ ಪ್ರಕರಣ ಕುರಿತು ತನಿಖೆ ನಡೆಯುತ್ತಿದೆ. ಸರ್ಕಾರ ಏನು ಕ್ರಮ ಜರುಗಿಸಬೇಕು ಅದನ್ನು ಜರುಗಿಸಿದೆ. ಸುಖಾ ಸುಮ್ಮನೆ ಬಿಜೆಪಿಯವರು ಸುಳ್ಳು ಆರೋಪ ಮಾಡೋದು ಸರಿಯಲ್ಲ ಎಂದು ಕಿಡಿಕಾರಿದರು.