ಮೈಸೂರು ನಗರ

ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿಯುತ್ತಾರೆ: ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಹೈಕಮಾಂಡ್‌ ಯಾವುದೇ ಗಡುವು ನೀಡಿಲ್ಲ. ಹಾಗಾಗಿ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

ಸಿಎಂ ಹಾಗೂ ಡಿಸಿಎಂ ಹೈಕಮಾಂಡ್‌ ಭೇಟಿ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 5 ವರ್ಷಗಳ ಕಾಲ ಅವರೇ ಮುಂದುವರಿಯುತ್ತಾರೆ. ಹೈಕಮಾಂಡ್ ಯಾವುದೇ ಗಡುವು ನೀಡಿಲ್ಲ. ಇದರ ಬಗ್ಗೆ ಯಾವುದೇ ಚರ್ಚೆಯೂ ಆಗಿಲ್ಲ ಎಂದು ಹೇಳಿದರು.

ಇದನ್ನೂ ಓದಿ:-  ಮಾಜಿ ಸಚಿವ ಬಿ.ನಾಗೇಂದ್ರಗೂ ಬೆಳ್ಳಂಬೆಳಿಗ್ಗೆ ಶಾಕ್‌ ಕೊಟ್ಟ ಇಡಿ

ಇನ್ನು ಬೆಂಗಳೂರು ಕಾಲ್ತುಳಿತ ದುರಂತ ಪ್ರಕರಣ ಖಂಡಿಸಿ ನಾಳೆ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿಯವರಿಗೆ ಪ್ರತಿಭಟನೆ ನಡೆಸುವ ಯಾವುದೇ ನೈತಿಕತೆಯಿಲ್ಲ. ಕುಂಭಮೇಳದಲ್ಲಿ ಕಾಲ್ತುಳಿತ ಆಯ್ತಲ್ಲ ಯಾರು ರಾಜೀನಾಮೆ ಕೊಟ್ರು.? ಎಂದು ಪ್ರಶ್ನಿಸಿದ ಅವರು, ಈಗಾಗಲೇ ಪ್ರಕರಣ ಕುರಿತು ತನಿಖೆ ನಡೆಯುತ್ತಿದೆ. ಸರ್ಕಾರ ಏನು ಕ್ರಮ ಜರುಗಿಸಬೇಕು ಅದನ್ನು ಜರುಗಿಸಿದೆ. ಸುಖಾ ಸುಮ್ಮನೆ ಬಿಜೆಪಿಯವರು ಸುಳ್ಳು ಆರೋಪ ಮಾಡೋದು ಸರಿಯಲ್ಲ ಎಂದು ಕಿಡಿಕಾರಿದರು.

ಆಂದೋಲನ ಡೆಸ್ಕ್

Recent Posts

ಅಡಿಯ ಜನಾಂಗದ ಕಾಡಿನ ಮಕ್ಕಳು ನನ್ನ ಕಾಪಾಡಿದರು….

ಕೊಡಗಿನಲ್ಲಿ ಕಾಡುಪಾಲಾಗಿದ್ದ ಕೇರಳದ ಶರಣ್ಯ ಅನುಭವ ಕಥನ ನಾನು ಶರಣ್ಯ. ಕೇರಳದ ಕೋಝಿಕೋಡ್ ಜಿಲ್ಲೆಯ ನಾದಾಪುರಂನ ಯುವತಿ. ಕೊಚ್ಚಿಯಲ್ಲಿ ಐಟಿ…

2 hours ago

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ ಮಾತುಕತೆ: ಇರಾನಿನ ಕೆಲ ಬೇಡಿಕೆಗಳಿಗೆ ಅಮೇರಿಕಾ ತಾತ್ವಿಕ ಒಪ್ಪಿಗೆ

ಇಸ್ಲಾಮಾಬಾದ್:‌ ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸಲು ಇಸ್ಲಾಮಾಬಾದ್‌ನಲ್ಲಿ ಅಮೇರಿಕಾ-ಇರಾನ್‌ ನಡುವೆ ಕದನ ವಿರಾಮ ಮಾತುಕತೆ ನಡೆದಿದೆ. ಸಂಸದೀಯ ಸ್ಪೀಕರ್‌ ಮೊಹಮ್ಮದ್‌…

12 hours ago

ಬೆಂಗಳೂರಿನಲ್ಲಿ ದಾಖಲೆ ಪ್ರಮಾಣದ ಉಷ್ಣಾಂಶ: ಜನತೆಗೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್‌ ವೇವ್‌ ಎಚ್ಚರಿಕೆ…

15 hours ago

ಆರು ಹಸುಗಳ ಸಜೀವ ದಹನ ಪ್ರಕರಣ: ಆರೋಪಿ ಬಂಧನ

ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…

15 hours ago

ಅಮರನಾಥ ಯಾತ್ರೆಗೆ ಏಪ್ರಿಲ್.15ರಿಂದ ನೋಂದಣಿ‌

ನವದೆಹಲಿ: ಇದೇ ಏಪ್ರಿಲ್.‌15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…

15 hours ago

ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ

ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…

15 hours ago